ನಮ್ಮ ಜೀವನ ಬೀದಿಪಾಲು ಮಾಡಬೇಡಿ-ರಸ್ತೆಬದಿ ವ್ಯಾಪಾರಸ್ಥರ ಅಳಲು

ಅಪಘಾತ ತಡೆ, ವಾಹನ ದಟ್ಟಣೆ ನಿಯಂತ್ರಣ, ಸರ್ಕಾರಿ ಜಾಗ ಉಳಿಸುವ ನಿಟ್ಟಿನಲ್ಲಿ ನಗರದ ಪ್ರಮುಖ ರಸ್ತೆ ಬದಿಗಳಲ್ಲಿ ಅನಧಿಕೃತವಾಗಿ ನಿರ್ಮಾಣವಾಗಿದ್ದ ಅಂಗಡಿಗಳನ್ನು ಭಾರೀ ವಿರೋಧದ ನಡುವೆಯೂ ತೆರವುಗೊಳಿಸಲಾಗಿದೆ.

ರಸ್ತೆ ಬದಿ ವ್ಯಾಪಾರಸ್ಥರು ತಮ್ಮ ವ್ಯಾಪಾರ ಮುಂದುವರಿಸಲು ನಗರಸಭೆ ವತಿಯಿಂದ ಪರ್ಯಾಯ ವ್ಯವಸ್ಥೆ ಮಾಡದೇ ಇರುವುದು ಈಗ ಆಕ್ರೋಶಕ್ಕೆ ಕಾರಣವಾಗಿದೆ.

ನಾವು ಸುಮಾರು ವರ್ಷಗಳಿಂದ ವ್ಯಾಪಾರವನ್ನೆ ನಂಬಿ ಜೀವನ ನಡೆಸುತ್ತಿದ್ದೇವೆ. ವ್ಯಾಪಾರ ಬಿಟ್ಟರೆ ನಮಗೆ ಏನೂ ಗೊತ್ತಿಲ್ಲ, ನಾವು ಅವಿದ್ಯಾವಂತರು, ಕಡುಬಡವರು ಕೂಡ ಹೌದು, ಆದರೆ ನಮ್ಮ ಮಕ್ಕಳು ನಮ್ಮಂತೆಯೇ ಅವಿದ್ಯಾವಂತರಾಗಿ, ಕಡುಬಡವರಾಗಿ ಇರಬಾರದು ಎರಡಕ್ಷರ ಕಲಿತು ಒಂದೊಳ್ಳೆ ಹುದ್ದೆ ಪಡೆದು ಉತ್ತಮ ಭವಿಷ್ಯ ರೂಪಿಸಿಕೊಳ್ಳಲಿ ಎಂದು ನಮ್ಮ ಆಸೆ. ಆದರೆ ನಮ್ಮ ಆಸೆ ನಿರಾಸೆಯಾಗುವ ಭಯದಲ್ಲಿದ್ದೇವೆ ಎಂದು ರಸ್ತೆ ಬದಿ ವ್ಯಾಪಾರಸ್ಥರು ತಮ್ಮ ಅಳಲು ತೋಡಿಕೊಂಡಿದ್ದಾರೆ.

ಹೌದು ಎಲ್ಲರ ಪ್ರಾಣವೂ ಅತ್ಯಮೂಲ್ಯ, ಅಪಘಾತಗಳಿಂದ ಸಾವಿಗೀಡಾದವರ ಬಗ್ಗೆ ನಮಗೂ ನೋವು, ಅನುಕಂಪ‌, ಸಂಕಟ ಇದೆ. ಆದರೆ ರಸ್ತೆಬದಿ ವ್ಯಾಪಾರಸ್ಥರಿಂದಲೇ ಅಪಘಾತಗಳು ಆಗುತ್ತದೆ ಎನ್ನುವುದು ಸರಿಯಲ್ಲ, ಬದಲಾಗಿ ವಾಹನ ಸವಾರರು ಸಂಚಾರಿ ನಿಯಮ ಪಾಲನೆ ಮಾಡದೇ ಅಜಾಗುರಕತೆಯಿಂದ ವಾಹನ ಚಲಾಯಿಸುವುದು, ಅವೈಜ್ಞಾನಿಕ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಂದ ಸೇರಿದಂತೆ ನಾನಾ ರೀತಿಯ ಕಾರಣಗಳಿಂದ ಅಪಘಾತಗಳು ಸಂಭವಿಸುತ್ತವೆ. ಎಲ್ಲರಿಗೂ ಪ್ರಾಣ ಇರುವಂತೆ ನಮಗೂ ಪ್ರಾಣ ಇದೆ. ನಮ್ಮ ಪ್ರಾಣದ ಬಗ್ಗೆಯೂ ಅಧಿಕಾರಿಗಳು, ಜನಪ್ರತಿನಿಧಿಗಳು ಯೋಚನೆ ಮಾಡಬೇಕು ಎಂದು ರಸ್ತೆ ಬದಿ ವ್ಯಾಪಾರಸ್ಥರು ಆಗ್ರಹಿಸಿದರು.

ಯಾರೋ ಪ್ರಭಾವಿಗಳ ಮಾತಿಗೆ ಅಧಿಕಾರಿಗಳು ಮಣಿದು ರಸ್ತೆಬದಿ ವ್ಯಾಪಾರಸ್ಥರನ್ನು ಬೀದಿಗೆ ತಂದಿದ್ದಾರೆ. ಅಧಿಕಾರಿಗಳು ತಮ್ಮ ಅಧಿಕಾರ ದುರುಪಯೋಗಪಡಿಸಿಕೊಂಡು ಪಕ್ಷಪಾತ, ದಬ್ಬಾಳಿಕೆಯಿಂದ ಅಂಗಡಿಗಳನ್ನು ತೆರವುಗೊಳಿಸಿದ್ದಾರೆ ಎಂದು ಆರೋಪಿಸಿದರು.

ವ್ಯಾಪಾರ ಮಾಡಲು ಪರ್ಯಾಯ ವ್ಯವಸ್ಥೆ ಕಲ್ಪಿಸುವಂತೆ ಒತ್ತಾಯಿಸಲು ಇಂದು ಬೆಳಿಗ್ಗೆ ಬೃಹತ್ ಜಾಥಾ ಮೂಲಕ ನಗರಸಭೆ ಕಚೇರಿಗೆ ತೆರಳಿ ಅಧಿಕಾರಿಗಳಿಗೆ ಮನವಿ ಮಾಡಲಿದ್ದೇವೆ ಎಂದು ತಿಳಿಸಿದ್ದಾರೆ.

Ramesh Babu

Journalist

Recent Posts

ಸ್ಪರ್ಧಾತ್ಮಕ ಜಗತ್ತಿಗೆ ಮಕ್ಕಳನ್ನು ಅಣಿಗೊಳಿಸಿ- ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ವಿಜೇತ ನೀಲಕಂಠ ಗವಾಂಕರ್ ಸಲಹೆ

ಜಗತ್ತು ದಿನದಿಂದ ದಿನಕ್ಕೆ ವೇಗವಾಗಿ ಬದಲಾಗುತ್ತಿದ್ದು, ಹೆಚ್ಚುತ್ತಿರುವ ಸ್ಪರ್ಧೆಯನ್ನು ಎದುರಿಸುವ ಸಾಮರ್ಥ್ಯವನ್ನು ಮಕ್ಕಳಲ್ಲಿ ಬೆಳೆಸಲು ಪೋಷಕರು ಹಾಗೂ ಶಿಕ್ಷಕರು ಒಟ್ಟಾಗಿ…

4 hours ago

ಭಾರತೀಯರ ಆಹಾರ ವೈವಿಧ್ಯತೆ…. ರುಚಿ – ತೃಪ್ತಿ – ಸಮಾನತೆ…..

ಭಾರತೀಯರ ಆಹಾರ ವೈವಿಧ್ಯತೆ..... ರುಚಿ - ತೃಪ್ತಿ - ಸಮಾನತೆ..... ಅಡುಗೆ ಅನುಭವದ ಮೂಸೆಯೊಳಗೆ ಬೆಳೆದು ಬರುವ ವಿಜ್ಞಾನವೆಂಬ ಕಲೆ....…

14 hours ago

ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆ: ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

2026-27 ಸಾಲಿಗೆ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನ…

1 day ago

ಕೊಡಿಪಾಳ್ಯ ಬಳಿ ಕ್ಯಾಂಟರ್ ಪಲ್ಟಿ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಕೊಡಿಪಾಳ್ಯ ಸಮೀಪ ಕ್ಯಾಂಟರ್‌ವೊಂದು ಪಲ್ಟಿಯಾಗಿ ಬಿದ್ದ ಘಟನೆ ನಡೆದಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.…

1 day ago

ಮೊಬೈಲ್ ಕಳೆದುಹೋದರೆ ಗಾಬರಿ ಬೇಡ: ತಕ್ಷಣದ ಕ್ರಮವೇ ರಕ್ಷಣೆ: ಮೊಬೈಲ್‌ ಕಳೆದುಹೋದ 10 ನಿಮಿಷಗಳಲ್ಲಿ ಮಾಡಬೇಕಾದ 7 ಕೆಲಸಗಳು ಇಲ್ಲಿವೆ ನೋಡಿ…

ಬೆಂಗಳೂರು ಗ್ರಾಮಾಂತರ: ಮೊಬೈಲ್‌ ಫೋನ್‌ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್‌ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್‌ ಕೇವಲ ಸಂಪರ್ಕ…

1 day ago

ಎಸ್ಐಆರ್ ಅಕ್ರಮ ಹಾಗೂ ಬರ ಪರಿಹಾರ ವಿಳಂಬ: ಕೇಂದ್ರ ಮತ್ತು ವಿಪಕ್ಷದ ವಿರುದ್ಧ ಸಚಿವ ಚಲುವರಾಯಸ್ವಾಮಿ ಆಕ್ರೋಶ

ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…

1 day ago