ನಾಗರಕೆರೆ ಏರಿ ಆಂಜನೇಯಸ್ವಾಮಿ ದೇವಾಲಯದಲ್ಲಿ ಕಳ್ಳತನ

ನಗರದ ನಾಗರಕೆರೆ ಏರಿಯ ಶ್ರೀ ಆಂಜನೇಯಸ್ವಾಮಿ ದೇವಾಲಯದಲ್ಲಿ ಹುಂಡಿ ಹಣ ಹಾಗೂ ಪೂಜಾ ಸಾಮಗ್ರಿಗಳು ಕಳ್ಳತನವಾಗಿರುವ ಘಟನೆ ಮಂಗಳವಾರ ರಾತ್ರಿ ನಡೆದಿದೆ.

ದೇವಾಲಯದ ಮುಂಭಾಗದ ಚಿಲಕವನ್ನು ಕೊಯ್ದು, ಒಳ ನುಗ್ಗಿರುವ ಕಳ್ಳರು ದೇವಾಲಯದಲ್ಲಿನ ಎರಡು ಸಣ್ಣ ಹುಂಡಿಗಳನ್ನು ಹೊಡೆದು ಹುಂಡಿಯಲ್ಲಿದ ಹಣ ದೋಚಿದ್ದಾರೆ. ಇದರೊಂದಿಗೆ ದೇವಾಲಯದ ಗರ್ಭಗುಡಿಯಲ್ಲಿದ್ದ ಸಾವಿರಾರು ರೂ. ಮೌಲ್ಯದ ತೂಗುದೀಪ, ಮಂಗಳಾರತಿ ತಟ್ಟೆ, ಸಣ್ಣ ಕಿರೀಟವನ್ನು ಕಳ್ಳತನ ಮಾಡಿದ್ದಾರೆ. ಹುಂಡಿಯಲ್ಲಿ ಅಷ್ಟೇನೂ ಹಣ ಇರಲಿಲ್ಲ ಎಂದು ತಿಳಿದು ಬಂದಿದೆ. ಆದರೆ ಹಿತ್ತಾಳಿಯ ಪೂಜಾ ಸಾಮಗ್ರಿಗಳು ಸುಮಾರು 10 ಸಾವಿರ ರೂ ಬೆಲೆ ಬಾಳಲಿವೆ ಎಂದು ದೇವಾಲಯದ ಸಮಿತಿಯವರು ಮಾಹಿತಿ ನೀಡಿದ್ದಾರೆ.

ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ದೇವಾಲಯದ ಬಳಿ ರಾತ್ರಿ ಸಂಚಾರ ಇರುವುದಿಲ್ಲ. ನಾಗರಕೆರೆ ಏರಿ ಮೇಲೆ ಬೆಳಿಗ್ಗೆ ಮತ್ತು ಸಂಜೆ ವಾಯು ಸಂಚಾರ ಮಾಡುವವರಿಗೆ ರಕ್ಷಣೆ ಒದಗಿಸಲು ಪೊಲೀಸ್ ಬೀಟ್ ಹಾಕಲಾಗಿದೆ. ಆದರೂ, ಮಧ್ಯರಾತ್ರಿ ಈ ಘಟನೆ ನಡೆದಿದ್ದು, ರಾತ್ರಿ ವೇಳೆಯೂ ಪೊಲೀಸ್ ಬೀಟ್ ಹಾಕಬೇಕೆಂದು ಸ್ಥಳೀಯರು ಮನವಿ ಮಾಡಿದ್ದಾರೆ.

Ramesh Babu

Journalist

Recent Posts

ನಾನು ಜೆಡಿಎಸ್ ತಾಲೂಕು ಅಧ್ಯಕ್ಷ ಸ್ಥಾನಕ್ಕಾಗಿ ವರಿಷ್ಠರ ಬಳಿ ಕೇಳಿದ್ದೇನೆ- ಪಕ್ಷದ ಹೈಕಮಾಂಡ್ ತೀರ್ಮಾನಕ್ಕೆ ಬದ್ಧ- ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಹರೀಶ್ ಗೌಡ

ನಾನು ಜೆಡಿಎಸ್ ತಾಲೂಕು ಅಧ್ಯಕ್ಷ ಸ್ಥಾನಕ್ಕಾಗಿ ವರಿಷ್ಠರ ಬಳಿ ಕೇಳಿದ್ದೇನೆ. ಪಕ್ಷದ ಹೈಕಮಾಂಡ್ ತೀರ್ಮಾನಕ್ಕೆ ಬದ್ಧನಾಗಿರುತ್ತೇನೆ. ಪಕ್ಷದ ವರಿಷ್ಠರು ಯಾವುದೇ…

3 hours ago

ಹೆಣ್ಣಿನ‌ ಹಿತರಕ್ಷಣೆಗಾಗಿ ಮಹಿಳಾ ಪೊಲೀಸ್ ಠಾಣೆ ಸದಾ ಸನ್ನದ್ಧ- ಮಹಿಳಾ ಪೊಲೀಸ್ ಠಾಣೆ ಸಬ್ ಇನ್ಸ್ ಪೆಕ್ಟರ್ ಪಂಕಜಾ

ಹೆಣ್ಣಿನ‌ ಹಿತರಕ್ಷಣೆಗಾಗಿ ದೊಡ್ಡಬಳ್ಳಾಪುರದಲ್ಲಿ ಮಹಿಳಾ ಪೊಲೀಸ್ ಠಾಣೆಯನ್ನು ಸ್ಥಾಪನೆ ಮಾಡಲಾಗಿದೆ..ಈ ಮಹಿಳಾ ಠಾಣೆಯಲ್ಲಿ ಅತ್ಯಾಚಾರ, ವರದಕ್ಷಿಣೆ ನಿಷೇಧ ಕಾಯ್ದೆ, ಮಕ್ಕಳ…

6 hours ago

ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ವ್ಯಕ್ತಿತ್ವ ಮತ್ತು ಸಾಧನೆ

ಡಾಕ್ಟರ್ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಹುಟ್ಟು ಹಬ್ಬದ ಮುನ್ನ ( ಏಪ್ರಿಲ್ ‌14 ) ಅವರ ವ್ಯಕ್ತಿತ್ವ ಮತ್ತು…

16 hours ago

Документ_12

In der heutigen akademischen Welt steht die Qualität der schriftlichen Arbeiten im Mittelpunkt des Interesses.…

21 hours ago

‘ಆಸರೆ’ ಯೋಜನೆ: ಒಂಟಿ ಮಹಿಳೆಯರು ಮತ್ತು ಹಿರಿಯ ನಾಗರಿಕರ ಸುರಕ್ಷತೆ, ಭದ್ರತೆ, ಆರೋಗ್ಯ ನೆರವು ಹಾಗೂ ಯೋಗಕ್ಷೇಮ ವಿಚಾರಣೆ

'ಆಸರೆ' ಯೋಜನೆ ಅಂಗವಾಗಿ ಇಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ದುರ್ಗೇನಹಳ್ಳಿ ಐಯಮ್ಮನಹಳ್ಳಿ ಹಾಗೂ ಇತರೆ ಗ್ರಾಮಗಳಿಗೆ ಪೊಲೀಸ್…

1 day ago

ಊಹಾ ಪತ್ರಿಕೋದ್ಯಮ ಅತ್ಯಂತ ಅಪಾಯಕಾರಿಯಾದದ್ದು- ಸಿಎಂ ಸಿದ್ದರಾಮಯ್ಯ

ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ಪ್ರಶ್ನಿಸಿಕೊಳ್ಳಬೇಕು ಎಂದು ಸಿಎಂ‌ ಸಿದ್ದರಾಮಯ್ಯ ಹೇಳಿದ್ದಾರೆ..…

1 day ago