ನವೆಂಬರ್ 26 ರಂದು ಸಂವಿಧಾನ ದಿನ ಆಚರಣೆ

ನವೆಂಬರ್ 26 ರಂದು “ಸಂವಿಧಾನ ದಿನ” ವನ್ನು ಭಾರತ -ಪ್ರಜಾಪ್ರಭುತ್ವದ ತಾಯಿ (INDIA- THE MOTHER OF DEMOCRACY) ಎಂಬ ಧ್ಯೇಯವಾಕ್ಯದೊಂದಿಗೆ ಆಚರಿಸಲಾಗುತ್ತಿದೆ.ಅಂದು ಬೆಳಿಗ್ಗೆ 11 ಗಂಟೆಗೆ ಬೀರಸಂದ್ರ ಗ್ರಾಮದಲ್ಲಿರುವ ಜಿಲ್ಲಾಡಳಿತ ಭವನದ ಮೊದಲ ಮಹಡಿ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ರೇವಣಪ್ಪ ತಿಳಿಸಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಅವರು, ನಮ್ಮ ಸಾಂವಿಧಾನಿಕ ಮೌಲ್ಯಗಳನ್ನು ಬಿತ್ತರಿಸುವ ಉದ್ದೇಶದೊಂದಿಗೆ , ಎಲ್ಲಾ ಸರ್ಕಾರಿ ಕಛೇರಿಗಳು, ಶಾಲೆ,ಕಾಲೇಜುಗಳು,ಸಂಸ್ಥೆಗಳು,ಸ್ವಾಯತ್ತ ಸಂಸ್ಥೆಗಳು,ಸಾರ್ವಜನಿಕ ವಲಯದ ಉದ್ದಿಮೆಗಳ ವ್ಯಾಪ್ತಿಯಲ್ಲಿ ಸೇರಿದಂತೆ ಭಾರತದ ಸಂವಿಧಾನದ ಪೀಠಿಕಾ ಭಾಗವನ್ನು ಸಾಮೂಹಿಕವಾಗಿ ಓದುವ, ಸಂವಿಧಾನದ ಮೌಲ್ಯಗಳು,ಮೂಲ ಆಶಯಗಳ ಬಗ್ಗೆ ಚರ್ಚೆ,ರಸಪ್ರಶ್ನೆ,ವೆಬಿನಾರ್ ಕಾರ್ಯಕ್ರಮಗಳನ್ನು ಅರ್ಥಪೂರ್ಣವಾಗಿ ಆಚರಿಸಬೇಕು.

ಕಾರ್ಯಕ್ರಮದಲ್ಲಿ ಜಿಲ್ಲೆಯ ಎಲ್ಲಾ ಜಿಲ್ಲಾ ಮಟ್ಟದ ಅಧಿಕಾರಿಗಳು ಮತ್ತು ಸಿಬ್ಬಂದಿ ಜಿಲ್ಲಾ ಮಟ್ಟದ ಕಾರ್ಯಕ್ರಮದಲ್ಲಿ ಹಾಜರಾಗಬೇಕು. ತಾಲ್ಲೂಕು ಮಟ್ಟದಲ್ಲಿ ಆಯೋಜಿಸುವ ಕಾರ್ಯಕ್ರಮದಲ್ಲಿ ಎಲ್ಲಾ ತಹಶೀಲ್ದಾರ್ ಹಾಗೂ ಮತ್ತಿತರ ಎಲ್ಲಾ ತಾಲ್ಲೂಕು ಮಟ್ಟದ ಅಧಿಕಾರಿ, ಸಿಬ್ಬಂದಿ ತಾಲ್ಲೂಕು ಮಟ್ಟದ ಕಾರ್ಯಕ್ರಮದಲ್ಲಿ ಭಾಗವಹಿಸಬೇಕು‌. ಗ್ರಾಮ ಪಂಚಾಯತಿ ಮಟ್ಟದ ಕಾರ್ಯಕ್ರಮಗಳಲ್ಲಿ ಎಲ್ಲಾ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು, ಚುನಾಯಿತ ಪ್ರತಿನಿಧಿಗಳು ಮತ್ತು ಸಿಬ್ಬಂದಿಗಳನ್ನೊಳಗೊಂಡು ಕಾರ್ಯಕ್ರಮ ಆಚರಿಸಬೇಕು.

ವಿವಿಧ ಇಲಾಖೆಗಳಿಂದ ನಡೆಸಲಾಗುತ್ತಿರುವ ಮೆಟ್ರಿಕ್ ಪೂರ್ವ ಹಾಗೂ ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳು,ವಸತಿ ಶಾಲೆಗಳಲ್ಲಿಯೂ ಕಾರ್ಯಕ್ರಮ ಆಚರಿಸಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Ramesh Babu

Journalist

Recent Posts

ಸರ್ಕಾರಿ ಶಾಲಾ ಮಕ್ಕಳಿಗೆ ಟ್ರ್ಯಾಕ್‌ಸೂಟ್, ಶೂ ವಿತರಣೆ

ದೊಡ್ಡಬಳ್ಳಾಪುರ: ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಉತ್ತಮ ಶಿಕ್ಷಣದ ಜೊತೆಗೆ ಅಗತ್ಯ ಮೂಲಸೌಕರ್ಯ ಹಾಗೂ ಪ್ರೋತ್ಸಾಹ ದೊರೆಯುವಂತೆ ಸಮಾಜದ…

12 hours ago

ಕಸ ವಿಂಗಡಣೆ ಯಂತ್ರಕ್ಕೆ ಸಿಲುಕಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ಕಸ ವಿಂಗಡಣೆ ಮಾಡುವ ಯಂತ್ರಕ್ಕೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿರುವ ದಾರುಣ ಘಟನೆ ತಾಲೂಕಿನ ಎಂಎಸ್‌ಜಿಪಿ ಕಸ ಸಂಸ್ಕರಣಾ ಘಟಕದಲ್ಲಿ…

17 hours ago

ಅಕ್ಟೋಬರ್ 2….. ಶಾಸ್ತ್ರಿ ಮತ್ತು ಗಾಂಧಿ……..,

ದೇಶದ ಪ್ರಧಾನಿಯೊಬ್ಬರು ಹೀಗೂ ಬದುಕಬಹುದು ಎಂದು ತೋರಿಸಿ ಮಾದರಿಯಾದ ವ್ಯಕ್ತಿ ಲಾಲ್ ಬಹದ್ದೂರ್ ಶಾಸ್ತ್ರಿ. ಅವರಿಗೆ ಹುಟ್ಟು ಹಬ್ಬದ ಶುಭಾಶಯಗಳು.......…

20 hours ago

ಬೆಂಬಲ ಬೆಲೆಯಡಿ ಸೂರ್ಯಕಾಂತಿ, ಹೆಸರುಕಾಳು, ಸೋಯಾಬೀನ್‌ಗೆ ಖರೀದಿಗೆ ಕೇಂದ್ರದ ಅನುಮೋದನೆ

2026-27ನೇ ಸಾಲಿನ ಮುಂಗಾರು ಹಂಗಾಮಿನ ಬೆಂಬಲ ಬೆಲೆ ಯೋಜನೆಯಡಿ ಸೂರ್ಯಕಾಂತಿ, ಹೆಸರುಕಾಳು ಹಾಗೂ ಸೋಯಾಬೀನ್ ಉತ್ಪನ್ನಗಳನ್ನು ಕನಿಷ್ಠ ಬೆಂಬಲ ಬೆಲೆ…

1 day ago

ಸಿಎಂಗೆ ರೈತಪರ ಕಾಳಜಿ ಇಲ್ಲ ಶಾಸಕ ಧೀರಜ್ ಮುನಿರಾಜು ಆರೋಪ

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಬಡವರು ಹಾಗೂ ರೈತರ ಬಗ್ಗೆ ಕಾಳಜಿ ಇಲ್ಲ. ಹೂಡಿಕೆದಾರರು ಹಾಗೂ ಬಂಡವಾಳಶಾಹಿಗಳ ಹಿತಾಸಕ್ತಿಯ ಬಗ್ಗೆಯೇ…

1 day ago

ಎಸ್ ಐ ಆರ್ ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಗೆ ತಪ್ಪು ಮಾಹಿತಿ ನೀಡುವ ಅಧಿಕಾರಿಗಳ ವಿರುದ್ಧ ಕ್ರಮ – ಡಿಸಿ ಅನುರಾಧ

ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಗೆ ತಪ್ಪು ಮಾಹಿತಿ ನೀಡಿ ದಾರಿ ತಪ್ಪಿಸುವ ಬಿಎಲ್‌ಒ ಅಥವಾ…

1 day ago