ಕೋಲಾರ: ತಾಲೂಕಿನ ನರಸಾಪುರ ಗ್ರಾಮದಲ್ಲಿ ಭಾನುವಾರ ನೂತನವಾಗಿ ಪ್ರತಿಷ್ಠಾಪಿಸಲಾಗಿರುವ ಶ್ರೀ ಅಭಯ ಚೌಡೇಶ್ವರಿ ದೇವಿ ಹಾಗೂ ಶ್ರೀ ಕಾಲಬೈರವೇಶ್ವರಸ್ವಾಮಿ ದೇವರುಗಳ ನೂತನ ವಿಮಾನ ಗೋಪುರ, ಕಳಶ ಧ್ವಜಸ್ಥಂಭ, ಸ್ಥಿರಬಿಂಬಗಳ ಜೀಣೋದ್ಧಾರದ ಪೂಜಾ ಕಾರ್ಯಕ್ರಮಗಳಲ್ಲಿ ಶಾಸಕ ಕೊತ್ತೂರು ಮಂಜುನಾಥ್ ಮತ್ತು ವಿಧಾನ ಪರಿಷತ್ ಸದಸ್ಯ ಎಂ.ಎಲ್ ಅನಿಲ್ ಕುಮಾರ್ ಭಾಗವಹಿಸಿದ್ದರು
ಈ ಸಂದರ್ಭದಲ್ಲಿ ಕೆಪಿಸಿಸಿ ಸದಸ್ಯ ನಂದಿನಿ ಪ್ರವೀಣ್, ಪಿಎಲ್ಡಿ ಬ್ಯಾಂಕ್ ಮಾಜಿ ಅಧ್ಯಕ್ಷ ಚಂಜಿಮಲೆ ರಮೇಶ್, ಬಂಗಾರಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸೀಸಂದ್ರ ಗೋಪಾಲಗೌಡ, ನರಸಾಪುರ ಸೊಸೈಟಿ ಅಧ್ಯಕ್ಷ ಖಾಜಿಕಲ್ಲಹಳ್ಳಿ ಮುನಿರಾಜು, ವಕ್ಕಲೇರಿ ಗ್ರಾಪಂ ಮಾಜಿ ಅಧ್ಯಕ್ಷ ಮೈಲಾಂಡಹಳ್ಳಿ ಮುರಳಿ, ಮುಖಂಡರಾದ ಉರಟ ಅಗ್ರಹಾರ ಚೌಡರೆಡ್ಡಿ, ಮಲೇಷಿಯಾ ರಾಜಕುಮಾರ್, ಮೇಡಹಾಳ ಮುನಿಅಂಜಿ ಮುಂತಾದವರು ಭಾಗವಹಿಸಿದ್ದರು.