ನವೆಂಬರ್ 23 ರಂದು ಹಸಿರುಮನೆ ನಿರ್ಮಾಣ ಕುರಿತು ತರಬೇತಿ ಕಾರ್ಯಾಗಾರ

ಅಟಲ್ ಭೂಜಲ ಯೋಜನೆಯು ಅಂತರ್ಜಲ ನಿರ್ವಹಣೆಯಲ್ಲಿ ಸುಸ್ಥಿರತೆ ಕಾಪಾಡಿಕೊಳ್ಳುವ ಉದ್ದೇಶದಿಂದ ಕೇಂದ್ರ ಸರ್ಕಾರವು ಜಾರಿಗೆ ತಂದಿರುತ್ತದೆ. 2023-24ನೇ ಸಾಲಿಗೆ ಅಟಲ್ ಭೂಜಲ ಯೋಜನೆಯನ್ನು ವಿಶ್ವ ಬ್ಯಾಂಕ್ ನೆರವಿನೊಂದಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಅಧೀನಕ್ಕೆ ಸೇರಿದ ದೇವನಹಳ್ಳಿ, ದೊಡ್ಡಬಳ್ಳಾಪುರ, ಹೊಸಕೋಟೆ ಮತ್ತು ನೆಲಮಂಗಲ ತಾಲ್ಲೂಕುಗಳಲ್ಲಿ ಎಲ್ಲಾ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಅನುಷ್ಠಾನಗೊಳಿಸಲಾಗುತ್ತಿದೆ.

ಸಂರಕ್ಷಿತ ಬೇಸಾಯದ ತಾಂತ್ರಿಕತೆ ಅಳವಡಿಸಿಕೊಂಡು ನೀರಿನ ಸದ್ಬಳಕೆಯೊಂದಿಗೆ ಹಸಿರುಮನೆಯಲ್ಲಿ ಉತ್ತಮ ಗುಣಮಟ್ಟದ ತೋಟಗಾರಿಕೆ ಬೆಳೆಗಳ ಉತ್ಪನ್ನಗಳನ್ನು ಉತ್ಪಾದಿಸಲು ಹಾಗೂ ರೋಗ, ಕೀಟ ಬಾದೆಯನ್ನು ನಿಯಂತ್ರಿಸುವುದು ಈ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿರುತ್ತದೆ.

ತೋಟಗಾರಿಕೆ ಬೆಳೆಗಳಾದ ವಿವಿಧ ಪುಷ್ಪ, ಹಣ್ಣಿನ, ತರಕಾರಿ ಹಾಗೂ ಇತರೆ ಅಧಿಕ ಮೌಲ್ಯದ ತೋಟಗಾರಿಕೆ ಬೆಳೆಗಳನ್ನು ಹಸಿರುಮನೆಯಲ್ಲಿ ಬೆಳೆಯಲು ಎಲ್ಲಾ ವರ್ಗದ ರೈತರಿಗೆ ಶೇ.50ರ ಸಹಾಯಧನ ನೀಡಲಾಗುವುದು.‌‌ಅಟಲ್ ಭೂಜಲ ಯೋಜನೆಯಡಿ ಕೃಷಿ ಹೊಂಡ ನಿರ್ಮಿಸಿಕೊಳ್ಳುವುದು ಕಡ್ಡಾಯವಾಗಿರುತ್ತದೆ.

ಅಟಲ್ ಭೂಜಲ್ ಯೋಜನೆಯಡಿ ನವೆಂಬರ್ 23 ರಂದು ಪೂರ್ವಾಹ್ನ 10.00 ಗಂಟೆಗೆ ದೊಡ್ಡಬಳ್ಳಾಪುರದ ತೂಬಗೆರೆ ಹೋಬಳಿಯ ಕಾವಲಹಳ್ಳಿ ಗ್ರಾಮದಲ್ಲಿರುವ ಪ್ರಗತಿ ಪರ ರೈತನಾದ ಬಲ್ಲೇಪಲ್ಲಿ ಶ್ರೀಕಾಂತ್ ವಾಸವಿ ಪ್ಲೋರಿಟೆಕ್ ನಲ್ಲಿ

1. ಹಸಿರು ಮನೆ ನಿರ್ಮಾಣ ಸಂದರ್ಭದಲ್ಲಿ ಅನುಸರಿಸಬೇಕಾದ ತಾಂತ್ರಿಕ ವೈಶಿಷ್ಟ್ಯಗಳು, 2. ಹಸಿರು ಮನೆಯಲ್ಲಿ ಗುಲಾಬಿ, ಜರ್ಬೆರಾ ಮತ್ತು ಕ್ಯಾಪ್ಸಿಕಂ ಸಮಗ್ರ ಬೇಸಾಯ ಪದ್ದತಿ, 3.ಹಸಿರು ಮನೆಯಲ್ಲಿ ಹೊಸ ಬೆಳೆಗಳ ಸಮಗ್ರ ಬೇಸಾಯ ಪದ್ದತಿ ಕುರಿತು ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ರೈತರು ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳಬೇಕೆಂದು ಈ ಮೂಲಕ ತಿಳಿಸಿದೆ.

ಹೆಚ್ಚಿನ ಮಾಹಿತಿಗಾಗಿ ಸಂಬಂಧಪಟ್ಟ ತಾಲ್ಲೂಕು ತೋಟಗಾರಿಕೆ ಇಲಾಖೆಯ ಅಧಿಕಾರಿಗಳನ್ನು ಸಂಪರ್ಕಿಸಲು ಕೋರಿದೆ. ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, (ಜಿಪಂ) ದೊಡ್ಡಬಳ್ಳಾಪುರ 9880210892,  ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, (ಜಿಪಂ), ದೇವನಹಳ್ಳಿ 9480461234. ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, (ಜಿಪಂ) ಹೊಸಕೋಟೆ 8217210320, ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು (ಜಿಪಂ) ನೆಲಮಂಗಲ 9880461607 ಅನ್ನು ಸಂಪರ್ಕಿಸಬಹುದು ಎಂದು ತೋಟಗಾರಿಕೆ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

ಭಾರತೀಯರ ಆಹಾರ ವೈವಿಧ್ಯತೆ…. ರುಚಿ – ತೃಪ್ತಿ – ಸಮಾನತೆ…..

ಭಾರತೀಯರ ಆಹಾರ ವೈವಿಧ್ಯತೆ..... ರುಚಿ - ತೃಪ್ತಿ - ಸಮಾನತೆ..... ಅಡುಗೆ ಅನುಭವದ ಮೂಸೆಯೊಳಗೆ ಬೆಳೆದು ಬರುವ ವಿಜ್ಞಾನವೆಂಬ ಕಲೆ....…

7 hours ago

ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆ: ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

2026-27 ಸಾಲಿಗೆ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನ…

19 hours ago

ಕೊಡಿಪಾಳ್ಯ ಬಳಿ ಕ್ಯಾಂಟರ್ ಪಲ್ಟಿ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಕೊಡಿಪಾಳ್ಯ ಸಮೀಪ ಕ್ಯಾಂಟರ್‌ವೊಂದು ಪಲ್ಟಿಯಾಗಿ ಬಿದ್ದ ಘಟನೆ ನಡೆದಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.…

21 hours ago

ಮೊಬೈಲ್ ಕಳೆದುಹೋದರೆ ಗಾಬರಿ ಬೇಡ: ತಕ್ಷಣದ ಕ್ರಮವೇ ರಕ್ಷಣೆ: ಮೊಬೈಲ್‌ ಕಳೆದುಹೋದ 10 ನಿಮಿಷಗಳಲ್ಲಿ ಮಾಡಬೇಕಾದ 7 ಕೆಲಸಗಳು ಇಲ್ಲಿವೆ ನೋಡಿ…

ಬೆಂಗಳೂರು ಗ್ರಾಮಾಂತರ: ಮೊಬೈಲ್‌ ಫೋನ್‌ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್‌ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್‌ ಕೇವಲ ಸಂಪರ್ಕ…

23 hours ago

ಎಸ್ಐಆರ್ ಅಕ್ರಮ ಹಾಗೂ ಬರ ಪರಿಹಾರ ವಿಳಂಬ: ಕೇಂದ್ರ ಮತ್ತು ವಿಪಕ್ಷದ ವಿರುದ್ಧ ಸಚಿವ ಚಲುವರಾಯಸ್ವಾಮಿ ಆಕ್ರೋಶ

ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…

23 hours ago

ಬರ ಪರಿಹಾರಕ್ಕೆ 60 ಸಾವಿರ ಕೋಟಿ ನಷ್ಟದ ಅಂದಾಜು- ಡಿಸಿಎಂ ಡಾ.ಜಿ ಪರಮೇಶ್ವರ್

ರಾಜ್ಯದಲ್ಲಿ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟದ ಅಂದಾಜು 50 ರಿಂದ 60 ಸಾವಿರ ಕೋಟಿವರೆಗೆ ತಲುಪುವ ಸಾಧ್ಯತೆಯಿದ್ದು, ಕೇಂದ್ರ…

1 day ago