ನಶಾ ಮುಕ್ತ ಭಾರತ್ ಅಭಿಯಾನಕ್ಕೆ 05 ನೇ ವಾರ್ಷಿಕೋತ್ಸವ ಸಂಭ್ರಮ

ನಶಾ ಮುಕ್ತ ಭಾರತ್ ಅಭಿಯಾನ ಆರಂಭವಾಗಿ ಇಂದಿಗೆ 05 ವರ್ಷ ಪೂರೈಸಿರುವ ಹಿನ್ನೆಲೆ ಇಂದು ಜಿಲ್ಲಾಡಳಿತ ಭವನದಲ್ಲಿ ನಶಾ ಮುಕ್ತ ಭಾರತ್ ಪೋಸ್ಟರ್ ಅನ್ನು ಅಪರ ಜಿಲ್ಲಾಧಿಕಾರಿ ಸೈಯಿದಾ ಆಯಿಷಾ ಅವರು ಬಿಡುಗಡೆ ಮಾಡಿದರು.

ನಂತರ ಮಾತನಾಡಿ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯ ಭಾರತ ಸರ್ಕಾರ ನಿರ್ದೇಶನದ ಮೇರೆಗೆ ವಿಕಲಚೇತನ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಮತ್ತು ವಿವಿಧ ಇಲಾಖೆಗಳ ಸಹಯೋಗದೊಂದಿಗೆ ನಶಾ ಮುಕ್ತ ಭಾರತ್ ಅಭಿಯಾನ ಜಿಲ್ಲೆಯಾದ್ಯಂತ ಹಮ್ಮಿಕೊಳ್ಳಲಾಗಿದೆ.

ದೇಶದಲ್ಲಿಯೇ ನಮ್ಮ ಕರ್ನಾಟಕ ರಾಜ್ಯವು ನಶಾ ಮುಕ್ತ ಭಾರತ್ ಅಭಿಯಾನ ಕಾರ್ಯಕ್ರಮದಲ್ಲಿ ದ್ವಿತೀಯ ಸ್ಥಾನ ಪಡೆದಿದ್ದು, 28,237 ಕಾರ್ಯಕ್ರಮಗಳನ್ನು ಆಯೋಜನೆ ಮಾಡಿದ್ದು, ಇದರಲ್ಲಿ 43,04,183 ಜನರಿಗೆ ಜಾಗೃತಿ ಮೂಡಿಸುವ ಕಾರ್ಯಗಳನ್ನು ಮಾಡಲಾಗಿದೆ. ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಲ್ಲಿ, ವೈದ್ಯಕೀಯ ಕಾಲೇಜು, ಸಾರ್ವಜನಿಕ ಸಭೆ ಸಮಾರಂಭಗಳಲ್ಲಿ ನಶಾ ಮುಕ್ತ ಭಾರತ್ ಅಭಿಯಾನ ಕುರಿತು ಜಾಗೃತಿ ಮೂಡಿಸಲಾಗುತ್ತಿದೆ. ಮಾದಕ ವಸ್ತುಗಳ ಬಳಕೆ ಮತ್ತು ಸೇವನೆಯ ದುಷ್ಪರಿಣಾಮಗಳು ಹಾಗೂ ಅವುಗಳ ನಿರ್ಮೂಲನೆ ಮಾಡಲು ನಶಾ ಮುಕ್ತ ಭಾರತ್ ಅಭಿಯಾನ ಸಹಕಾರಿಯಾಗಲಿದೆ ಎಂದರು.

ಕಾರ್ಯಕ್ರಮದಲ್ಲಿ ನಶಾ ಮುಕ್ತ ಭಾರತ ಅಭಿಯಾನದ ಪ್ರತಿಜ್ಞಾ ವಿಧಿಯನ್ನು ಜಿಲ್ಲಾಮಟ್ಟದ ಅಧಿಕಾರಿಗಳೊಂದಿಗೆ ಅಪರ ಜಿಲ್ಲಾಧಿಕಾರಿ ಸೈಯಿದಾ ಆಯಿಷಾ ಅವರು ಪ್ರತಿಜ್ಞೆಯನ್ನು ಸ್ವೀಕರಿಸಿದರು.

ಈ ಸಂದರ್ಭದಲ್ಲಿ ವಿಕಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಜಿಲ್ಲಾ ಅಧಿಕಾರಿ ಸತೀಶ್ ಪಾಣಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮಕ್ಕಳ ರಕ್ಷಣಾಧಿಕಾರಿ ಅನಿತಾ ಲಕ್ಷ್ಮೀ, ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.

Ramesh Babu

Journalist

Recent Posts

ಮಾರ್ಖಂಡೇಯ ಜಲಾಶಯದ ನೀರು ಪೋಲು ತಡೆಗೆ ಚಲುವರಾಯಸ್ವಾಮಿ ಖಡಕ್ ಸೂಚನೆ

ಬೆಳಗಾವಿ ಜಿಲ್ಲೆಯ ನೀರಾವರಿ ಯೋಜನೆಗಳ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಜಲಸಂಪನ್ಮೂಲ ಸಚಿವ ಎನ್‌. ಚಲುವರಾಯಸ್ವಾಮಿ ಅವರು ಅಧಿಕಾರಿಗಳಿಗೆ…

6 hours ago

ಪೊಲೀಸರೆಂದು ನಂಬಿಸಿ ವೃದ್ಧ ದಂಪತಿಗೆ ಚಿನ್ನಾಭರಣ ವಂಚನೆ: ಇಬ್ಬರು ಆರೋಪಿಗಳು ವಶಕ್ಕೆ: ದೂರುದಾರರಿಗೆ ಚಿನ್ನಾಭರಣ ಹಸ್ತಾಂತರ

ದೊಡ್ಡಬಳ್ಳಾಪುರ: ಪೊಲೀಸರೆಂದು ಪರಿಚಯಿಸಿಕೊಂಡು ವೃದ್ಧ ದಂಪತಿಯನ್ನು ನಂಬಿಸಿ ಚಿನ್ನಾಭರಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಮೂಲದ ಇಬ್ಬರು ಆರೋಪಿಗಳನ್ನು…

10 hours ago

ಮಳೆ ಕೊರತೆ; ಮತ್ಸ್ಯ ಕೃಷಿಗೂ ಹೊಡೆತ!

ಜಿಲ್ಲೆಯಲ್ಲಿ ಮಳೆ ಕೊರತೆ ಕೃಷಿ ಕ್ಷೇತ್ರದ ಜತೆಗೆ ಒಳನಾಡು ಮೀನುಗಾರಿಕೆಗೂ ತೀವ್ರ ಹೊಡೆತ ನೀಡಿದೆ. ಜಿಲ್ಲೆಯ ಬಹುತೇಕ ಕೆರೆಗಳು ನೀರಿಲ್ಲದೆ…

13 hours ago

ಬರಿದಾಗುತ್ತಿರುವ ಕರ್ನಾಟಕದ ಖಜಾನೆ…….

ಬರಿದಾಗುತ್ತಿರುವ ಕರ್ನಾಟಕದ ಖಜಾನೆ....... ಅಂದಿನ ಸಂಪಾದನೆ ಅಂದದಿಗೆ ಮಾತ್ರ ಎಂಬಂತಾಗಿದೆ...... ಬಹುತೇಕ ಕೆಳ ಮಧ್ಯಮ ವರ್ಗದ ಅಥವಾ ಬಡವರ ಮನೆಯ…

16 hours ago

ವಾಲ್ಮೀಕಿ ಜಯಂತಿ ರಜೆ ದಿನಾಂಕ ಬದಲು

ಬೆಂಗಳೂರು: ಮಹರ್ಷಿ ವಾಲ್ಮೀಕಿ ಜಯಂತಿಯ ಸಾರ್ವತ್ರಿಕ ರಜೆ ದಿನಾಂಕವನ್ನು ಬದಲಾಯಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಹಿಂದೆ…

1 day ago

ನೇಯ್ಗೆ ಉದ್ಯಮದ ಕಚ್ಚಾ ವಸ್ತುಗಳ ಬೆಲೆ ಏರಿಕೆಗೆ ಖಂಡನೆ: ನೇಕಾರ ಹೋರಾಟ ಸಮಿತಿಯಿಂದ ಪ್ರತಿಭಟನೆ

ದಿನದಿಂದ ದಿನಕ್ಕೆ ನೇಕಾರಿಕೆ ಮಾಡುವುದು ಕಷ್ಟವಾಗುತ್ತಿದೆ. ಸೀರೆ ಉತ್ಪಾದನೆಯಲ್ಲಿ ಬಳಸುವ ಕಚ್ಚ ಸಾಮಗ್ರಿಗಳ ಬೆಲೆ ಗಗನಕ್ಕೆರುತ್ತಿದೆ ಕೂಡಲೇ ಸರ್ಕಾರ ಮಧ್ಯೆ…

1 day ago