ನವೆಂಬರ್ 26 ರಂದು “ಸಂವಿಧಾನ ದಿನ” ವನ್ನು ಭಾರತ -ಪ್ರಜಾಪ್ರಭುತ್ವದ ತಾಯಿ (INDIA- THE MOTHER OF DEMOCRACY) ಎಂಬ ಧ್ಯೇಯವಾಕ್ಯದೊಂದಿಗೆ ಆಚರಿಸಲಾಗುತ್ತಿದೆ.ಅಂದು ಬೆಳಿಗ್ಗೆ 11 ಗಂಟೆಗೆ ಬೀರಸಂದ್ರ ಗ್ರಾಮದಲ್ಲಿರುವ ಜಿಲ್ಲಾಡಳಿತ ಭವನದ ಮೊದಲ ಮಹಡಿ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ರೇವಣಪ್ಪ ತಿಳಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ನಮ್ಮ ಸಾಂವಿಧಾನಿಕ ಮೌಲ್ಯಗಳನ್ನು ಬಿತ್ತರಿಸುವ ಉದ್ದೇಶದೊಂದಿಗೆ , ಎಲ್ಲಾ ಸರ್ಕಾರಿ ಕಛೇರಿಗಳು, ಶಾಲೆ,ಕಾಲೇಜುಗಳು,ಸಂಸ್ಥೆಗಳು,ಸ್ವಾಯತ್ತ ಸಂಸ್ಥೆಗಳು,ಸಾರ್ವಜನಿಕ ವಲಯದ ಉದ್ದಿಮೆಗಳ ವ್ಯಾಪ್ತಿಯಲ್ಲಿ ಸೇರಿದಂತೆ ಭಾರತದ ಸಂವಿಧಾನದ ಪೀಠಿಕಾ ಭಾಗವನ್ನು ಸಾಮೂಹಿಕವಾಗಿ ಓದುವ, ಸಂವಿಧಾನದ ಮೌಲ್ಯಗಳು,ಮೂಲ ಆಶಯಗಳ ಬಗ್ಗೆ ಚರ್ಚೆ,ರಸಪ್ರಶ್ನೆ,ವೆಬಿನಾರ್ ಕಾರ್ಯಕ್ರಮಗಳನ್ನು ಅರ್ಥಪೂರ್ಣವಾಗಿ ಆಚರಿಸಬೇಕು.
ಕಾರ್ಯಕ್ರಮದಲ್ಲಿ ಜಿಲ್ಲೆಯ ಎಲ್ಲಾ ಜಿಲ್ಲಾ ಮಟ್ಟದ ಅಧಿಕಾರಿಗಳು ಮತ್ತು ಸಿಬ್ಬಂದಿ ಜಿಲ್ಲಾ ಮಟ್ಟದ ಕಾರ್ಯಕ್ರಮದಲ್ಲಿ ಹಾಜರಾಗಬೇಕು. ತಾಲ್ಲೂಕು ಮಟ್ಟದಲ್ಲಿ ಆಯೋಜಿಸುವ ಕಾರ್ಯಕ್ರಮದಲ್ಲಿ ಎಲ್ಲಾ ತಹಶೀಲ್ದಾರ್ ಹಾಗೂ ಮತ್ತಿತರ ಎಲ್ಲಾ ತಾಲ್ಲೂಕು ಮಟ್ಟದ ಅಧಿಕಾರಿ, ಸಿಬ್ಬಂದಿ ತಾಲ್ಲೂಕು ಮಟ್ಟದ ಕಾರ್ಯಕ್ರಮದಲ್ಲಿ ಭಾಗವಹಿಸಬೇಕು. ಗ್ರಾಮ ಪಂಚಾಯತಿ ಮಟ್ಟದ ಕಾರ್ಯಕ್ರಮಗಳಲ್ಲಿ ಎಲ್ಲಾ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು, ಚುನಾಯಿತ ಪ್ರತಿನಿಧಿಗಳು ಮತ್ತು ಸಿಬ್ಬಂದಿಗಳನ್ನೊಳಗೊಂಡು ಕಾರ್ಯಕ್ರಮ ಆಚರಿಸಬೇಕು.
ವಿವಿಧ ಇಲಾಖೆಗಳಿಂದ ನಡೆಸಲಾಗುತ್ತಿರುವ ಮೆಟ್ರಿಕ್ ಪೂರ್ವ ಹಾಗೂ ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳು,ವಸತಿ ಶಾಲೆಗಳಲ್ಲಿಯೂ ಕಾರ್ಯಕ್ರಮ ಆಚರಿಸಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.