“ಬೆಂಗಳೂರು ನಿರ್ಮಾತೃ, ನಾಡಪ್ರಭು ಶ್ರೀ ಕೆಂಪೇಗೌಡರ 514ನೇ ಜಯಂತಿ” ಅಂಗವಾಗಿ ಇಂದು ಬೆಳಗ್ಗೆ ದೇವನಹಳ್ಳಿಯ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿರುವ “ನಾಡಪ್ರಭು ಕೆಂಪೇಗೌಡರ 108 ಅಡಿ ಎತ್ತರದ ಭವ್ಯ ಕಂಚಿನ ಪ್ರಗತಿಯ ಪ್ರತಿಮೆ”ಗೆ ಆಹಾರ ಮತ್ತು ನಾಗರಿಕ ಸರಬರಾಜು, ಗ್ರಾಹಕ ವ್ಯವಹಾರಗಳ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್.ಮುನಿಯಪ್ಪ ಅವರು ಪುಷ್ಪಾರ್ಚನೆ ಮಾಡುವ ಮೂಲಕ ಗೌರವ ನಮನ ಸಲ್ಲಿಸಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಶಿವಶಂಕರ.ಎನ್, ದೊಡ್ಡಬಳ್ಳಾಪುರ ಉಪವಿಭಾಗಾಧಿಕಾರಿ ಎಂ.ಶ್ರೀನಿವಾಸ್, ದೇವನಹಳ್ಳಿ ತಹಶೀಲ್ದಾರ್ ಶಿವರಾಜ್ ಸೇರಿದಂತೆ ಸ್ಥಳೀಯ ಜನಪ್ರತಿನಿಧಿಗಳು, ವಿವಿಧ ಇಲಾಖೆಗಳ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.