ನಾಗರ ಪಂಚಮಿ: ಘಾಟಿ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸಂಭ್ರಮದ ನಾಗಾರಾಧನೆ

ಇಂದು ನಾಡಿನಾದ್ಯಂತ ಶ್ರಾವಣ ಮಾಸದ ಮೊದಲ‌ ಹಬ್ಬವಾದ ನಾಗರ ಪಂಚಮಿ ಹಿನ್ನೆಲೆ, ತಾಲೂಕಿನ ಪ್ರಸಿದ್ಧ ಶ್ರೀ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನಾಗದೋಷ ನಿವಾರಣೆಗಾಗಿ ನಾಗರಕಲ್ಲುಗಳಿಗೆ ಹಾಲು, ತುಪ್ಪ, ನೀರು ಎರೆದು ಪೂಜೆ ಸಲ್ಲಿಸಿದ ಭಕ್ತಾದಿಗಳು.

ನಾಗರ ಕಲ್ಲುಗಳನ್ನು ಶುದ್ಧ ನೀರಿನಿಂದ ತೊಳೆದು ಅರಿಶಿನ ಕುಂಕುಮ ಹೂಗಳಿಂದ ಅಲಂಕರಿಸಿದ ನಂತರ ನಾಗರ ಕಲ್ಲಿಗೆ ಹಾಲೆರೆದು ಹರಕೆ ತೀರಿಸಿದ ಭಕ್ತಾದಿಗಳು. ಪ್ರತಿ ವರ್ಷ ನಾಗರಪಂಚಮಿ ದಿನದಂದು ನಾಗರಕಲ್ಲಿಗೆ ತಣ್ಣೀರು ಎರೆದರೆ ಸರ್ಪದೋಷ ನಿವಾರಣೆಯಾಗಲಿದೆ ಎಂಬ ನಂಬಿಕೆ ಹಿನ್ನೆಲೆ ನಾಗ ದೇವರಿಗೆ ವಿಶೇಷ ಪೂಜೆ ನೆರವೇರಿಸಿ ತಣ್ಣೀರು ಎರೆದ ಭಕ್ತರು.

ಕ್ಷೇತ್ರದಲ್ಲಿ ಸಾವಿರಾರು ನಾಗರ ವಿಗ್ರಹಗಳನ್ನು ಪ್ರತಿಷ್ಠಾಪಿಸಲಾಗಿದೆ. ದೇವಾಲಯದ ಹೊರಗೆ ಸುಮಾರು 10 ಸಾವಿರಕ್ಕೂ ಹೆಚ್ಚು ನಾಗರಕಲ್ಲುಗಳನ್ನು ಪ್ರತಿಷ್ಠಾಪಿಸಲಾಗಿದೆ.

ನಾವು ಯಾವುದೇ ಶುಭ ಕಾರ್ಯ ಮಾಡಬೇಕೆಂದರೆ ಗಣಪತಿ ಹಾಗೂ ಶ್ರೀ ಘಾಟಿ ಸುಬ್ರಹ್ಮಣ್ಯ ದೇವರ ಅನುಗ್ರಹ ಬೇಕೆ ಬೇಕು. ಪ್ರತಿ ವರ್ಷದಂತೆ ಈ ವರ್ಷವೂ ಸಹ ಘಾಟಿ ಕ್ಷೇತ್ರದಲ್ಲಿ ನಾಗಾರಾಧನೆ‌ ಮಾಡುತ್ತಿದ್ದೇವೆ. ದೇವರು ನಮಗೆ ಎಲ್ಲಾ ರೀತಿಯಲ್ಲಿ ಒಳ್ಳೆದು ಮಾಡಿದ್ದಾರೆ ಎಂದು ಶಶಿಕಲಾ ತಿಳಿಸಿದರು.

ಘಾಟಿ ಸುಬ್ರಹ್ಮಣ್ಯ ದೇವರ ಸನ್ನಿಧಿಯಲ್ಲಿರುವ ನಾಗರ‌ಕಲ್ಲಿಗೆ ಹಾಲಿನಾಭಿಷೇಕ, ತುಪ್ಪದಾಭಿಷೇಕ, ನೀರಿನಾಭಿಷೇಕ ಮಾಡಿದರೆ ನಾಗದೋಷ‌ ನಿವಾರಣೆಯಾಗುತ್ತದೆ ಎಂಬ ನಂಬಿಕೆಯಿಂದ ಕಳೆದ ಹತ್ತು ವರ್ಷಗಳಿಂದಲೇ ದೇವಸ್ಥಾನ ಹಿಂಭಾಗದಲ್ಲಿ ನಾಗರ ಕಲ್ಲನ್ನು ಪ್ರತಿಷ್ಠಾಪಿಸಿ ಪ್ರತಿ ವರ್ಷ ಪೂಜೆ ಪುನಸ್ಕಾರ ಮಾಡುತ್ತಿರುವುದರಿಂದ ನಮಗೆ ಒಳ್ಳೆಯದು ಆಗಿದೆ ಎಂದು ಶಿವಕುಮಾರ್ ತಿಳಿಸಿದರು.

Ramesh Babu

Journalist

Recent Posts

ಯೋಜನಾ ಪ್ರಾಧಿಕಾರಕ್ಕೆ ಮುನಿರಾಜು ಆಯ್ಕೆ: ಯುವ ಕಾಂಗ್ರೆಸ್‌ನಿಂದ ಆತ್ಮೀಯ ಅಭಿನಂದನೆ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…

4 hours ago

ವಿಯೆಟ್ನಾಂನಿಂದ 1.38 ಕೋಟಿ ಮೌಲ್ಯದ ಹೈಡ್ರೋಫೋನಿಕ್ ಗಾಂಜಾ ಸಾಗಾಟ: ಆರೋಪಿ ಬಂಧನ

ದೇವನಹಳ್ಳಿ: ವಿಯೆಟ್ನಾಂನ ಹಾನೊಯ್ ನಗರದಿಂದ ಬೆಂಗಳೂರಿಗೆ ವಿಮಾನದ ಮೂಲಕ ಹೈಡ್ರೋಫೋನಿಕ್ ಗಾಂಜಾ ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಯನ್ನು ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ…

5 hours ago

ಗೃಹಜ್ಯೋತಿಗೆ ಮನೆಮನೆ ಬಾಗಿಲು ತಟ್ಟಿದ ಬೆಸ್ಕಾಂ:

ದೊಡ್ಡಬಳ್ಳಾಪುರ: ರಾಜ್ಯ ಸರ್ಕಾರದ ಪ್ರಮುಖ ಯೋಜನೆಗಳಲ್ಲಿ ಒಂದಾದ ಗೃಹಜ್ಯೋತಿ ಯೋಜನೆಯ ಫಲಾನುಭವಿಗಳ ಮರುಪರಿಶೀಲನೆ ಕಾರ್ಯ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ವೇಗ…

7 hours ago

ಜನರನ್ನು ತಾಲೂಕು ಕಚೇರಿಗೆ ಅಲೆದಾಟ ತಪ್ಪಿಸಿ ಸ್ಥಳದಲ್ಲೇ ಸಮಸ್ಯೆ ಪರಿಹರಿಸಿ- ಶಾಸಕ ಕೊತ್ತೂರು ಮಂಜುನಾಥ್

ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…

20 hours ago

ಭಾರತಕ್ಕೆ ಕ್ಸಿ ಜಿನ್‌ಪಿಂಗ್ ಭೇಟಿ: ಮೋದಿ–ಕ್ಸಿ ದ್ವಿಪಕ್ಷೀಯ ಮಾತುಕತೆ ಇಂದು

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…

24 hours ago

ಮಧುರೆ ದೇವಾಲಯದ ಬಳಿ ಮೇಲ್ಸೇತುವೆ ಅವ್ಯವಸ್ಥೆ: ಮೇಲಕ್ಕೆ ಚಾಚಿರುವ ಕಂಬಿಗಳಿಂದ ವಾಹನ ಸವಾರರಿಗೆ ತೊಂದರೆ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…

1 day ago