‘ನರೇಂದ್ರ ಮೋದಿಯವರು ಹೇಳಿದ ಸುಳ್ಳುಗಳು…..’: ಸುಳ್ಳಗಳನ್ನು ಪಟ್ಟಿ ಮಾಡಿದ ಸಿಎಂ ಸಿದ್ದರಾಮಯ್ಯ

ಚುನಾವಣಾ ಪ್ರಚಾರ ಮುಗಿಸಿ ವಿಶ್ರಾಂತಿ ಪಡೆಯುತ್ತಿದ್ದಾಗ ನಮ್ಮ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಲೋಕಸಭಾ ಚುನಾವಣಾ ಪ್ರಚಾರ ಕಾಲದಲ್ಲಿ ಹೇಳುತ್ತಿರುವ ಸುಳ್ಳುಗಳ ನೆನಪಾಯಿತು. ಸುಮ್ಮನೆ ಲೆಕ್ಕ ಹಾಕತೊಡಗಿದೆ. ಸದ್ಯಕ್ಕೆ ಇಷ್ಟು ನೆನಪಾಯಿತು. ಹೆಚ್ಚುವರಿಯಾಗಿ ನಿಮಗೆ ನೆನಪಾದರೆ ಇದಕ್ಕೆ ಸೇರಿಸಿಕೊಳ್ಳಿ. ಈ ಸುಳ್ಳುಗಳ ಸರಮಾಲೆ ಇಲ್ಲಿಗೆ ನಿಲ್ಲಲಾರದು, ಮುಂದುವರಿಯಲಿದೆ. ಸ್ವತಂತ್ರ ಭಾರತದ ಇತಿಹಾಸದಲ್ಲಿ ಯಾವ ಪ್ರಧಾನಮಂತ್ರಿಯೂ ಇಷ್ಟೊಂದು ನಿರ್ಲಜ್ಜವಾಗಿ ಈ ರೀತಿ ಹಸಿಹಸಿ ಸುಳ್ಳುಗಳನ್ನು ಹೇಳಿರಲಾರರು. ಯಾರೂ ಕೂಡಾ  ಪ್ರಧಾನಮಂತ್ರಿ ಕುರ್ಚಿಯ ಘನತೆಯನ್ನು  ಈ ರೀತಿ ಮಣ್ಣು ಪಾಲು ಮಾಡಿರಲಾರರು. ಮತದಾನದ ದಿನ ದೇಶದ ಜನರಿಗೆ ಸತ್ಯ-ಸುಳ್ಳುಗಳನ್ನು ಅರಿತುಕೊಳ್ಳುವ ಸದ್ಬುದ್ದಿಯನ್ನು ದೇವರು ಕರುಣಿಸಲಿ ಎಂದು ಬೇಡಿಕೊಳ್ಳುವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ನರೇಂದ್ರ ಮೋದಿಯವರು ಹೇಳಿದ ಸುಳ್ಳುಗಳು…..

1. ಎಸ್‌ಸಿ/ಎಸ್‌ಟಿ, ಒಬಿಸಿ ಮೀಸಲಾತಿ ಕಿತ್ತುಕೊಂಡು ಮುಸ್ಲಿಮರಿಗೆ ನೀಡುವುದಾಗಿ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲಿ ಹೇಳಿದೆ.

2. ಸಂಪತ್ತಿನ ಸಮಾನ ಹಂಚಿಕೆಯ ನೆಪದಲ್ಲಿ ಕಾಂಗ್ರೆಸ್ ಪಕ್ಷ ಹಿಂದೂಗಳ ಆಸ್ತಿಯನ್ನು ಕಬಳಿಸಿ ಮುಸ್ಲಿಮರಿಗೆ ನೀಡಲಿದೆ.

3. ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಮಂಗಳಸೂತ್ರ ಸೇರಿದಂತೆ ಜನರ ಚಿನ್ನ, ಆಸ್ತಿಯನ್ನು ಕಿತ್ತುಕೊಂಡು ಹೆಚ್ಚು ಮಕ್ಕಳು ಇರುವವರಿಗೆ, ನುಸುಳುಕೋರರಿಗೆ (ಮುಸ್ಲಿಮರಿಗೆ) ನೀಡಲಿದೆ.

4. ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಅಯೋಧ್ಯೆಯ ರಾಮಮಂದಿರದ ಬಗ್ಗೆ ಸುಪ್ರಿಂ ಕೋರ್ಟ್‌ ನೀಡಿದ ತೀರ್ಪನ್ನು ಬದಲಾಯಿಸುತ್ತದೆ.

5. ದೇಶದ ಸಂಪತ್ತಿನ ಮೊದಲ ಹಕ್ಕು ಮುಸ್ಲಿಮರಿಗೆ ಎಂದು ಪ್ರಧಾನಿ ಮನಮೋಹನ್‌ ಸಿಂಗ್‌ ಹೇಳಿದ್ದರು.

6. ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ದೇಶದ ಜನರ ಪಿತ್ರಾರ್ಜಿತ ಆಸ್ತಿಗೆ ಶೇ.55ರಷ್ಟು ತೆರಿಗೆ ಹೇರಲಿದೆ.

7. ಛತ್ರಪತಿ ಶಿವಾಜಿ ಮಹಾರಾಜ, ಕಿತ್ತೂರು ರಾಣಿ ಚೆನ್ನಮ್ಮ, ಮೈಸೂರಿನ ದೊರೆಗಳನ್ನು ಕಾಂಗ್ರೆಸ್‌‌ನವರು ನಿಂದಿಸುತ್ತಾರೆ.

8. ಲೋಕಸಭಾ ಚುನಾವಣೆಯನ್ನು ವಿದೇಶಿ ಶಕ್ತಿಗಳು ನಿಯಂತ್ರಿಸುತ್ತಿದೆ.

9. ಕಾಂಗ್ರೆಸ್‌ ಸರ್ಕಾರದ ಅವಧಿಯಲ್ಲಿ ಉಗ್ರರಿಗೆ ಪ್ರಧಾನಮಂತ್ರಿಯವರ ನಿವಾಸದಲ್ಲಿ ಸ್ವಾಗತ ಕೋರಲಾಗಿತ್ತು.

10. 2008ರಲ್ಲಿ ಮುಂಬೈ ಪ್ರವೇಶಿಸಿದ ಹತ್ತು ಉಗ್ರರ ಜೊತೆಗೆ ಕಾಂಗ್ರೆಸ್‌ ಸಂಪರ್ಕ ಹೊಂದಿತ್ತು.

11. ರಾಜ, ಮಹಾರಾಜರನ್ನು ಟೀಕಿಸುವ ಕಾಂಗ್ರೆಸ್‌ ನವಾಬರನ್ನು ಟೀಕಿಸುವುದಿಲ್ಲ.

12. ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ನಿಮ್ಮೆಲ್ಲರ ಮನೆ ಮನೆಗೂ ದಾಳಿ ನಡೆಸಿ ನೀವು ಕೂಡಿಟ್ಟ ಸಂಪತ್ತನ್ನು ವಶಪಡಿಸಿ, ಅದನ್ನು ತನ್ನ ವೋಟ್ ಬ್ಯಾಂಕ್‌ಗೆ (ಮುಸ್ಲಿಮರಿಗೆ) ಮರು ಹಂಚಿಕೆ ಮಾಡುತ್ತದೆ.

13. ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಅಯೋಧ್ಯೆಯ ರಾಮಮಂದಿರಕ್ಕೆ ಬಾಬ್ರಿ ಬೀಗ ಹಾಕುತ್ತದೆ.

14. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಭಾರತದ ಕ್ರಿಕೆಟ್ ತಂಡದಲ್ಲಿ ಬರೀ ಮುಸ್ಲಿಮರೇ ಇರುತ್ತಾರೆ.

15. ಕಳೆದ ಐದು ವರ್ಷಗಳಿಂದ ಅದಾನಿ-ಅಂಬಾನಿಗಳನ್ನು ಪ್ರಶ್ನೆ ಮಾಡುತ್ತಿದ್ದ ರಾಹುಲ್ ಗಾಂಧಿ ಏಕಾಏಕಿ ಪ್ರಶ್ನೆ ಮಾಡುವುದನ್ನು ನಿಲ್ಲಿಸಿದ್ದೇಕೆ? ಹಣ ತುಂಬಿದ ಟೆಂಪೋಗಳು ಕಾಂಗ್ರೆಸ್ ಮನೆಗೆ ತಲುಪಿದೆ.

ಸುಳ್ಳುಗಳು ಮುಂದುವರಿಯಲಿದೆ… ಎಂದಿದ್ದಾರೆ.

Ramesh Babu

Journalist

Recent Posts

ಮದುವೆಯಾದ 45 ದಿನಕ್ಕೆ ಲವರ್​​ ಜೊತೆ ಯುವತಿ ಎಸ್ಕೇಪ್​​: ಪತಿ, ಸೋದರ ಮಾವ ಸೂಸೈಡ್

  ಮದುವೆಯಾದ 45 ದಿನಕ್ಕೆ ನವವಿವಾಹಿತ ಪತ್ನಿಯಿಂದ ಕಿರುಕುಳ ಆರೋಪಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪತ್ನಿಯ ವರ್ತನೆಯೇ ಸಾವಿಗೆ ಕಾರಣ ಎಂದು…

2 hours ago

ವರದಕ್ಷಿಣೆ ಭೂತಕ್ಕೆ ಬಲಿಯಾದ ವಿವಾಹಿತೆ; ಮದುವೆಯಾದ ಎರಡೇ ವರ್ಷಕ್ಕೆ ಮಸಣದ ಪಾಲು

ಬೆಂಗಳೂರು ನಗರದ ಯಡಿಯೂರು ಕೆರೆ ಸಮೀಪದ ನಿವಾಸಿಯೊಬ್ಬರು ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಆತ್ಮಹ*ತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಬೆಳಕಿಗೆ ಬಂದಿದೆ.…

4 hours ago

ಆಸ್ತಿ ವ್ಯಾಮೋಹಕ್ಕೆ ಹೆತ್ತ ತಾಯಿಯ ಕೊಲೆ: ಕಲ್ಲು ಎತ್ತಿ ಹಾಕಿ ಕೊಂದ ಮಗ.!

ರಾಯಚೂರು: ಆಸ್ತಿ ಮೇಲಿನ ವ್ಯಾಮೋಹಕ್ಕೆ ಹೆತ್ತ ತಾಯಿಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಂದ ಹೃದಯವಿದ್ರಾವಕ ಘಟನೆ ರಾಯಚೂರು…

5 hours ago

ಚೀಲದಲ್ಲಿ ಯುವತಿಯ ಶಿರವಿಲ್ಲದ ದೇಹ ಪತ್ತೆ; ಸಹೋದ್ಯೋಗಿ ಅರೆಸ್ಟ್….! ಏಕೆ ಗೊತ್ತಾ….?

ಆಗ್ರಾ: ಆಗ್ರಾದಲ್ಲಿ ಚೀಲದಲ್ಲಿ ಯುವತಿಯ ಶಿರರಹಿತ ಶವ ಪತ್ತೆಯಾದ ಪ್ರಕರಣದಲ್ಲಿ ಯುವಕನೊಬ್ಬನನ್ನು ಬಂಧಿಸಲಾಗಿದೆ. ಆಗ್ರಾದ ಪಾರ್ವತಿ ವಿಹಾರ್‌ನಲ್ಲಿ ಜನವರಿ 24…

6 hours ago

ಪಿಟಿಸಿಎಲ್ ಕಾಯ್ದೆ ವಿರುದ್ದ ತೀರ್ಪು ನೀಡಿದವರ ಮೇಲೆ ಕ್ರಮಕ್ಕೆ ಒತ್ತಾಯ

ಕೋಲಾರ: ರಾಜ್ಯ ಸರ್ಕಾರ 2023ರ ಪಿಟಿಸಿಎಲ್ ತಿದ್ದುಪಡಿ ಕಾಯ್ದೆಯ ವಿರುದ್ಧವಾಗಿ ಕಂದಾಯ ಇಲಾಖೆ, ನ್ಯಾಯಾಲಯಗಳು, ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟಿನಲ್ಲಿ…

7 hours ago

ಸಾಲದ ಸುಳಿಗಿಂತಲೂ ಕಿರುಕುಳವೇ ಮಾರಕ…

ಒಂದು ಸುಂದರ ಸಂಸಾರ ಸಾಲದ ಸುಳಿಗೆ ಸಿಲುಕುವುದು ಎಂದರೆ ಅದು ಕೇವಲ ಆರ್ಥಿಕ ಬಿಕ್ಕಟ್ಟಲ್ಲ; ಅದು ಆ ಮನೆಯ ನೆಮ್ಮದಿಯ…

12 hours ago