ನವಿಲು ಬೇಟೆಗಾರರನ್ನ ಬೇಟೆಯಾಡಿದ ಪೊಲೀಸರು

ಅರಳುಮಲ್ಲಿಗೆ ಕೆರೆಯಲ್ಲಿ ನವಿಲು ಬೇಟೆಯಾಡಿದ ಇಬ್ಬರನ್ನ ದೊಡ್ಡಬಳ್ಳಾಪುರ ಪೊಲೀಸರು ವಶಕ್ಕೆ ಪಡೆದು ಆರೋಪಿಗಳಿಂದ ಬೇಟೆಯಾಡಿದ ಮೂರು ನವಿಲುಗಳು, ನಾಡ ಬಂದೂಕು ಮತ್ತು ಟಿವಿಎಸ್ ಮೊಪೇಡ್ ವಾಹನವನ್ನ ಜಪ್ತಿ ಮಾಡಲಾಗಿದೆ.

ದೊಡ್ಡಬಳ್ಳಾಪುರ ತಾಲೂಕಿನ ಅರಳುಮಲ್ಲಿಗೆ ಗ್ರಾಮದಲ್ಲಿ ನವಿಲು ಬೇಟೆಯಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ  ಆಂಧ್ರಪ್ರದೇಶ ಮೂಲದ ಇಬ್ಬರು ಆರೋಪಿಗಳನ್ನು ಗ್ರಾಮಾಂತರ ಠಾಣೆ ಇನ್ ಸ್ಪೆಕ್ಟರ್ ಮುನಿಕೃಷ್ಣ ನೇತೃತ್ವದಲ್ಲಿ ಬಂಧಿಸಿ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಒಪ್ಪಿಸಲಾಗಿದೆ.

ಬಂಧಿತರನ್ನು ಪುಟ್ಟಪರ್ತಿ ಟೌನ್ ನಿವಾಸಿಗಳಾದ  ಶ್ರೀನಿವಾಸ, ಬಾಲಾಜಿ ಎಂದು ಗುರುತಿಸಲಾಗಿದೆ. ಆರೋಪಿ ಶ್ರೀನಿವಾಸ ಎಂಬಾತ ಜಾಲಿಗೆ ಶಿವಣ್ಣ ಎಂಬುವರ ತೋಟದಲ್ಲಿ ಕೆಲಸ‌ ಮಾಡುತ್ತಿದ್ದರು. ಮತ್ತೊಬ್ಬ ಆರೋಪಿ ಬಾಲಾಜಿ, ಅರಳುಮಲ್ಲಿಗೆಯ ವೆಂಕಟೇಶ್ ಎಂಬುವರ  ತೋಟವೊಂದರಲ್ಲಿ ಕೆಲಸ ಮಾಡುತ್ತಿದ್ದರು.

ಕಳೆದ ರಾತ್ರಿ ಗ್ರಾಮಾಂತರ ಪೊಲೀಸರು ಗಸ್ತು ತಿರುಗುತ್ತಿದ್ದಾಗ ನವಿಲು ಬೇಟೆಯಾಡುತ್ತಿದ್ದವರು  ಪೊಲೀಸರಿಗೆ ಸಿಕ್ಕಿಬಿದ್ದಿದ್ದಾರೆ, ಆರೋಪಿಗಳನ್ನ ಅರಣ್ಯ ಇಲಾಖೆಯ ವಶಕ್ಕೆ ನೀಡಲಾಗಿದ್ದು ಪ್ರಕರಣ ದಾಖಲಾಗಿದೆ.

Ramesh Babu

Journalist

Recent Posts

ಮಹಿಳೆಯರು ಎಲ್ಲ ವಲಯಗಳಲ್ಲಿ ತಮ್ಮ ಛಾಪು ಮೂಡಿಸಿದ್ದು, ಸಬಲೀಕರಣದ ಆಶಯ ಸಾಕಾರದತ್ತ ಸಾಗುತ್ತಿದೆ-ಎನ್.ಶೋಭಾ

ಮಹಿಳೆಯರು ಎಲ್ಲ ವಲಯಗಳಲ್ಲಿ ತಮ್ಮ ಛಾಪು ಮೂಡಿಸಿದ್ದು, ಮಹಿಳಾ ಸಬಲೀಕರಣದ ಆಶಯ ಸಾಕಾರದತ್ತ ಸಾಗುತ್ತಿದೆ ಎಂದು ಆರಕ್ಷಕ ನಿರೀಕ್ಷಕರಾದ ಎನ್.ಶೋಭಾ…

48 minutes ago

ಮನೆ ಹೊಸ್ತಿಲಿನಲ್ಲಿ ಪೂಜೆಗಿಟ್ಟಿದ್ದ ಒಣಗಿದ ದಾಸವಾಳ ಹೂ ನುಂಗಿ ಆರುವರೆ ತಿಂಗಳ ಮಗು ದಾರುಣ ಸಾವು

ಮನೆಯ ಹೊಸ್ತಿಲಿನಲ್ಲಿ ಪೂಜೆಗಾಗಿ ಇಟ್ಟಿದ್ದ ಒಣಗಿದ ದಾಸವಾಳದ ಹೂವನ್ನು ಆಟವಾಡುತ್ತಾ ನುಂಗಿದ ಆರುವರೆ ತಿಂಗಳ ಕಂದಮ್ಮ ಉಸಿರುಗಟ್ಟಿ ಸಾವನ್ನಪ್ಪಿರುವ ಘಟನೆ…

3 hours ago

ಕಮರ್ಷಿಯಲ್ ಟ್ಯಾಕ್ಸ್ ಡಿಸಿ ಲೋಕಾಯುಕ್ತ ಬಲೆಗೆ

ಹುಬ್ಬಳ್ಳಿಯಲ್ಲಿ ಕಮರ್ಷಿಯಲ್ ಟ್ಯಾಕ್ಸ್ ಡಿಸಿ ಆರು ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಭರತ್ ಹೆಗ್ಗಡೆ, ಲೋಕಾಯುಕ್ತ ಬಲೆಗೆ…

4 hours ago

ದೊಡ್ಡಬಳ್ಳಾಪುರದಲ್ಲಿ ರಾಯಲ್‌ ಓಕ್‌ ಫರ್ನಿಚರ್ ನೂತನ ಮಳಿಗೆ ಉದ್ಘಾಟನೆ

ಭಾರತದ ಅಗ್ರ ಪೀಠೋಪಕರಣ ಬ್ರ್ಯಾಂಡ್ ಆಗಿರುವ ರಾಯಲ್‌ ಓಕ್‌ ಫರ್ನಿಚರ್, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನೂತನ ಮಳಿಗೆಗೆ ಚಾಲನೆ…

12 hours ago

ರಾಜ್ಯದಲ್ಲಿ ಆಟೋ ಎಲ್‌ಪಿಜಿ ಕೊರತೆ ಇಲ್ಲ – ​ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯಿಂದ ಸ್ಪಷ್ಟನೆ

ಎಲ್ಲಾ ವಲಯಗಳಿಗೂ ಯಾವುದೇ ಅಡೆತಡೆ ಇಲ್ಲದೆ ಎಲ್.ಪಿ.ಜಿ‌ ಸರಬರಾಜು ಮಾಡಲಾಗುತ್ತಿದೆ ಅಲ್ಲದೇ ವಿಶೇಷವಾಗಿ *ಆಟೋ‌ ಎಲ್.ಪಿ.ಜಿ*.ಗೆ ಯಾವುದೇ ರೀತಿಯ ‌ಕೊರತೆ…

15 hours ago

Affordable Emotional Support Animal Letters for Enhanced Well-being

Cheap Emotional Support Animal Letter: Affordable ESA Documentation Affordable Emotional Support Animal Letters for Enhanced…

23 hours ago