ನಮ್ಮ ಮೆಟ್ರೋಗೆ “ಬಸವ ಮೆಟ್ರೋ” ಎಂದು ನಾಮಕರಣ ಮಾಡುವ ಬಗ್ಗೆ ಕೇಂದ್ರಕ್ಕೆ ಶಿಫಾರಸ್ಸು ಮಾಡುತ್ತೇನೆ- ಸಿಎಂ ಸಿದ್ದರಾಮಯ್ಯ

ನಮ್ಮ ಮೆಟ್ರೋಗೆ “ಬಸವ ಮೆಟ್ರೋ” ಎಂದು ನಾಮಕರಣ ಮಾಡುವ ಬಗ್ಗೆ ಕೇಂದ್ರಕ್ಕೆ ಶಿಫಾರಸ್ಸು ಮಾಡುತ್ತೇನೆ. ಇದು ಪೂರ್ಣವಾಗಿ ರಾಜ್ಯ ಸರ್ಕಾರದ ಯೋಜನೆ ಆಗಿದ್ದರೆ ಇವತ್ತೇ “ಬಸವ ಮೆಟ್ರೋ” ಎಂದು ಘೋಷಿಸಿ ಬಿಡುತ್ತಿದ್ದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ವಿಶ್ವಗುರು ಬಸವಣ್ಣ ಅವರನ್ನು “ಕರ್ನಾಟಕ ಸಾಂಸ್ಕೃತಿಕ ನಾಯಕ” ಎಂದು ಘೋಷಿಸಿದ ವರ್ಷಾಚರಣೆ ಸಂದರ್ಭದಲ್ಲಿ ಆಯೋಜಿಸಲಾಗಿದ್ದ ‘ಬಸವ ಸಂಸ್ಕೃತಿ ಅಭಿಯಾನ-2025’ ರ ಸಮಾರೋಪ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಾತನಾಡಿದರು.

ನಮ್ಮಲ್ಲಿ ಅನೇಕ ಜಾತಿ, ಅನೇಕ‌ ಧರ್ಮಗಳಿವೆ. ಚಾತುವರ್ಣ ವ್ಯವಸ್ಥೆಯಲ್ಲಿ ನಾಲ್ಕನೇ ಸ್ಥಾನದಲ್ಲಿ ಇರುವವರು ನಾವು. ಶೂದ್ರರು ಜಾತಿ ಯಾವುದೇ ಆದರೂ ನಾವೆಲ್ಲರೂ ಒಂದೇ ಎನ್ನುವುದನ್ನು ಅರಿಯಬೇಕು ಎಂದರು.

ನಾನು ಬಸವಣ್ಣನವರ ಅಭಿಮಾನಿ. ಬಸವ ತತ್ವದಲ್ಲಿ‌ ನಂಬಿಕೆ – ಬದ್ಧತೆ ಇಟ್ಟುಕೊಂಡಿದ್ದೇನೆ.
ಅಂದಿಗಲ್ಲ-ಇಂದಿಗಲ್ಲ-ಮುಂದೆ ಎಂದೆಂದಿಗೂ ಬಸವ ತತ್ವ ಶಾಶ್ವತ ಮತ್ತು ಪ್ರಸ್ತುತ ಎನ್ನುವುದು ನನ್ನ ನಂಬಿಕೆ. ಸಹಬಾಳ್ವೆ ಮತ್ತು ಸಹಿಷ್ಣತೆಯನ್ನು ಬಸವಣ್ಣನವರು ಬದುಕಿನುದ್ದಕ್ಕೂ ಸಾರಿದರು. ನಾನೂ ಇದನ್ನು ಪಾಲಿಸುತ್ತೇನೆ ಎಂದು ಹೇಳಿದರು.

ಬಸವ ಜಯಂತಿಯ ದಿನವೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ನಾನು ಅದೇ ದಿನ ಎಲ್ಲರಿಗೂ ಬದುಕುವ ಸಮಾನ ಅವಕಾಶಗಳನ್ನು ಕಲ್ಪಿಸುವ ಬಸವಣ್ಣನವರ ಆಶಯಗಳನ್ನು ಈಡೇರಿಸುವ ತೀರ್ಮಾನ ಮಾಡಿ, ಹತ್ತು ಹಲವು ಭಾಗ್ಯಗಳ, ಗ್ಯಾರಂಟಿಗಳ ಮೂಲಕ ಎಲ್ಲಾ ಜಾತಿ, ಎಲ್ಲಾ ಧರ್ಮದ ಬಡವರ ಬದುಕಿಗೆ ಅವಕಾಶಗಳನ್ನು ಕಲ್ಪಿಸಿದೆ. ಎಲ್ಲಾ ಸರ್ಕಾರಿ ಕಚೇರಿಗಳಲ್ಲೂ ಬಸವಣ್ಣನವರ ಭಾವಚಿತ್ರ ಇಡುವುದನ್ನು ಕಡ್ಡಾಯ ಮಾಡಿದ್ದು ಇದೇ ಕಾರಣಕ್ಕೆ. ಕರ್ನಾಟಕದ ಸಾಂಸ್ಕೃತಿಕ ನಾಯಕ ಎಂದು ಘೋಷಿಸುವ ಮೂಲಕ ಇಡೀ ಸರ್ಕಾರ ಬಸವಣ್ಣನವರಿಗೆ ಗೌರವ ಸೂಚಿಸಿದೆ ಎಂದರು.

ನಾನು ಕಾನೂನು ವಿದ್ಯಾರ್ಥಿ ಆದ ಗಳಿಗೆಯಿಂದ ಬಸವಣ್ಣನವರ ಅನುಯಾಯಿ. ಅಂಬೇಡ್ಕರ್ ಅವರೂ ತಮ್ಮ ಸಂವಿಧಾನದಲ್ಲಿ ಬಸವಣ್ಣನವರ ಆಶಯಗಳನ್ನೇ ಹೇಳಿದ್ದಾರೆ. ಹೀಗಾಗಿ ಸಂವಿಧಾನ ಮತ್ತು ಶರಣ ಸಂಸ್ಕೃತಿ ಒಂದೇ ಆಗಿದೆ. ನಮ್ಮ ಸರ್ಕಾರ ಸಂವಿಧಾನದ ಪೀಠಿಕೆ ಓದಿಸುವುದನ್ನು ಅಭಿಯಾನದ ರೀತಿ ನಡೆಸುತ್ತಿದೆ ಎಂದು ತಿಳಿಸಿದರು.

ಸ್ವಾತಂತ್ರ್ಯ, ಸಮಾನತೆ, ಬ್ರಾತೃತ್ವ ಸಂವಿಧಾನದ ಆಶಯವಾದರೆ ಬಸವಣ್ಣನವರೂ ಜಾತಿ ರಹಿತ, ವರ್ಗ ರಹಿತ ಬ್ರಾತೃತ್ವದ ಸಮಾಜ ನಿರ್ಮಾಣಕ್ಕೆ ಮುಂದಾಗಿದ್ದರು. ಹೀಗಾಗಿ ಬಸವಣ್ಣನವರು ಯಾವತ್ತಿಗೂ ಪ್ರಸ್ತುತ ಎಂದರು.

ಬಸವಣ್ಣನವರು ನುಡಿದಂತೆ ನಡೆದರು. ನಾವು ಬಸವ ಅನುಯಾಯಿಗಳೂ ನುಡಿದಂತೆ ನಡೆದಾಗ ಮಾತ್ರ ನಿಜವಾದ ಬಸವ ಅನುಯಾಯಿ ಆಗುತ್ತೇವೆ ಎಂದು ಹೇಳಿದರು.

ವಚನ ವಿಶ್ವವಿದ್ಯಾಲಯ ಸ್ಥಾಪಿಸುವ ಬೇಡಿಕೆ ಬಗ್ಗೆ ಸರ್ಕಾರದ ಒಪ್ಪಿಗೆ ಇದ್ದು, ಮುಂದಿನ ವರ್ಷ ವಚನ ವಿವಿ ಸ್ಥಾಪನೆಗೆ ಕ್ರಮ ಕೈಗೊಳ್ಳಲಾಗುವುದು ಎಂದರು.

Ramesh Babu

Journalist

Recent Posts

ಮಾರ್ಖಂಡೇಯ ಜಲಾಶಯದ ನೀರು ಪೋಲು ತಡೆಗೆ ಚಲುವರಾಯಸ್ವಾಮಿ ಖಡಕ್ ಸೂಚನೆ

ಬೆಳಗಾವಿ ಜಿಲ್ಲೆಯ ನೀರಾವರಿ ಯೋಜನೆಗಳ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಜಲಸಂಪನ್ಮೂಲ ಸಚಿವ ಎನ್‌. ಚಲುವರಾಯಸ್ವಾಮಿ ಅವರು ಅಧಿಕಾರಿಗಳಿಗೆ…

4 hours ago

ಪೊಲೀಸರೆಂದು ನಂಬಿಸಿ ವೃದ್ಧ ದಂಪತಿಗೆ ಚಿನ್ನಾಭರಣ ವಂಚನೆ: ಇಬ್ಬರು ಆರೋಪಿಗಳು ವಶಕ್ಕೆ: ದೂರುದಾರರಿಗೆ ಚಿನ್ನಾಭರಣ ಹಸ್ತಾಂತರ

ದೊಡ್ಡಬಳ್ಳಾಪುರ: ಪೊಲೀಸರೆಂದು ಪರಿಚಯಿಸಿಕೊಂಡು ವೃದ್ಧ ದಂಪತಿಯನ್ನು ನಂಬಿಸಿ ಚಿನ್ನಾಭರಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಮೂಲದ ಇಬ್ಬರು ಆರೋಪಿಗಳನ್ನು…

8 hours ago

ಮಳೆ ಕೊರತೆ; ಮತ್ಸ್ಯ ಕೃಷಿಗೂ ಹೊಡೆತ!

ಜಿಲ್ಲೆಯಲ್ಲಿ ಮಳೆ ಕೊರತೆ ಕೃಷಿ ಕ್ಷೇತ್ರದ ಜತೆಗೆ ಒಳನಾಡು ಮೀನುಗಾರಿಕೆಗೂ ತೀವ್ರ ಹೊಡೆತ ನೀಡಿದೆ. ಜಿಲ್ಲೆಯ ಬಹುತೇಕ ಕೆರೆಗಳು ನೀರಿಲ್ಲದೆ…

11 hours ago

ಬರಿದಾಗುತ್ತಿರುವ ಕರ್ನಾಟಕದ ಖಜಾನೆ…….

ಬರಿದಾಗುತ್ತಿರುವ ಕರ್ನಾಟಕದ ಖಜಾನೆ....... ಅಂದಿನ ಸಂಪಾದನೆ ಅಂದದಿಗೆ ಮಾತ್ರ ಎಂಬಂತಾಗಿದೆ...... ಬಹುತೇಕ ಕೆಳ ಮಧ್ಯಮ ವರ್ಗದ ಅಥವಾ ಬಡವರ ಮನೆಯ…

13 hours ago

ವಾಲ್ಮೀಕಿ ಜಯಂತಿ ರಜೆ ದಿನಾಂಕ ಬದಲು

ಬೆಂಗಳೂರು: ಮಹರ್ಷಿ ವಾಲ್ಮೀಕಿ ಜಯಂತಿಯ ಸಾರ್ವತ್ರಿಕ ರಜೆ ದಿನಾಂಕವನ್ನು ಬದಲಾಯಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಹಿಂದೆ…

1 day ago

ನೇಯ್ಗೆ ಉದ್ಯಮದ ಕಚ್ಚಾ ವಸ್ತುಗಳ ಬೆಲೆ ಏರಿಕೆಗೆ ಖಂಡನೆ: ನೇಕಾರ ಹೋರಾಟ ಸಮಿತಿಯಿಂದ ಪ್ರತಿಭಟನೆ

ದಿನದಿಂದ ದಿನಕ್ಕೆ ನೇಕಾರಿಕೆ ಮಾಡುವುದು ಕಷ್ಟವಾಗುತ್ತಿದೆ. ಸೀರೆ ಉತ್ಪಾದನೆಯಲ್ಲಿ ಬಳಸುವ ಕಚ್ಚ ಸಾಮಗ್ರಿಗಳ ಬೆಲೆ ಗಗನಕ್ಕೆರುತ್ತಿದೆ ಕೂಡಲೇ ಸರ್ಕಾರ ಮಧ್ಯೆ…

1 day ago