ನಾಗರಕೆರೆಯಲ್ಲಿ ಮೀನುಗಳು ಸಾವು ವಿಚಾರ: ಸ್ಥಳಕ್ಕೆ ಶಾಸಕ ಧೀರಜ್‌ ಮುನಿರಾಜ್ ಭೇಟಿ ಪರಿಶೀಲನೆ

ದೊಡ್ಡಬಳ್ಳಾಪುರ:ನಗರದ ಹೃದಯಭಾಗದ ನಾಗರಕೆರೆಯಲ್ಲಿ ನೂರಾರು ಮೀನುಗಳು ಮೃತಪಟ್ಟಿರುವ ಘಟನೆ ಬೆಳಕಿಗೆ ಬಂದಿದೆ.

ನಗರದಲ್ಲಿ ಶನಿವಾರ ಸಂಜೆ ಬಿದ್ದ ಮಳೆಯಲ್ಲಿ ಕಲುಷಿತ ನೀರು ನಾಗರಕೆರೆ ಅಂಗಳ ಸೇರಿದ್ದರಿಂದ ಕೆರೆಯಲ್ಲಿದ್ದ ಮೀನುಗಳು ಮೃತಪಟ್ಟು ತೇಲಿಕೊಂಡು ದಡಕ್ಕೆ ಬಂದಿವೆ ಎಂದು ಶಂಕಿಸಲಾಗಿದೆ.

ನಾಗರಕೆರೆ ಅಂಗಳದಲ್ಲೇ ಒಳಚರಂಡಿ ಪೈಪ್ ಲೈನ್ ಹಾಕಲಾಗಿದೆ. ಈ ನೀರಿನ ಸೋರಿಕೆಯಿಂದಲೂ ಕೆರೆಯಲ್ಲಿನ ನೀರು ಕಲುಷಿತವಾಗಿ ಮೀನುಗಳ ಸಾವಿಗೆ ಕಾರಣವಾಗಿದೆ ಎನ್ನಲಾಗಿದೆ.

ಇದಲ್ಲದೆ ನಗರಸಭೆ ವ್ಯಾಪ್ತಿಯಿಂದ ಶನಿವಾರ ಮುಂಗಾರು ಪೂರ್ವ ಮೊದಲ ಮಳೆ ಬಿದ್ದಿದ್ದರಿಂದ ರಸ್ತೆಗಳಲ್ಲಿನ ಹಾಗೂ ಚರಂಡಿಗಳಲ್ಲಿನ ಮಳೆಗಾಲದಿಂದಲೂ ನಿಂತಿದ್ದ ಕೊಚ್ಚೆಹರಿದು ಕೆರೆ ಅಂಗಳ ಸೇರಿದೆ. ಈ ಎಲ್ಲಾ ಕಾರಣಗಳಿಂದ ಮೀನು ಮೃತಪಟ್ಟರಬಹುದು ಎಂದು ಪರಿಸರವಾದಿಗಳು ಅನುಮಾನ ವ್ಯಕ್ತಪಡಿಸಿದ್ದಾರೆ.

ನಾಗರಕೆರೆ ಯಲ್ಲಿನ ಮ್ಯಾನ್‌ ಹೋಲ್ ತೆರವು ಮಾಡಬೇಕು. ಕೆರೆಯ ಪುನಶ್ವೇತನಗೊಳಿಸಿ, ಮಲಿನ ನೀರು ಕೆರೆ ಸೇರದಂತೆ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.

ಈ ಹಿನ್ನೆಲೆ ಇಂದು ಶಾಸಕ ಧೀರಜ್ ಮುನಿರಾಜ್ ಸ್ಥಳಕ್ಕೆ ಭೇಟಿ ನೀಡಿ ಅಲ್ಲಿನ ಸ್ವಚ್ಛತಾ ಕಾರ್ಯ ಹಾಗೂ ಮೀನುಗಳ ಉಳಿವಿಗೆ ಸೂಕ್ತ ಕ್ರಮ ಕೈಗೊಳ್ಳುವ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿದರು.

ಈ ಸಂದರ್ಭದಲ್ಲಿ ನಗರಸಭೆ ಪೌರಾಯುಕ್ತ ಕಾರ್ತೀಕೇಶ್ವರ್, ಸಣ್ಣ ನೀರಾವರಿ ಇಲಾಖೆ ಅಧಿಕಾರಿಗಳು, ನಗರಸಭಾ ಸದಸ್ಯರು ಮತ್ತು ಇತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ವಾಲ್ಮೀಕಿ ಜಯಂತಿ ರಜೆ ದಿನಾಂಕ ಬದಲು

ಬೆಂಗಳೂರು: ಮಹರ್ಷಿ ವಾಲ್ಮೀಕಿ ಜಯಂತಿಯ ಸಾರ್ವತ್ರಿಕ ರಜೆ ದಿನಾಂಕವನ್ನು ಬದಲಾಯಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಹಿಂದೆ…

3 hours ago

ನೇಯ್ಗೆ ಉದ್ಯಮದ ಕಚ್ಚಾ ವಸ್ತುಗಳ ಬೆಲೆ ಏರಿಕೆಗೆ ಖಂಡನೆ: ನೇಕಾರ ಹೋರಾಟ ಸಮಿತಿಯಿಂದ ಪ್ರತಿಭಟನೆ

ದಿನದಿಂದ ದಿನಕ್ಕೆ ನೇಕಾರಿಕೆ ಮಾಡುವುದು ಕಷ್ಟವಾಗುತ್ತಿದೆ. ಸೀರೆ ಉತ್ಪಾದನೆಯಲ್ಲಿ ಬಳಸುವ ಕಚ್ಚ ಸಾಮಗ್ರಿಗಳ ಬೆಲೆ ಗಗನಕ್ಕೆರುತ್ತಿದೆ ಕೂಡಲೇ ಸರ್ಕಾರ ಮಧ್ಯೆ…

6 hours ago

ಜಗಳ ಬಿಡಿಸಲು ಹೋದ ಪೊಲೀಸರ ಮೇಲೆಯೇ ಹಲ್ಲೆ ಆರೋಪ: 112 ತುರ್ತು ಸೇವೆ ಸಿಬ್ಬಂದಿಗೆ ಗಾಯ: ಇಬ್ಬರು ಆರೋಪಿಗಳು ವಶಕ್ಕೆ

ದೊಡ್ಡಬಳ್ಳಾಪುರ: ಕುಡಿದ ಮತ್ತಿನಲ್ಲಿ ಪರಸ್ಪರ ಜಗಳವಾಡುತ್ತಿದ್ದವರನ್ನು ಬಿಡಿಸಲು ತೆರಳಿದ್ದ 112 ತುರ್ತು ಸೇವೆಯ ಪೊಲೀಸರ ಮೇಲೆಯೇ ಹಲ್ಲೆ ನಡೆಸಿದ ಆರೋಪ…

8 hours ago

ಮ್ಯಾನ್‌ಹೋಲ್ ತುಂಬಿ ಹೆದ್ದಾರಿಗೆ ಹರಿದ ಕೊಳಚೆ ನೀರು

ದೊಡ್ಡಬಳ್ಳಾಪುರ: ನಗರದ ಡಾ. ಬಿ.ಆರ್. ಅಂಬೇಡ್ಕರ್ (ಟಿಬಿ) ವೃತ್ತದಲ್ಲಿ ಮ್ಯಾನ್‌ಹೋಲ್ ತುಂಬಿ ತುಳುಕುತ್ತಿದ್ದು, ಕೊಳಚೆ ನೀರು ಹೆದ್ದಾರಿಗೆ ಹರಿದು ವಾಹನ…

11 hours ago

ಎಸಿ ಕಚೇರಿ ಮೇಲೆ ಲೋಕಾಯುಕ್ತ ದಾಳಿ: ಕಚೇರಿಯ ಕೆಲ ಅಧಿಕಾರಿಗಳು, ಸಿಬ್ಬಂದಿ ನಾಪತ್ತೆ: ಅಧಿಕಾರಿಗಳಿಗಾಗಿ ಕಾಯುತ್ತಿರುವ ಸಾರ್ವಜನಿಕರು

ದೊಡ್ಡಬಳ್ಳಾಪುರ: ನಗರದ ಉಪವಿಭಾಗಾಧಿಕಾರಿ (ಎಸಿ) ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಕಚೇರಿಯಲ್ಲಿ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ಲೋಕಾಯುಕ್ತ…

12 hours ago

ಸ್ಪರ್ಧಾತ್ಮಕ ಜಗತ್ತಿಗೆ ಮಕ್ಕಳನ್ನು ಅಣಿಗೊಳಿಸಿ- ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ವಿಜೇತ ನೀಲಕಂಠ ಗವಾಂಕರ್ ಸಲಹೆ

ಜಗತ್ತು ದಿನದಿಂದ ದಿನಕ್ಕೆ ವೇಗವಾಗಿ ಬದಲಾಗುತ್ತಿದ್ದು, ಹೆಚ್ಚುತ್ತಿರುವ ಸ್ಪರ್ಧೆಯನ್ನು ಎದುರಿಸುವ ಸಾಮರ್ಥ್ಯವನ್ನು ಮಕ್ಕಳಲ್ಲಿ ಬೆಳೆಸಲು ಪೋಷಕರು ಹಾಗೂ ಶಿಕ್ಷಕರು ಒಟ್ಟಾಗಿ…

1 day ago