ನರೇಗಾ ಕೂಲಿ ಮೊತ್ತ 370 ರೂ.ಗಳಿಗೆ ಹೆಚ್ಚಳ

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ವತಿಯಿಂದ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯಡಿ ನೋಂದಾಯಿತ ಕೂಲಿಕಾರರಿಗೆ ದಿನಗೂಲಿಯನ್ನು 370 ರೂ.ಗಳಿಗೆ ಹೆಚ್ಚಿಸಲಾಗಿದೆ ಎಂದು ಜಿಲ್ಲಾ ಪಂಚಾಯತ್ ಸಿಇಒ ಡಾ. ಅನುರಾಧ ಕೆ ಎನ್ ಅವರು ತಿಳಸಿದರು.

ನರೇಗಾ ಯೋಜನೆಯಲ್ಲಿ ಜಿಲ್ಲೆಯ ದೇವನಹಳ್ಳಿ, ದೊಡ್ಡಬಳ್ಳಾಪುರ, ನೆಲಮಂಗಲ ಮತ್ತು ಹೊಸಕೋಟೆ ತಾಲ್ಲೂಕಿನಲ್ಲಿ ಒಟ್ಟು 1,19,669 ಉದ್ಯೋಗ ಚೀಟಿಯನ್ನು ಹೊಂದಿರುವ ನೋಂದಾಯಿತ ಕುಟುಂಬಗಳಿದ್ದು, ಅದರಲ್ಲಿ 2,61,128 ಕೂಲಿಕಾರರಿದ್ದಾರೆ. ಏಪ್ರಿಲ್ 01 ರಿಂದ 370 ರೂಗಳನ್ನು ಹೆಚ್ಚಿಸಲಾಗಿದ್ದು ಯೋಜನೆಯ ಸದುಪಯೋಗವನ್ನು ಗ್ರಾಮೀಣ ಭಾಗದ ಜನರು ಪಡೆದುಕೊಳ್ಳಲು ತಿಳಿಸಿದ್ದಾರೆ.

ಉದ್ಯೋಗ ಚೀಟಿಯನ್ನು ಹೊಂದಿರುವ ಕುಟುಂಬಗಳು 100 ದಿನಗಳು ಕೆಲಸ ಮಾಡುವುದು, ಆರ್ಥಿಕವಾಗಿ ಸಬಲರಾಗಲು ತೋಟಗಾರಿಕೆ ಇಲಾಖೆ, ಅರಣ್ಯ ಇಲಾಖೆ, ರೇಷ್ಮೆ ಇಲಾಖೆ, ಕೃಷಿ ಇಲಾಖೆ, ಸಾಮಾಜಿಕ ಅರಣ್ಯ ಇಲಾಖೆ ಹಾಗೂ ಗ್ರಾಮ ಪಂಚಾಯಿತಿ ವತಿಯಿಂದ ನಡೆಯುತ್ತಿರುವ ಸಮುದಾಯ ಕಾಮಗಾರಿಗಳು ಮತ್ತು ವೈಯಕ್ತಿಕ ಕಾಮಗಾರಿಗಳಾದ ಹಸು, ಕುರಿ, ಹಂದಿ, ಕೋಳಿ ಶೆಡ್ ಮತ್ತು ವಸತಿ ಯೋಜನೆಗಳು ನರೇಗಾ ಯೋಜನೆಯಡಿ ಬರುತ್ತವೆ.

ಹೆಚ್ಚಿನ ಮಾಹಿತಿಗಾಗಿ ಹತ್ತಿರದ ಗ್ರಾಮ ಪಂಚಾಯಿತಿಯನ್ನು ಸಂಪರ್ಕಿಸಿ ಹಾಗೂ ಉಚಿತ ನರೇಗಾ ಸಹಾಯವಾಣಿ ಸಂಖ್ಯೆ 8277506000 ಕ್ಕೆ ಸಂಪರ್ಕಿಸಿ ಮಾಹಿತಿ ಮತ್ತು ದೂರುಗಳನ್ನು ಸಲ್ಲಿಸಬಹುದು ಎಂದು ತಿಳಿಸಿದ್ದಾರೆ.

Leave a Reply

Your email address will not be published. Required fields are marked *