ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ಇಲಾಖಾ ವತಿಯಿಂದ ನಾಗರೀಕ ಬಂದೂಕು ತರಬೇತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.
ತರಬೇತಿ ಪಡೆಯಲಿಚ್ಚಿಸುವ ನಾಗರೀಕರು ಯಾವುದೇ ಅಪರಾಧ ಹಿನ್ನೆಲೆ ಹೊಂದಿರಬಾರದು. 18 ವರ್ಷ ಮೇಲ್ಪಟ್ಟ ಆರೋಗ್ಯವಂತರಾಗಿರಬೇಕು. ಆಸಕ್ತ ನಾಗರೀಕರು ಸಮೀಪದ ಪೊಲೀಸ್ ಠಾಣೆಗಳಲ್ಲಿ ಅರ್ಜಿಯನ್ನು ಪಡೆದು ಇತ್ತೀಚಿನ 3 ಭಾವಚಿತ್ರಗಳು, ವೈದ್ಯಕೀಯ ಪ್ರಮಾಣ ಪತ್ರ, ಆಧಾರ್ ಕಾರ್ಡ್ ಪ್ರತಿಗಳನ್ನು ಭರ್ತಿ ಮಾಡಿದ ಅರ್ಜಿಗೆ ಲಗತ್ತಿಸಿ ಠಾಣೆಗೆ ಫೆ.22 ರೊಳಗೆ ಸಲ್ಲಿಸುವುದು.
ತರಬೇತಿಯು ಫೆ.24 ರಿಂದ ಮಾ.2 ರವರೆಗೆ ಬೆಳಿಗ್ಗೆ 7:00 ರಿಂದ 9:30 ಗಂಟೆಯವರೆಗೆ ಹೊಸಕೋಟೆ ತಾಲ್ಲೂಕಿನಲ್ಲಿ ಆಯೋಜಿಸಲಾಗುತ್ತದೆ. ಮಹಿಳೆಯರಿಗೆ ಪ್ರಥಮ ಆದ್ಯತೆ ಇರುತ್ತದೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ಪ್ರಕಟಣೆಯಲ್ಲಿ ತಿಳಿಸಿದೆ.