ಭಾರತೀಯ ಅರಣ್ಯ ಸೇವೆ (IFS) ಅಧಿಕಾರಿ, ಮೂಲತಹ ನಾಪೋಕ್ಲುವಿನ ಪಾಡ್ಯಮಂಡ ಆನಂದ್ (ಸಾಬು)-ಕಮಲ ದಂಪತಿ ಪುತ್ರಿ ಪಿ.ಎ ಸೀಮಾ ರವರು ನಾಗರಹೊಳೆ ಹುಲಿ ಸಂರಕ್ಷಿತ ಅರಣ್ಯದ ಮೊಟ್ಟ ಮೊದಲ ಮಹಿಳಾ ನಿರ್ದೇಶಕಿಯಾಗಿ ಆಗಸ್ಟ್ 14ರಂದು ನೇಮಕಗೊಂಡಿದ್ದಾರೆ.
ಕರ್ನಾಟಕ ಸರ್ಕಾರದಲ್ಲಿ ಮೊಟ್ಟ ಮೊದಲ ಬಾರಿಗೆ ಈ ಪ್ರತಿಷ್ಠಿತ ಹುದ್ದೆಯನ್ನು ಅಲಂಕರಿಸಿದ ಮಹಿಳೆ ಎಂದೆನಿಸಿಕೊಂಡಿದ್ದಾರೆ.
ಸೀಮಾ ಅವರು ಈ ಹಿಂದೆ ಹುಣಸೂರು ವಿಭಾಗದ ಡಿ.ಸಿ.ಎಫ್ ಆಗಿ ಸೇವೆ ಸಲಿಸಿದ್ದರು. 2017ರ ಗುಂಪಿನ ಇವರು ಮೈಸೂರು, ಮಂಡ್ಯ ಹುಣಸೂರು, ಮಡಿಕೇರಿಯಲ್ಲಿ ಡಿ ಸಿ ಎಫ್ ಆಗಿ ಸೇವೆ ಸಲ್ಲಿಸಿದ್ದರು.
ಕಳೆದ ಎರಡು ವರ್ಷಗಳ ಹಿಂದೆ ಆನೆಗಳ ಕಾರ್ಯಪಡೆಯ ಹೆಚ್ಚುವರಿ ಡಿ.ಸಿ.ಎಫ್ ಆಗಿ ಕಾರ್ಯನಿರ್ವಹಿಸಿ ಹುಣಸೂರು ಹಾಗೂ ಕೆ ಆರ್ ನಗರದ ವಿಭಾಗದಲ್ಲಿ ಮಾನವ ಹಾಗೂ ಆನೆಗಳ ನಡುವೆ ಸಂಘರ್ಷವನ್ನು ತಡೆಗಟ್ಟುವಲ್ಲಿ ಯಶಸ್ವಿಯಾಗಿ ಪ್ರಶಂಸೆಗೆ ಒಳಗಾಗಿದ್ದರು.
ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶ ಕೇರಳ ಕರ್ನಾಟಕ ಭಾಗ ಹಾಗೂ ಕೊಡಗು ಮತ್ತು ಮೈಸೂರು ಗಡಿ ಭಾಗವನ್ನು ಕೂಡ ಹೊಂದಿದ್ದು, ಇಲ್ಲಿ ನಿರಂತರ ಬೇಟೆಯಾಡುವುದು ಹಾಗೂ ಆನೆ ಮಾನವ ನಡುವೆ ಸಂಘರ್ಷವನ್ನು ತಡೆಗಟ್ಟಲು ಉತ್ತಮ ಅಧಿಕಾರಿಯ ನಿರೀಕ್ಷೆಯಲ್ಲಿದ್ದ ಸ್ಥಳೀಯರಿಗೆ ಪಿ.ಎ ಸೀಮಾ ರವರ ಆಯ್ಕೆ ಹೆಚ್ಚಿನ ನಿರೀಕ್ಷೆಯನ್ನು ಮೂಡಿಸಿದೆ.
ದೊಡ್ಡಬಳ್ಳಾಪುರ ತಾಲೂಕಿನ ತಿರುಮಗೊಂಡನಹಳ್ಳಿ ಗ್ರಾಮದ ಮೂಲಕ ಹಾದುಹೋಗುವ ಶ್ರೀ ಘಾಟಿ ಸುಬ್ರಹ್ಮಣ್ಯ ದೇವಾಸ್ಥನ ರಸ್ತೆಗೆ ಅಡ್ಡಲಾಗಿ ರೈಲು ಹಳಿ ಹಾದುಹೋಗಿದ್ದು,…
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಆಡಳಿತದಲ್ಲಿ ಪಾರದರ್ಶಕತೆ ಮತ್ತು ಹೊಣೆಗಾರಿಕೆ ಉತ್ತೇಜಿಸುವ ಹಾಗು ಸಾರ್ವಜನಿಕ ದಾಖಲೆಗಳನ್ನು ಮುಕ್ತವಾಗಿ ಜನರ ಮುಂದೆ ಇಡುವುದು ಮಾಹಿತಿ…
ಧರ್ಮಸ್ಥಳ ಕೇಸ್ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ವಿ.ಸೋಮಣ್ಣ ಪ್ರತಿಕ್ರಿಯೆ ನೀಡಿ, ಧರ್ಮಸ್ಥಳ ವಿಶ್ವದಲ್ಲೇ ಪವಿತ್ರವಾದ ಸ್ಥಳ. ಅವಷೇಶ ಮತ್ತೊಂದು…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಹಾಡೋನಹಳ್ಳಿ ಕೃಷಿ ವಿಜ್ಞಾನ ಕೇಂದ್ರದಲ್ಲಿ ಆಯೋಜಿಸಲಾಗಿದ್ದ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ…
ಮೈಸೂರಿನ ಕೆಆರ್ ನಗರದ ಮಹಿಳೆಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದಲ್ಲಿ ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ದೋಷಿ ಎಂದು…
ಬೆಂಗಳೂರು ವಿಶ್ವವಿದ್ಯಾಲಯ ಕನ್ನಡ ಅಧ್ಯಯನ ಕೇಂದ್ರದಲ್ಲಿ ನಡೆದ ಕರ್ನಾಟಕ ಸೂಫಿಗಳ ಸಾಹಿತ್ಯ ಸಂಸ್ಕೃತಿ ಅನುಸಂಧಾನ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ…