Categories: ಕೋಲಾರ

ನರೇಗಾದಲ್ಲಿ 365 ದಿನ ಕೆಲಸ ನೀಡುವಂತೆ ಪ್ರಧಾನಿಗೆ ರೈತ ಸಂಘ ಒತ್ತಾಯ

ಕೋಲಾರ: ಹಿಂಗಾರುಮಳೆ ಆರ್ಭಟದಿಂದ ತತ್ತರಿಸಿರುವ ರಾಜ್ಯದ ರೈತ, ಕೂಲಿಕಾರ್ಮಿಕರ ರಕ್ಷಣೆಗೆ 10 ಸಾವಿರ ಕೋಟಿ ಅನುದಾನ ಬಿಡುಗಡೆ ಮಾಡಿ ನರೇಗಾದಲ್ಲಿ ದುಡಿಯುವ ಕೈಗೆ 365 ದಿನ ಕೆಲಸ ಕೊಟ್ಟು ಸಂಕಷ್ಟದಲ್ಲಿರುವ ರೈತರ ರಕ್ಷಣೆಗೆ ನಿಲ್ಲಬೇಕೆಂದು ರೈತ ಸಂಘದಿಂದ ಬಂಗಾರಪೇಟೆ ನಗರದ ರೈಲ್ವೆ ನಿಲ್ದಾಣದಲ್ಲಿ ಪ್ರತಿಭಟನೆ ನಡೆಸಿ ಅಧಿಕಾರಿಗಳ ಮುಖಾಂತರ ಪ್ರಧಾನ ಮಂತ್ರಿಗೆ ಮನವಿ ನೀಡಿ ಒತ್ತಾಯಿಸಲಾಯಿತು.

ಮುಂಗಾರು ಮಳೆ ಹಿನ್ನಡೆಯಾಗಿ ಹಿಂಗಾರು ಮಳೆ ಆರ್ಭಟಕ್ಕೆ ರಾಜ್ಯದ ಜನಸಾಮಾನ್ಯರ ಬದುಕು ನೀರುಪಾಲು ಆಗುವ ಜೊತೆಗೆ ರೈತ ಕೂಲಿಕಾರ್ಮಿಕರ ಜೀವನ ಅಸ್ತವ್ಯಸ್ತವಾಗುತ್ತಿದೆ. ನಿಲ್ಲದ ಮಳೆರಾಯನ ಕೋಪಕ್ಕೆ ದುಡಿಯುವ ಕೈಗೆ ಕೆಲಸವಿಲ್ಲದೆ ರೈತರು ಬೆಳೆದ ಬೆಳೆಗಳಿಗೆ ರೋಗ ನಿಯಂತ್ರಣಕ್ಕೆ ಬಾರದೆ ಹಾಕಿದ ಬಂಡವಾಳ ಕೈಗೆ ಬಾರದೆ ಖಾಸಗಿ ಸಾಲಕ್ಕೆ ಸಿಲುಕಿ ನಷ್ಟದಲ್ಲಿರುವ ರೈತರ ರಕ್ಷಣೆಗೆ ನಿಲ್ಲಬೇಕಾದ ರಾಜ್ಯ ಸರ್ಕಾರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರು ವಿಫಲವಾಗಿದ್ದಾರೆಂದು ರೈತ ಸಂಘದ ರಾಜ್ಯ ಉಪಾಧ್ಯಕ್ಷ ಕೆ.ನಾರಾಯಣಗೌಡ ರಾಜ್ಯ ಸರಕಾರದ ಅವ್ಯವಸ್ಥೆ ವಿರುದ್ದ ಆಕ್ರೋಷ ವ್ಯಕ್ತಪಡಿಸಿದರು.

ರಾಜ್ಯಾದ್ಯಂತ ಮಳೆಯಿಂದ ನಷ್ಟವಾಗಿರುವ ರೈತರ ರಕ್ಷಣೆಗೆ ಅಧಿಕಾರಿಗಳು ಸ್ಪಂಧಿಸದ ಜೊತೆಗೆ ಯಾವುದೇ ರೈತರ ತೋಟಕ್ಕೆ ಹೋಗಿ ನಷ್ಟವಾಗಿರುವ ಬೆಳೆ ಸಮೀಕ್ಷೆ ಮಾಡಿ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಬೇಕಾದ ಅಧಿಕಾರಿಗಳು ನಾಪತ್ತೆಯಾಗಿದ್ದಾರೆ. ಗ್ಯಾರೆಂಟಿಗಳ ಆಧಾರದ ಮೇಲೆ ಅಧಿಕಾರಕ್ಕೆ ಬಂದಿರುವ ಸರ್ಕಾರ ಅನುದಾನಗಳನ್ನು ಬಿಡುಗಡೆ ಮಾಡದೆ ಜಿಲ್ಲೆಗಳನ್ನು ನಿರ್ಲಕ್ಷೆ ಮಾಡಿ ರೈತ ವಿರೋಧಿ ದೋರಣೆ ಅನುಸರಿಸುತ್ತಿದ್ದಾರೆಂದು ಆರೋಪಿಸಿದರು.

ಒಂದು ಕಡೆ ಗ್ಯಾರೆಂಟಿಗಳ ಹಣ ಕೈಗೆ ಸೇರದೆ ಗ್ರಾಮ ಪಂಚಾಯಿತಿಗಳಲ್ಲಿ ದುಡಿಯುವ ಕೈಗೆ ಕೆಲಸ ನೀಡದೆ ಕೂಲಿ ಕಾರ್ಮಿಕರ ಹೆಸರಿನಲ್ಲಿ ನಕಲಿ ಜಾಬ್‌ಕಾರ್ಡ್ಗಳನ್ನು ಸೃಷ್ಟಿ ಮಾಡಿ 2 ಲಕ್ಷ ಕಾಮಗಾರಿಗೆ 10 ಲಕ್ಷ ಅನುದಾನ ಬಿಡುಗಡೆ ಮಾಡಿ ಜೆ.ಸಿ.ಬಿಗಳ ಮುಖಾಂತರ ಕಾಮಗಾರಿಗಳನ್ನು ನಡೆಸಿ, ಬಡವರ ಗಂಜಿಯನ್ನು ಅಧಿಕಾರಿಗಳು ಗುತ್ತಿಗೆದಾರರು ಕಸಿಯುತ್ತಿದ್ದಾರೆಂದು ಕಿಡಿಕಾರಿದರು.

ರಾಜ್ಯ ಮುಖಂಡ ಮರಗಲ್ ಶ್ರೀನಿವಾಸ್ ಮಾತನಾಡಿ, ಮೂರು ಪಕ್ಷದ ಜನಪ್ರತಿನಿಧಿಗಳು ಉಪಚುನಾವಣೆ ಒಳಮೀಸಲು, ಜಾತಿಗಣತಿ ಹಾಗೂ ಮುಡಾ ಮತ್ತು ವಾಲ್ಮೀಕಿ ಹಗರಣದಲ್ಲಿ ಪ್ರತಿನಿತ್ಯ ಬೀದಿ ನಾಯಿಗಳಂತೆ ಕಚ್ಚಾಡಿಕೊಂಡು ಸಂವಿಧಾನದ ಆಶಯವನ್ನು ಮರೆತು ಮಳೆಯಿಂದ ತತ್ತರಿಸಿರುವ ರಾಜ್ಯದ ಜನರ ಸಮಸ್ಯೆಗೆ ಸ್ಪಂದಿಸಲು ಬೆಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಲು ವಿಫಲವಾಗಿದ್ದಾರೆಂದು ಆಕ್ರೋಷ ವ್ಯಕ್ತಪಡಿಸಿದರು.

ಪ್ರತಿವರ್ಷ ಮುಂಗಾರು ಹಿಂಗಾರು ಮಳೆಯಿಂದ ರೈಲ್ವೇ ಇಲಾಖೆ ಅಭಿವೃದ್ಧಿಪಡಿಸಿರುವ ಜಿಲ್ಲೆಯ ಅಂಡರ್ ಪಾಸ್‌ಗಳು ಈಜುಕೊಳಗಳಾಗಿ ಮಾರ್ಪಟ್ಟು ಹಳ್ಳಿಯಿಂದ ಹಳ್ಳಿಗೆ ಸಂಪೂರ್ಣ ಸಂಪರ್ಕ ಕಳೆದುಕೊಳ್ಳುತ್ತಿದ್ದರೂ ಸಮಸ್ಯೆಯನ್ನು ಗಂಭೀರವಾಗಿ ಅಧಿಕಾರಿಗಳು ಪರಿಗಣಿಸುತ್ತಿಲ್ಲ. ಅಧಿಕಾರಿಗಳು ಅಂಡರ್ ಪಾಸ್ ಗಳಿಗೆ ಮೇಲ್ಛಾವಣಿ ಹಾಕಿ ಮಳೆ ನೀರು ಬಾರದಂತೆ ಅವೈಜ್ಞಾನಿಕ ಕಾಮಗಾರಿಗಳನ್ನು ಮಾಡುವ ಮುಖಾಂತರ ಕೋಟಿಕೋಟಿ ಹಣವನ್ನು ಲೂಟಿ ಮಾಡುವ ದಂಧೆಯಾಗಿ ಮಾಡಿಕೊಂಡಿದ್ದಾರೆ. ಜೊತೆಗೆ ರೈಲ್ವೇ ಟ್ರಾಕ್ ಗಳಲ್ಲಿ ಕೆಲವು ಕಡೆ ನಗರಸಭೆ ಪುರಸಭೆ ಅಧಿಕಾರಿಗಳ ನಿರ್ಲಕ್ಷ್ಯದಿಂದ ಕಸವನ್ನು ಸುರಿದು ದನಕರುಗಳು, ಮಕ್ಕಳು ಆಟವಾಡುವ ಜೊತೆಗೆ ರಾತ್ರಿಯಾದರೆ ರೈಲ್ವೇ ಟ್ರಾಕ್ ಗಳ ಮೇಲೆ ಕುಳಿತು ಮದ್ಯಪಾನ ಮಾಡುವ ಮಟ್ಟಕ್ಕೆ ಇಲಾಖೆ ಹದಗೆಟ್ಟಿದೆಂದು ಅಸಮದಾನ ವ್ಯಕ್ತಪಡಿಸಿದರು.

ಮನವಿ ಸ್ವೀಕರಿಸಿ ಮಾತನಾಡಿದ ರೈಲ್ವೆ ಅಧಿಕಾರಿ, ಅಂಡರ್‌ಪಾಸ್ ಅವ್ಯವಸ್ಥೆ ಸರಿಪಡಿಸುವ ಜೊತೆಗೆ ನಿಮ್ಮ ಮನವಿಯನ್ನು ಹಿರಿಯ ಅಧಿಕಾರಿಗಳ ಮುಖಾಂತರ ಸರ್ಕಾರಕ್ಕೆ ಕಳುಹಿಸುವ ಭರವಸೆಯನ್ನು ನೀಡಿದರು.

ಹೋರಾಟದಲ್ಲಿ ಜಿಲ್ಲಾಧ್ಯಕ್ಷ ಈಕಂಬಳ್ಳಿ ಮಂಜುನಾಥ, ತಾ.ಅಧ್ಯಕ್ಷ ಕದರಿನತ್ತ ಅಪ್ಪೋಜಿರಾವ್, ಮುನಿಕೃಷ್ಣ, ವಿಶ್ವ, ಮುನಿಯಪ್ಪ, ಕೃಷ್ಣಪ್ಪ, ಮಂಗಸಂದ್ರ ತಿಮ್ಮಣ್ಣ, ಶಿವಾರೆಡ್ಡಿ, ಗಿರೀಶ್, ರತ್ನಮ್ಮ, ಶೈಲಜ, ರಾಧಮ್ಮ, ಚೌಡಮ್ಮ, ಮುನಿರತ್ನಮ್ಮ, ನಾಗರತ್ನಮ್ಮ, ಪದ್ಮಾವತಿ, ಚಾಂದ್‌ಪಾಷ, ಅಹಮದ್, ಮುಂತಾದವರು ಇದ್ದರು.

Ramesh Babu

Journalist

Recent Posts

ಕಾಳು ಮಾತ್ರೆ ಸೇವಿಸಿ ವ್ಯಕ್ತಿ ಆತ್ಮಹತ್ಯೆ

ಕಾಳು ಮಾತ್ರೆ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಡರಾತ್ರಿ ಸುಮಾರು 2 ಗಂಟೆಯಲ್ಲಿ ದೊಡ್ಡಬಳ್ಳಾಪುರ ಹೊರಹೊಲಯದಲ್ಲಿರುವ ಹೊಸಹುಡ್ಯ ಗ್ರಾಮದಲ್ಲಿ…

1 hour ago

ಜ್ಯೂಯಲರಿ ಶಾಪ್ ಮಾಲೀಕರಿಗೆ ಶಾಪ್ ಗಳ ಭದ್ರತೆಗೆ ಬಗ್ಗೆ ಅರಿವು ಮೂಡಿಸಿದ ಇನ್ ಸ್ಪೆಕ್ಟರ್ ಸಾಧಿಕ್ ಪಾಷಾ

ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ಇನ್ ಸ್ಪೆಕ್ಟರ್ ಸಾಧಿಕ್ ಪಾಷಾ ನೇತೃತ್ವದಲ್ಲಿ ಗ್ರಾಮಾಂತರ ಠಾಣಯಲ್ಲಿ ಜ್ಯೂಯಲರಿ ಶಾಪ್ ಮಾಲೀಕರುಗಳಿಗೆ, ಜ್ಯೂಯಲರಿ…

3 hours ago

ಹೊಸ ವರ್ಷಾಚರಣೆಗೆ ಕ್ಷಣಗಣನೆ- ನ್ಯೂ ಇಯರ್ ಸೆಲೆಬ್ರೇಷನ್ ಗೆ ನಂದಿಬೆಟ್ಟಕ್ಕೆ ಹೋಗುವ ಪ್ರವಾಸಿಗರಿಗೆ ನಿರ್ಬಂಧ

ಹೊಸ ವರ್ಷದ ಸ್ವಾಗತಕ್ಕೆ ಇಡೀ ರಾಜ್ಯವೇ ಸಜ್ಜಾಗುತ್ತಿದೆ. ಇತ್ತ ಹೊಸ ವರ್ಷದ ಆಚರಣೆ ನೆಪದಲ್ಲಿ ನಡೆಯುವ ಮೋಜು-ಮಸ್ತಿ, ಅನಾಹುತ ತಪ್ಪಿಸಿ,…

6 hours ago

ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಒಟ್ಟು 17,350 ಮೆಟ್ರಿಕ್‌ ಟನ್ ಮೆಕ್ಕೆಜೋಳ ಖರೀದಿ- ಇನ್ನೂ 76,430 ಮೆಟ್ರಿಕ್‌ ಟನ್‌ ಖರೀದಿಸಲು ಬಾಕಿಯಿದೆ- ಸಿಎಂ ಸಿದ್ದರಾಮಯ್ಯ

ಮುಖ್ಯಮಂತ್ರಿಗಳ ಮೂಲಸೌಕರ್ಯ ಅಭಿವೃದ್ಧಿ ಯೋಜನೆ ಹಾಗೂ ರೈಲ್ವೆ ಯೋಜನೆಗಳ ಭೂಸ್ವಾಧೀನ ಕುರಿತು ನಡೆಸಿದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ…

7 hours ago

ಸ್ಲೋಚ್ ಕ್ಯಾಪ್ ಗೆ ವಿದಾಯ: ನೀಲಿ ಬಣ್ಣದ ಪೀಕ್ ಕ್ಯಾಪ್ ಧರಿಸಿ ಮಿಂಚಿದ ಬೆಂ ಗ್ರಾ ಜಿಲ್ಲಾ ಪೊಲೀಸ್ ಸಿಬ್ಬಂದಿ

1956ರ ದಶಕದಿಂದಲೂ ಪೊಲೀಸರು ಧರಿಸುತ್ತಿದ್ದ ಸ್ಲೋಚ್ ಕ್ಯಾಪ್ ಗೆ ವಿದಾಯ ಹೇಳುವ ಮೂಲಕ ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ಮಹತ್ವದ ಬದಲಾವಣೆ…

20 hours ago

ಹೊಸ ವರ್ಷಾಚರಣೆ: ಮಹಿಳೆಯರ ಸುರಕ್ಷತೆಗೆ ಮುನ್ನೆಚ್ಚರಿಕೆ ಕ್ರಮ ಪೊಲೀಸ್ ಇಲಾಖೆ ಕೈಗೊಳ್ಳಬೇಕು- ಸಿಎಂ ಸಿದ್ದರಾಮಯ್ಯ

ಹೊಸ ವರ್ಷಾಚರಣೆಯ ಹಿನ್ನೆಲೆಯಲ್ಲಿ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ಚರ್ಚಿಸಲು ಕರೆಯಲಾಗಿದ್ದ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೀಡಿದ ಸೂಚನೆಗಳು…

21 hours ago