ನಾಗರಹೊಳೆ ಉದ್ಯಾನದಂಚಿನ ವೀರನಹೊಸಹಳ್ಳಿ ಪ್ರಾದೇಶಿಕ ಅರಣ್ಯದಲ್ಲಿ ಜಿಂಕೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ವೇಳೆ ಆರೋಪಿಯನ್ನು ಕಿರಂಗೂರು ಗೇಟ್ ಬಳಿಯಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದರೆ. ಮತ್ತಿಬ್ಬರು ಆರೋಪಿಗಳು ಪರಾರಿಯಾಗಿದ್ದಾರೆ.
ಉದ್ಯಾನದಂಚಿನ ಹನಗೋಡು ಹೋಬಳಿಯ ಭರತವಾಡಿ ಹಾಡಿಯ ರುದ್ರ ಬಂಧಿತ ಆರೋಪಿ, ಈತನಿಂದ ಎರಡು ಕೆ.ಜಿಯಷ್ಟು ಜಿಂಕೆ ಮಾಂಸ, ಕೃತ್ಯಕ್ಕೆ ಬಳಸಿದ್ದ ಬೈಕ್, ಒಂದು ಮೊಬೈಲ್ ವಶಕ್ಕೆ ಪಡೆದಿದ್ದಾರೆ. ಮತ್ತಿಬ್ಬರು ಆರೋಪಿಗಳಾದ ಕಪ್ಪನಕಟ್ಟೆ ಹಾಡಿಯ ರಾಮು ಹಾಗೂ ಅವ್ವು ತಲೆ ಮರೆಸಿಕೊಂಡಿದ್ದಾರೆ.
ಆರೋಪಿಗಳು ಜಿಂಕೆಯನ್ನು ಬೇಟೆಯಾಡಿ ಮಾಂಸವನ್ನು ಮಾರಾಟ ಮಾಡುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿ ಮೇರೆಗೆ ಹುಣಸೂರು ವನ್ಯಜೀವಿ ವಿಭಾಗದ ಆರ್.ಎಫ್.ಓ.ಸುಬ್ರಮಣ್ಯ ಕೆ.ಇ, ಆನೆಚೌಕೂರು ವಲಯದ ಡಿಆರ್ಎಫ್ಓ ಶಿವಕುಮಾರ್ ಹಾಗೂ ಗಸ್ತು ಅರಣ್ಯ ಪಾಲಕರು ಹಾಗೂ ಸಿಬ್ಬಂದಿ ಹನಗೋಡಿಗೆ ಸಮೀಪದ ಕಿರಂಗೂರು ಗೇಟ್ ಬಳಿ ದಾಳಿ ನಡೆಸಿ ವಶಪಡಿಸಿಕೊಳ್ಳಲಾಗಿದೆ.
ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೊಪ್ಪಿಸಲಾಗಿದ್ದು, ಉಳಿದಿಬ್ಬರು ಆರೋಪಿಗಳ ಪತ್ತೆಗೆ ಕ್ರಮವಹಿಸಲಾಗಿದೆ ಎಂದು ನಾಗರಹೊಳೆ ಹುಲಿಯೋಜನೆ ನಿರ್ದೇಶಕಿ ಪಿ.ಎ.ಸೀಮಾ ತಿಳಿಸಿದ್ದಾರೆ.
ದೇಗುಲದ ಪ್ರಸಾದದಿಂದ ಹೊಟ್ಟೆ ತುಂಬಿಸಿಕೊಳ್ಳುವುದು, ದೇವಸ್ಥಾನದ ಬೀದಿಯಲ್ಲಿ ಭಿಕ್ಷಾಟನೆ ಮಾಡುವುದು, ರಾತ್ರಿ ವೇಳೆ ಬಂಡೆಗಳ ಪೊಟರೆ ಹಾಗೂ ಪೊದೆಗಳ ನಡುವೆ…
ಟಾಕ್ಸಿಕ್ ಎಂಬ ಸಿನಿಮಾ ಪ್ರೇಕ್ಷಕರನ್ನು ತಲುಪುವಲ್ಲಿ ವಿಫಲವಾದ ಕೆಲವೇ ದಿನಗಳ ನಂತರ ಪ್ರೇಮದ ಊರಲಿ ಎಂಬ ಸಿನಿಮಾ ಸ್ವಲ್ಪ ಮಟ್ಟಿಗೆ…
ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಕ್ಷೇತ್ರಗಳ ಮೀಸಲಾತಿ ವಿವರ
ಸಾರ್ವಜನಿಕರ ಕೆಲಸಗಳು ತಾಲೂಕು ಕಚೇರಿಗಳಲ್ಲಿ ಯಾವುದೇ ವಿಳಂಬವಿಲ್ಲದೆ ನಡೆಯಬೇಕು. ಕಂದಾಯ ದಾಖಲೆಗಳ ನಿರ್ವಹಣೆ, ಭೂಮಿಗೆ ಸಂಬಂಧಿಸಿದ ಅರ್ಜಿಗಳ ವಿಲೇವಾರಿ ಹಾಗೂ…
ಅ.07-10-2026: ಬ್ಯಾಂಕಾಕ್‌ನಿಂದ ಬೆಂಗಳೂರಿಗೆ ಆಗಮಿಸಿದ ಪ್ರಯಾಣಿಕರೊಬ್ಬರನ್ನು ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳು ತಪಾಸಣೆ ನಡೆಸಿ, ಚೆಕ್-ಇನ್ ಬ್ಯಾಗೇಜ್‌ನಲ್ಲಿ ಅಡಗಿಸಿಟ್ಟಿದ್ದ 942 ಗ್ರಾಂ…
ದೇವನಹಳ್ಳಿ: ಸಾರ್ವಜನಿಕರಿಂದ ಬಂದ ದೂರುಗಳ ಹಿನ್ನೆಲೆಯಲ್ಲಿ ಕಂದಾಯ ಸಚಿವ ಡಾ. ಜಿ. ಪರಮೇಶ್ವರ್ ಅವರು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ…