ಅಟಲ್ ಭೂಜಲ ಯೋಜನೆಯು ಅಂತರ್ಜಲ ನಿರ್ವಹಣೆಯಲ್ಲಿ ಸುಸ್ಥಿರತೆ ಕಾಪಾಡಿಕೊಳ್ಳುವ ಉದ್ದೇಶದಿಂದ ಕೇಂದ್ರ ಸರ್ಕಾರವು ಜಾರಿಗೆ ತಂದಿರುತ್ತದೆ. 2023-24ನೇ ಸಾಲಿಗೆ ಅಟಲ್ ಭೂಜಲ ಯೋಜನೆಯನ್ನು ವಿಶ್ವ ಬ್ಯಾಂಕ್ ನೆರವಿನೊಂದಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಅಧೀನಕ್ಕೆ ಸೇರಿದ ದೇವನಹಳ್ಳಿ, ದೊಡ್ಡಬಳ್ಳಾಪುರ, ಹೊಸಕೋಟೆ ಮತ್ತು ನೆಲಮಂಗಲ ತಾಲ್ಲೂಕುಗಳಲ್ಲಿ ಎಲ್ಲಾ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಅನುಷ್ಠಾನಗೊಳಿಸಲಾಗುತ್ತಿದೆ.
ಸಂರಕ್ಷಿತ ಬೇಸಾಯದ ತಾಂತ್ರಿಕತೆ ಅಳವಡಿಸಿಕೊಂಡು ನೀರಿನ ಸದ್ಬಳಕೆಯೊಂದಿಗೆ ಹಸಿರುಮನೆಯಲ್ಲಿ ಉತ್ತಮ ಗುಣಮಟ್ಟದ ತೋಟಗಾರಿಕೆ ಬೆಳೆಗಳ ಉತ್ಪನ್ನಗಳನ್ನು ಉತ್ಪಾದಿಸಲು ಹಾಗೂ ರೋಗ, ಕೀಟ ಬಾದೆಯನ್ನು ನಿಯಂತ್ರಿಸುವುದು ಈ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿರುತ್ತದೆ.
ತೋಟಗಾರಿಕೆ ಬೆಳೆಗಳಾದ ವಿವಿಧ ಪುಷ್ಪ, ಹಣ್ಣಿನ, ತರಕಾರಿ ಹಾಗೂ ಇತರೆ ಅಧಿಕ ಮೌಲ್ಯದ ತೋಟಗಾರಿಕೆ ಬೆಳೆಗಳನ್ನು ಹಸಿರುಮನೆಯಲ್ಲಿ ಬೆಳೆಯಲು ಎಲ್ಲಾ ವರ್ಗದ ರೈತರಿಗೆ ಶೇ.50ರ ಸಹಾಯಧನ ನೀಡಲಾಗುವುದು.ಅಟಲ್ ಭೂಜಲ ಯೋಜನೆಯಡಿ ಕೃಷಿ ಹೊಂಡ ನಿರ್ಮಿಸಿಕೊಳ್ಳುವುದು ಕಡ್ಡಾಯವಾಗಿರುತ್ತದೆ.
ಅಟಲ್ ಭೂಜಲ್ ಯೋಜನೆಯಡಿ ನವೆಂಬರ್ 23 ರಂದು ಪೂರ್ವಾಹ್ನ 10.00 ಗಂಟೆಗೆ ದೊಡ್ಡಬಳ್ಳಾಪುರದ ತೂಬಗೆರೆ ಹೋಬಳಿಯ ಕಾವಲಹಳ್ಳಿ ಗ್ರಾಮದಲ್ಲಿರುವ ಪ್ರಗತಿ ಪರ ರೈತನಾದ ಬಲ್ಲೇಪಲ್ಲಿ ಶ್ರೀಕಾಂತ್ ವಾಸವಿ ಪ್ಲೋರಿಟೆಕ್ ನಲ್ಲಿ
1. ಹಸಿರು ಮನೆ ನಿರ್ಮಾಣ ಸಂದರ್ಭದಲ್ಲಿ ಅನುಸರಿಸಬೇಕಾದ ತಾಂತ್ರಿಕ ವೈಶಿಷ್ಟ್ಯಗಳು, 2. ಹಸಿರು ಮನೆಯಲ್ಲಿ ಗುಲಾಬಿ, ಜರ್ಬೆರಾ ಮತ್ತು ಕ್ಯಾಪ್ಸಿಕಂ ಸಮಗ್ರ ಬೇಸಾಯ ಪದ್ದತಿ, 3.ಹಸಿರು ಮನೆಯಲ್ಲಿ ಹೊಸ ಬೆಳೆಗಳ ಸಮಗ್ರ ಬೇಸಾಯ ಪದ್ದತಿ ಕುರಿತು ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ರೈತರು ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳಬೇಕೆಂದು ಈ ಮೂಲಕ ತಿಳಿಸಿದೆ.
ಹೆಚ್ಚಿನ ಮಾಹಿತಿಗಾಗಿ ಸಂಬಂಧಪಟ್ಟ ತಾಲ್ಲೂಕು ತೋಟಗಾರಿಕೆ ಇಲಾಖೆಯ ಅಧಿಕಾರಿಗಳನ್ನು ಸಂಪರ್ಕಿಸಲು ಕೋರಿದೆ. ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, (ಜಿಪಂ) ದೊಡ್ಡಬಳ್ಳಾಪುರ 9880210892, ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, (ಜಿಪಂ), ದೇವನಹಳ್ಳಿ 9480461234. ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, (ಜಿಪಂ) ಹೊಸಕೋಟೆ 8217210320, ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು (ಜಿಪಂ) ನೆಲಮಂಗಲ 9880461607 ಅನ್ನು ಸಂಪರ್ಕಿಸಬಹುದು ಎಂದು ತೋಟಗಾರಿಕೆ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇಂದು ನಾಡಿನಾದ್ಯಂತ ಮಹಾವೀರ ಜಯಂತಿಯನ್ನು ಅದ್ಧೂರಿಯಾಗಿ ಆಚರಣೆ ಮಾಡಲಾಯಿತು. ಅದೇರೀತಿ ದೊಡ್ಡಬಳ್ಳಾಪುರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಒಳರೋಗಿಗಳಿಗೆ ಹಣ್ಣು ಹಂಪಲು ವಿತರಣೆ…
ನಾನು ವೃತ್ತಿಯಲ್ಲಿ ವಕೀಲನಾಗಿದ್ದೇನೆ. ವಕೀಲ ವೃತ್ತಿಯಲ್ಲಿ ಬಂದಂತಹ ಹಣದಿಂದ ದೊಡ್ಡಬಳ್ಳಾಪುರ ತಾಲೂಕಿನ ಸಾಸಲು ಹೋಬಳಿಯ ದಡಘಟ್ಟಮಡಗು ಸಮೀಪ ಸರ್ವೇ ನಂ…
ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ, ಚಿಕ್ಕಬೆಳವಂಗಲ, ರಾಂಪುರ. ನಾರನಹಳ್ಳಿ, ಸೊಣ್ಣೇನಹಳ್ಳಿ ಗ್ರಾಮಗಳ ವ್ಯಾಪ್ತಿಯ ಸುಮಾರು 2100 ಎಕರೆ ಭೂಮಿಯನ್ನು ಕೆಐಎಡಿಬಿ ಸ್ವಾಧೀನಪಡಿಸಿಕೊಳ್ಳಲು…
ದೇವರು ಎಷ್ಟೊಂದು ಒಳ್ಳೆಯವನಲ್ಲವೇ........ ಲಕ್ಷಾಂತರ ಜನರನ್ನು ಕೊಲ್ಲಿಸಲು ಅಡಾಲ್ಫ್ ಹಿಟ್ಲರನನ್ನು ಒಂದು ದೇಶದ ಅಧ್ಯಕ್ಷನನ್ನಾಗಿಸಿದ. ಈಗ ಡೊನಾಲ್ಡ್ ಟ್ರಂಪ್ ಅವರನ್ನು…
ಮಹಿಳೆಯರು ಎಲ್ಲ ವಲಯಗಳಲ್ಲಿ ತಮ್ಮ ಛಾಪು ಮೂಡಿಸಿದ್ದು, ಮಹಿಳಾ ಸಬಲೀಕರಣದ ಆಶಯ ಸಾಕಾರದತ್ತ ಸಾಗುತ್ತಿದೆ ಎಂದು ಆರಕ್ಷಕ ನಿರೀಕ್ಷಕರಾದ ಎನ್.ಶೋಭಾ…
ಮನೆಯ ಹೊಸ್ತಿಲಿನಲ್ಲಿ ಪೂಜೆಗಾಗಿ ಇಟ್ಟಿದ್ದ ಒಣಗಿದ ದಾಸವಾಳದ ಹೂವನ್ನು ಆಟವಾಡುತ್ತಾ ನುಂಗಿದ ಆರುವರೆ ತಿಂಗಳ ಕಂದಮ್ಮ ಉಸಿರುಗಟ್ಟಿ ಸಾವನ್ನಪ್ಪಿರುವ ಘಟನೆ…