ನವೋದಯ ಶಾಲೆಯ ಮುಂಭಾಗ ಯುವಕನ ಶವ ಪತ್ತೆ: ಚಾಕುವಿನಿಂದ ಬರ್ಬರವಾಗಿ ಹತ್ಯೆ ಮಾಡಿರುವ ಶಂಕೆ..! ಸ್ಥಳಕ್ಕೆ ಪೊಲೀಸ್ ಸಿಬ್ಬಂದಿ ಭೇಟಿ, ಪರಿಶೀಲನೆ

ನಗರದ ಹೊರವಲಯದಲ್ಲಿರುವ ನವೋದಯ ಶಾಲೆಯ ಮುಂಭಾಗ ಯುವಕನ ಶವ ಪತ್ತೆಯಾಗಿದೆ. ದುಷ್ಕರ್ಮಿಗಳು ಚಾಕುವಿನಿಂದ ಬರ್ಬರವಾಗಿ ಹತ್ಯೆ ಮಾಡಿದ್ದಾರೆಂದು ಪ್ರತ್ಯಕ್ಷದರ್ಶಿಗಳು ಶಂಕಿಸಿದ್ದಾರೆ.

ನವೋದಯ ಶಾಲೆಯ ಕಾಂಪೌಂಡ್ ಬಳಿಯ ಯಲಹಂಕ- ಹಿಂದುಪುರ ರಸ್ತೆಯ ಬಳಿಯೇ ಶವ ಪತ್ತೆಯಾಗಿದ್ದು, ಸ್ಥಳೀಯರಲ್ಲಿ ಆತಂಕಕ್ಕೆ ಕಾರಣವಾಗಿದೆ.

ಶುಕ್ರವಾರ ರಾತ್ರಿ ಘಟನೆ ನಡೆದಿದೆ ಎನ್ನಲಾಗಿದ್ದು, ಇಂದು ಬೆಳಗ್ಗೆ ಬೆಳಕಿಗೆ ಬಂದಿದೆ.

ಸ್ಥಳಕ್ಕೆ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಹಳೇ ದ್ವೇಷಕ್ಕೆ ಸುಮಾರು 10 ಮಂದಿ ದುಷ್ಕರ್ಮಿಗಳ ಗುಂಪೊಂದು ಯುವಕನನ್ನು ಮಾರಕಾಸ್ತ್ರಗಳಿಂದ ಕೊಲೆ ಮಾಡಿ ಎಸ್ಕೇಪ್ ಆಗಿದ್ದಾರೆ ಎನ್ನಲಾಗಿದೆ.

ಹೇಮಂತ್ ಕುಮಾರ್( 27) ಕೊಲೆಯಾದ ದುರ್ದೈವಿ.

ಕುತ್ತಿಗೆ, ಎದೆಗೆ ಚಾಕುವಿಬಿಂದ ಗಂಭೀರವಾಗಿ ಇರಿದಿರುವ ಆರೋಪಿಗಳು. ಕೊಲೆ ಮಾಡಿ ರಸ್ತೆ ಬದಿಯಲ್ಲಿ ಹಾಕಿ ಹೋಗಿದ್ದ ಆರೋಪಿಗಳು. ಇಂದು ವಾಕಿಂಗ್ ಮಾಡುವ ವೇಳೆ ಮೃತ ದೇಹ ಸಾರ್ವಜನಿಕರ ಕಣ್ಣಿಗೆ ಬಿದ್ದಿದೆ.

ಆರೋಪಿಗಳ ಪತ್ತೆಗಾಗಿ ಗ್ರಾಮಾಂತರ ಠಾಣಾ ಪೊಲೀಸರು ಬಲೆ ಬೀಸಿದ್ದಾರೆ.

Leave a Reply

Your email address will not be published. Required fields are marked *