ಕರ್ನಾಟಕದ ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ ಆರೋಪ ಕೇಳಿಬಂದಿದೆ. ವರ್ಗಾವಣೆ ಮತ್ತು ಪ್ರಮೋಷನ್‌ಗೆ ಲಂಚದ ವ್ಯವಹಾರ ನಡೆಯುತ್ತಿದೆ ಎಂದು ಆರೋಪಿಸಲಾಗಿದೆ. ಇದರಿಂದಾಗಿ ನಕಲಿ ಮದ್ಯದ ಪ್ರಮಾಣ ಹೆಚ್ಚಾಗಿದೆ. ಮದ್ಯದಂಗಡಿ ಮಾಲೀಕರು ನವೆಂಬರ್ 20 ರಂದು ರಾಜ್ಯಾದ್ಯಂತ ಮದ್ಯ ಮಾರಾಟ ಬಂದ್‌ಗೆ ಕರೆ ನೀಡಿದ್ದಾರೆ.
ಅಬಕಾರಿ ಇಲಾಖೆಯಲ್ಲಿ (Excise Department) ಮಿತಿಮೀರಿದ ಭ್ರಷ್ಟಾಚಾರ ಆರೋಪ ಕೇಳಿಬಂದಿದೆ. ವರ್ಗಾವಣೆ, ಪ್ರಮೋಷನ್‌ಗೆ ಸನ್ನದುದಾರರಿಂದ ಮನಸೋ ಇಚ್ಛೆ ಕೋಟಿ ಕೋಟಿ ರೂ. ಲಂಚ ಕೇಳಲಾಗುತ್ತಿದೆ. ಅಧಿಕಾರಿಗಳ ಲಂಚಾವತಾರದಿಂದ ನಕಲಿ ಅಂತಾರಾಜ್ಯ ಮದ್ಯ ಹೆಚ್ಚಳವಾಗಿದೆ. ಹೀಗಾಗಿ ಅಬಕಾರಿ ಅಧಿಕಾರಿಗಳ ವಿರುದ್ಧ ಮದ್ಯದಂಗಡಿ ಮಾಲೀಕರು ಸಮರಕ್ಕೆ ಮುಂದಾಗಿದ್ದು, ನವೆಂಬರ್ 20ರಂದು ಕರ್ನಾಟಕದಾದ್ಯಂತ ಮದ್ಯ ಮಾರಾಟ ಬಂದ್‌ಗೆ ಕರೆ ನೀಡಲಾಗಿದೆ.
ಈ ಬಗ್ಗೆ ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ರಾಜ್ಯ ವೈನ್ ಮರ್ಚೆಂಟ್ ಅಸೋಸಿಯೇಷನ್ ಪ್ರಧಾನ ಕಾರ್ಯದರ್ಶಿ ಗೋವಿಂದರಾಜ್ ಹೆಗ್ಡೆ, ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನವೆಂಬರ್ 20ರಂದು ಕರ್ನಾಟಕದಾದ್ಯಂತ ಎಂಎಸ್ಐಎಲ್ ಹೊರತುಪಡಿಸಿ ಎಲ್ಲಾ ಬಾರ್ಗಳ ಬಂದ್‌ಗೆ ಕರೆ ನೀಡಿರುವುದಾಗಿ ತಿಳಿಸಿದ್ದಾರೆ.
ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಮಿತಿ ಮೀರುತ್ತಿದೆ. ನಮ್ಮ ಜೊತೆ ಸಿಎಂ, ಅಬಕಾರಿ ಸಚಿವರು ಮೀಟಿಂಗ್ ಮಾಡಬೇಕು. ನಾವು 500-900 ಕೋಟಿ ರೂ. ಲಂಚದ ಬಗ್ಗೆ ಎಂದೂ ಮಾತನಾಡಿಲ್ಲ. ತಪ್ಪು ಮಾಹಿತಿಯನ್ನು ಪ್ರಧಾನಿಗೆ ಯಾರು ಕೊಟ್ಟರೋ ಗೊತ್ತಿಲ್ಲ. ಪ್ರಧಾನಿ ವಿಚಾರದ ಬಗ್ಗೆ ಏನೂ ಹೇಳಲ್ಲ ಎಂದಿದ್ದಾರೆ.
ಸಿಎಲ್ 7 ಬಾರ್ಗಳಿಗೆ ಬೇಕಾ ಬಿಟ್ಟಿ ಲೈಸನ್ಸ್ ಕೊಡಲಾಗುತ್ತಿದೆ. ಅಧಿಕಾರಿಗಳು ಪರಿಶೀಲನೆ ನಡೆಸುವುದೇ ಇಲ್ಲ. ಆರ್ಟಿಐ ಕಾರ್ಯಕರ್ತರ ಹೇಳಿಕೆ ಬಗ್ಗೆ ಮಾತನಾಡಿರೋದು ಸರಿಯಲ್ಲ. ನಮ್ಮ ಬೇಡಿಕೆಗಳ ಬಗ್ಗೆ ನಾವು ಹೋರಾಟ ಮಾಡುತ್ತಿದ್ದೇವೆ. ನಮ್ಮ ಬೇಡಿಕೆ ಬಗ್ಗೆ ಸರ್ಕಾರ ತಿರ್ಮಾನ ತೆಗೆದುಕೊಂಡರೆ ಒಳ್ಳೇದು ಎಂದು ಹೇಳಿದ್ದಾರೆ.
ಜಗತ್ತು ದಿನದಿಂದ ದಿನಕ್ಕೆ ವೇಗವಾಗಿ ಬದಲಾಗುತ್ತಿದ್ದು, ಹೆಚ್ಚುತ್ತಿರುವ ಸ್ಪರ್ಧೆಯನ್ನು ಎದುರಿಸುವ ಸಾಮರ್ಥ್ಯವನ್ನು ಮಕ್ಕಳಲ್ಲಿ ಬೆಳೆಸಲು ಪೋಷಕರು ಹಾಗೂ ಶಿಕ್ಷಕರು ಒಟ್ಟಾಗಿ…
ಭಾರತೀಯರ ಆಹಾರ ವೈವಿಧ್ಯತೆ..... ರುಚಿ - ತೃಪ್ತಿ - ಸಮಾನತೆ..... ಅಡುಗೆ ಅನುಭವದ ಮೂಸೆಯೊಳಗೆ ಬೆಳೆದು ಬರುವ ವಿಜ್ಞಾನವೆಂಬ ಕಲೆ....…
2026-27 ಸಾಲಿಗೆ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನ…
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಕೊಡಿಪಾಳ್ಯ ಸಮೀಪ ಕ್ಯಾಂಟರ್‌ವೊಂದು ಪಲ್ಟಿಯಾಗಿ ಬಿದ್ದ ಘಟನೆ ನಡೆದಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.…
ಬೆಂಗಳೂರು ಗ್ರಾಮಾಂತರ: ಮೊಬೈಲ್ ಫೋನ್ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್ ಕೇವಲ ಸಂಪರ್ಕ…
ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…