ನಮ್ಮ ಸಮುದಾಯದ ಅಭಿವೃದ್ದಿಗಾಗಿ ಎಲ್ಲರೂ ಒಟ್ಟಾಗಿ ಶ್ರಮಿಸೋಣ-ಛಲವಾದಿ ಮಹಾಸಭಾದ ಜಿಲ್ಲಾಧ್ಯಕ್ಷ ನರೇಶ್

ರಾಜ್ಯದಲ್ಲಿ ಛಲವಾದಿ ಸಮುದಾಯ ವಿವಿಧ ರೀತಿಯ ಸಮಸ್ಯೆಗಳನ್ನು ಎದುರಿಸುತ್ತಿದ್ದು, ಅದನ್ನು ಸರಕಾರದ ಗಮನಕ್ಕೆ ತರುವ ಮೂಲಕ ಅದನ್ನು ಪರಿಹರಿಸಿ, ಸಮುದಾಯದ ಅಭಿವೃದ್ದಿಗೆ ಕೆಲಸ ಮಾಡೋಣ ಎಂದು ಛಲವಾದಿ ಮಹಾಸಭಾದ ಜಿಲ್ಲಾಧ್ಯಕ್ಷ ನರೇಶ್ ತಿಳಿಸಿದರು.

ದೊಡ್ಡಬಳ್ಳಾಪುರದ ಪ್ರವಾಸಿಮಂದಿರಲ್ಲಿ ಛಲವಾದಿ ಮಹಾಸಭಾ ವತಿಯಿಂದ ನಡೆದ ಪತ್ರಿಕಾಗೋಷ್ಟಿಯಲ್ಲಿ ಅವರು ಮಾತನಾಡಿದರು.

ರಾಜ್ಯದಲ್ಲಿ ಬೇರೆ ಬೇರೆ ಸಮುದಾಯಗಳ ಅಭಿವೃದ್ದಿಗಾಗಿ ನಿಗಮ ಮಂಡಳಿಗಳಿವೆ. ಆದರೆ ನಮ್ಮ ಸಮುದಾಯಕ್ಕಿಲ್ಲ. ನಮ್ಮಲ್ಲಿ ಭಿನ್ನಾಭಿಪ್ರಾಯ ಇದ್ದರೂ ಕೂಡ ಎಲ್ಲರೂ ಒಟ್ಟಿಗೆ ಇರಬೇಕು. ಜಿಲ್ಲಾಧ್ಯಕ್ಷ ಸ್ಥಾನಕ್ಕೆ 4 ತಾಲೂಕುಗಳಿಂದ ಅರ್ಜಿ ಬಂದಿತ್ತು. ನನ್ನನ್ನ ಆಯ್ಕೆ ಮಾಡಿದ್ದಾಗಿ ಧನ್ಯವಾದಗಳು. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಕೆಲಸಮಾಡಲಾಗುತ್ತದೆ. ರಾಜ್ಯದಲ್ಲಿ ಸಾಕಷ್ಟು ಸಮಸ್ಯೆ ಗಳನ್ನು ಸಮುದಾಯ ಎದುರಿಸಲಾಗುತ್ತಿದೆ. ಸಮುದಾಯದಲ್ಲಿ ಒಗ್ಗಟ್ಟಿನ ಕೊರತೆ ಇದೆ. ನಮ್ಮಲ್ಲಿ ಮುಖ್ಯಮಂತ್ರಿ ಆಗುವ ಸಾಮರ್ಥ್ಯವಿದೆ. ಆದರೂ ರಾಜಕೀಯ, ಶೈಕ್ಷಣಿಕ, ಸಾಮಾಜಿಕವಾಗಿ ಹಿನ್ನಡೆಯಾಗಿದೆ. ಸಮುದಾಯದ ಅಭಿವೃದ್ದಿಗಾಗಿ ಎಲ್ಲರೂ ಶ್ರಮಿಸೋಣ ಎಂದರು.

ಸಮುದಾಯದ ಮುಖಂಡ ತಿಮ್ಮರಾಯಪ್ಪ ಮಾತನಾಡಿ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ 8-10 ವರ್ಷದಿಂದ ಛಲವಾದಿ ಮಹಾಸಭಾದ ಜಿಲ್ಲಾಧ್ಯಕ್ಷರ ಹುದ್ದೆ ಖಾಲಿ ಇತ್ತು. ತಾಲೂಕು ಮಟ್ಟದ ಪದಾಧಿಕಾರಿಗಳೇ ಕೆಲಸ ಮಾಡುತ್ತಿದ್ದಾರೆ. ಜಿಲ್ಲಾಧ್ಯಕ್ಷ ಸ್ಥಾನಕ್ಕೆ ರಾಜ್ಯ ಸಮಿತಿಯೂ ತಾಲೂಕು ಪದಾಧಿಕಾರಿಗಳಿಂದ ಅರ್ಜಿ ಪಡೆದು, ಜ.೨೪ ರಂದು ಸಮುದಾಯದ ಮುಖಂಡ ನೇತ್ರತ್ವದಲ್ಲಿ ನರೇಶ್ ಅವರನ್ನು ಜಿಲ್ಲಾಧ್ಯಕ್ಷರಾಗಿ ಆಯ್ಕೆ ಮಾಡಿದ್ದರು. ಅವರು 4 ತಾಲೂಕಿನ ಸಮುದಾಯ ಮುಖಂಡರ ಭೇಟಿ ಮಾಡಿ, ತಾಲೂಕಿನ ಪದಾಧಿಕಾರಿಗಳ ಆಯ್ಕೆ ಮಾಡಬೇಕು. ಅಧ್ಯಕ್ಷರು ಎಲ್ಲರನ್ನೂ ಒಗ್ಗೂಡಿಸಿಕೊಂಡು ಕೆಲಸ ಮಾಡಬೇಕು. ಛಲವಾದಿ ಮಹಾಸಭಾ ಜತೆಗೆ ಕರ್ನಾಟಕ ಛಲವಾದಿ ಮಹಾ ಸಭಾ ವಿಲೀನ ಮಾಡಲು ತೀರ್ಮಾನಿಸಲಾಗಿದೆ. ಎಲ್ಲರೂ ಒಗ್ಗಟ್ಟಾಗಿ ಹೋಗಬೇಕು ಎಂದರು.

ಈ ವೇಳೆಯಲ್ಲಿ ಮುಖಂಡರಾದ ಗೂಳ್ಯ ಹನುಮಣ್ಣ, ರಾಜಶೇಖರ್, ನಾರಾಯಣ, ಮರಿಯಪ್ಪಣ್ಣ, ತಿಮ್ಮರಾಯಪ್ಪ, ಮದ್ದೂರಣ್ಣ, ಸುರೇಶ್ ನಾರಾಯಣ, ಅಜಯ್, ರಾಮಣ್ಣ ಸೇರಿದಂತೆ ಅನೇಕರು ಹಾಜರಿದ್ದರು.

Ramesh Babu

Journalist

Recent Posts

ಹೃದಯವಿದ್ರಾವಕ ಘಟನೆ: ಒಂದೇ ದಿನ ಪತಿ-ಪತ್ನಿ ದಾರುಣ ಸಾವು

ಬೆಳಗಾವಿಯಲ್ಲಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಅರವಳ್ಳಿ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ಒಂದೇ ದಿನ ಪತಿ-ಪತ್ನಿ ದಾರುಣ ಸಾವನ್ನಪ್ಪಿದ್ದಾರೆ. ಅರವಳ್ಳಿ…

1 hour ago

ಮಾರಕಾಸ್ತ್ರಗಳಿಂದ ಶಿಕ್ಷಕಿಯ ಕ್ರೂರ ಹತ್ಯೆ: ಕೊಲೆ ಬಳಿಕ ದುಷ್ಕರ್ಮಿಗಳಿಂದ ಶವಕ್ಕೆ ಬೆಂಕಿ

ಕಲಬುರಗಿ ಜಿಲ್ಲೆಯಲ್ಲಿ ಸರ್ಕಾರಿ ಶಾಲಾ ಶಿಕ್ಷಕಿಯ ಮೇಲೆ ನಡೆದ ಕ್ರೂರ ಹತ್ಯೆ ಪ್ರಕರಣ ಎಲ್ಲರಲ್ಲೂ ಆತಂಕ ಮೂಡಿಸಿದೆ. ಕಮಲಾಪುರ ತಾಲೂಕಿನ…

2 hours ago

ಲಾಕಪ್ ಡೆತ್ ಮತ್ತು ಮರಣದಂಡನೆ….

ಸುಮಾರು ಆರು ವರ್ಷಗಳ ಹಿಂದೆ ಅಂದರೆ 2020ರಲ್ಲಿ ತಮಿಳುನಾಡಿನ ತೂತುಕುಡಿ ಜಿಲ್ಲೆಯಲ್ಲಿ ನಡೆದ ಅಮಾನುಷ ಲಾಕಪ್ ಡೆತ್ ಬಗ್ಗೆ ಬರೆದ…

3 hours ago

ತಂದೆ-ಮಗನ ಲಾಕಪ್ ಡೆತ್ ಕೇಸ್; ತಮಿಳುನಾಡಿನ 9 ಪೊಲೀಸರಿಗೆ ಗಲ್ಲು ಶಿಕ್ಷೆ

2020ರಲ್ಲಿ ತಮಿಳುನಾಡಿನಲ್ಲಿ ನಡೆದ ಸಾತಂಕುಲಂ ಕಸ್ಟಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮದ್ರಾಸ್ ಹೈಕೋರ್ಟ್‌ ಪೀಠವು 9 ಪೊಲೀಸ್ ಸಿಬ್ಬಂದಿಗೆ…

13 hours ago

ಇಂಧನ ತೈಲ ಮತ್ತು ಅನಿಲ ಪೂರೈಕೆ ಸಮಸ್ಯೆ – ರಾಜ್ಯದ ಜನತೆಗೆ ತೀವ್ರ ಸಂಕಷ್ಟ- ಸಚಿವ ಕೆ.ಎಚ್ ಮುನಿಯಪ್ಪ ಪ್ರತಿಕ್ರಿಯೆ

ರಾಜ್ಯದಲ್ಲಿ ಇಂಧನ ತೈಲ ಮತ್ತು ಅನಿಲ ಪೂರೈಕೆಯ ಸಮಸ್ಯೆ ಗಂಭೀರ ಸ್ವರೂಪ ಪಡೆದಿರುವ ಹಿನ್ನೆಲೆಯಲ್ಲಿ, ಆಹಾರ, ನಾಗರಿಕ ಸರಬರಾಜು ಮತ್ತು…

13 hours ago

ಆಟೋ ಎಲ್‌ಪಿಜಿಗಾಗಿ ಸಾಲುಗಟ್ಟಿ ನಿಂತ ನೂರಾರು ಆಟೋಗಳು

ಆಟೋ ಎಲ್‌ಪಿಜಿಗಾಗಿ ಡಿಕ್ರಾಸ್ ರಸ್ತೆಯ ಸೂಪರ್ ಗ್ಯಾಸ್ ಬಂಕ್ ಬಳಿ ನೂರಾರು ಆಟೋಗಳು ಸಾಲುಗಟ್ಟಿ ನಿಂತಿವೆ. ಆಟೋ ಎಲ್ಪಿಜಿ ಇಲ್ಲದೆ…

16 hours ago