ನಾಡಪ್ರಭು ಕೆಂಪೇಗೌಡರ 515 ನೇ ಜಯಂತ್ಯೋತ್ಸವ: ಕೆಂಪೇಗೌಡರ ಸಂಗ್ರಹಾಲಯ ನಿರ್ಮಾಣಕ್ಕೆ10 ಎಕರೆ ಜಮೀನು ಮಂಜೂರು-ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್ ಮುನಿಯಪ್ಪ

ನಾಡಪ್ರಭು ಕೆಂಪೇಗೌಡರ ಮೂಲ ಸ್ಥಳವಾದ ಆವತಿ ಗ್ರಾಮದ ಬಳಿ 10 ಎಕರೆ ಜಮೀನು ಮಂಜೂರು ಆಗಿದ್ದು, ಕೆಂಪೇಗೌಡರ ಜೀವನ ಚರಿತ್ರೆ, ತ್ಯಾಗ, ಹೋರಾಟ, ಸಮಾಜ ಸೇವೆಗಳ ಸಮಗ್ರ ಇತಿಹಾಸವನ್ನು ತಿಳಿಸುವ ಸಲುವಾಗಿ ಅವರ ನೆನಪಿನಲ್ಲಿ ಸ್ಮಾರಕ, ಸಂಗ್ರಹಾಲಯ ನಿರ್ಮಿಸಲು ಉದ್ದೇಶಿಸಿದ್ದು ಶೀಘ್ರ ಕಾಮಗಾರಿ ಪ್ರಾರಂಭ ಮಾಡಲಾಗುವುದು ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್.ಮುನಿಯಪ್ಪ ಅವರು ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ದೇವನಹಳ್ಳಿ ತಾಲ್ಲೂಕಿನ ಬೀರಸಂದ್ರ ಗ್ರಾಮದ ಜಿಲ್ಲಾಡಳಿತ ಭವನದ ಆಡಿಟೋರಿಯಂ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ, ಜಿಲ್ಲಾ ಮಟ್ಟದ ನಾಡಪ್ರಭು ಶ್ರೀ ಕೆಂಪೇಗೌಡರ 515 ನೇ ಜಯಂತ್ಯೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ನಾಡಪ್ರಭು ಕೆಂಪೇಗೌಡರ ದೂರದೃಷ್ಟಿಯಿಂದ ಬೆಂಗಳೂರು ನಗರ ವಿಶ್ವದಲ್ಲಿ ಹೆಸರು ಮಾಡಲು ಸಹಕಾರಿಯಾಗಿದೆ. ಕೆಂಪೇಗೌಡರು ಒಂದು ಸಮುದಾಯಕ್ಕೆ ಸೀಮಿತವಲ್ಲ, ಇಡೀ ರಾಜ್ಯದ ಜನರ ಆಸ್ತಿ ಎಂದರಲ್ಲದೆ ಅವರ ಮೂಲಸ್ಥಾನವಾದ ದೇವನಹಳ್ಳಿಯ ಆವತಿ ಗ್ರಾಮದ ವ್ಯಾಪ್ತಿಯಲ್ಲಿ 10 ಎಕರೆ ಭೂಮಿ ಮಂಜೂರು ಆಗಿದ್ದು ಶೀಘ್ರ ಕಾಮಗಾರಿ ಆರಂಭಿಸಲಾಗುವುದು ಎಂದು ಹೇಳಿದರು.

ಕೆಂಪೇಗೌಡರ ತತ್ವ-ಸಿದ್ಧಾಂತಗಳು ಹಾಗೂ ಆದರ್ಶಗಳನ್ನು ನಾವೇಲ್ಲರೂ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಕೆಂಪೇಗೌಡರ ಅಭಿವೃದ್ಧಿಯ ದೂರದೃಷ್ಟಿಯಂತೆ ನಮ್ಮ ಗ್ರಾಮಾಂತರ ಜಿಲ್ಲೆಯಲ್ಲಿಯೂ ಕೂಡ ಕೆರೆಗಳ ಅಭಿವೃದ್ಧಿ, ಶಾಲೆಗಳ ಅಭಿವೃದ್ಧಿ, ರಸ್ತೆಗಳ ಅಭಿವೃದ್ಧಿ, ದೇವಸ್ಥಾನಗಳ ಅಭಿವೃದ್ಧಿ ಮಾಡಲಾಗುವುದು. ಈಗಾಗಲೇ ಸಿ.ಎಸ್.ಆರ್ ಅನುದಾನದಡಿ ಶಾಲೆಗಳ ನವೀಕರಣ ಮತ್ತು ಕಟ್ಟಡ ನಿರ್ಮಾಣ ಕಾರ್ಯಗಳು ನಡೆಯುತ್ತಿವೆ. ಮುಂದಿನ ದಿನಗಳಲ್ಲಿ ಪ್ರತಿ ಪಂಚಾಯಿತಿಯ ಶಾಲೆಯನ್ನು ಗುಣಮಟ್ಟದ ಶಿಕ್ಷಣದೊಂದಿಗೆ ಉನ್ನತ ಮಟ್ಟದಲ್ಲಿ ಅಭಿವೃದ್ಧಿ ಪಡಿಸಲಾಗುವುದು ಎಂದು ಸಚಿವರು ಹೇಳಿದರು.

ರಾಜ್ಯ 5 ನೇ ಹಣಕಾಸು ಆಯೋಗದ ಅಧ್ಯಕ್ಷರಾದ ನಾರಾಯಣಸ್ವಾಮಿ ಅವರು ಮಾತನಾಡಿ ನಾಡಪ್ರಭು ಕೆಂಪೇಗೌಡರು ದೂರದೃಷ್ಟಿ ಹೊಂದಿದ್ದ ನಾಯಕರಾಗಿದ್ದರು. ಎಲ್ಲಾ ಸಮುದಾಯದವರನ್ನು ಗೌರವದಿಂದ ಕಾಣುತ್ತಿದ್ದರು. ಬೆಂಗಳೂರಿನಲ್ಲಿ ಹಲವು ಕುಲ ಕಸುಬುಗಳನ್ನು ಪರಿಚಯಿಸಿ, ಹಲವರಿಗೆ ಉದ್ಯೋಗ ಸೃಷ್ಟಿಸಿ ಆಡಳಿತ ವೈಖರಿ ಅಚ್ಚುಕಟ್ಟಾಗಿ ನಡೆಸಿಕೊಂಡು ಬಂದಿದ್ದಾರು. ಬೆಂಗಳೂರು ಇಂದು ತಂತ್ರಜ್ಞಾನ, ಅಭಿವೃದ್ಧಿಯಲ್ಲಿ ಮುಂಚೂಣಿಯಲ್ಲಿದೆ ಎಂದರೆ ನಾಡಪ್ರಭು ಕೆಂಪೇಗೌಡರ ದೂರದೃಷ್ಟಿ ಯೋಜನೆಗಳ ಫಲ ಎಂದು ಹೇಳಿದರು.

ಜಿಲ್ಲಾಧಿಕಾರಿ ಡಾ. ಎನ್. ಶಿವಶಂಕರ್ ಅವರು ಮಾತನಾಡಿ, ನಾಡಪ್ರಭು ಕೆಂಪೇಗೌಡರ ಉತ್ತಮ ಆಡಳಿತ, ಸಮಾಜ ಸೇವಾ ಗುಣ, ಜೀವನಾದರ್ಶವನ್ನು ನಾವೆಲ್ಲರೂ ರೂಡಿಸಿಕೊಳ್ಳುವ ಜತೆಯಲ್ಲಿ ನಮ್ಮೆಲ್ಲರ ಮುಂದಿನ ಪೀಳಿಗೆಗೆ ಪರಿಚಯಿಸುವ ಉದ್ದೇಶದಿಂದ ಸರ್ಕಾರ ಹಾಗೂ ಜಿಲ್ಲಾಡಳಿತ ಬೆಂಗಳೂರು ನಿರ್ಮಾತೃ ಕೆಂಪೇಗೌಡರ ಜಯಂತಿಯನ್ನು ಆಚರಿಸಲಾಗುತ್ತಿದೆ. ಮುಂದಿನ ನೂರಾರು ವರ್ಷಗಳ ದೂರದೃಷ್ಟಿಯನ್ನು ಇಟ್ಟುಕೊಂಡು ನೂರಾರು ಕೆರೆಗಳು-ಕಾಲುವೆ, ಪೇಟೆಗಳನ್ನು ನಿರ್ಮಿಸಿ, ಜನರ ಜೀವನವನ್ನು ರೂಪಿಸಿಕೊಳ್ಳಲು ಬೆಂಗಳೂರು ಮಹಾನಗರವನ್ನು ಕಟ್ಟಿದರು. ಇಂದು ಲಕ್ಷಾಂತರ ಜನರ ಹೊಟ್ಟೆ-ಬಟ್ಟೆ ಕಟ್ಟಿಕೊಳ್ಳಲು ಅನುಕೂಲ ಮಾಡಿಕೊಟ್ಟಿದ್ದಾರೆ ಎಂದು ಪ್ರಾಸ್ತಾವಿಕ ಮಾತುಗಳನ್ನಾಡಿದರು.

ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾ ಅಧ್ಯಕ್ಷ ಪ್ರೋ. ಬಿ.ಎನ್ ಕೃಷ್ಣಪ್ಪ ರವರು ಬೆಂಗಳೂರು ನಿರ್ಮಾತೃ ಕೆಂಪೇಗೌಡರ ಸಮಗ್ರ ಜೀವನದ ಕುರಿತು ವಿಶೇಷ ಉಪನ್ಯಾಸವನ್ನು ನೀಡಿದರು.

ಈ ವೇಳೆ ಕೆಂಪೇಗೌಡರ ಕುರಿತು ಶಾಲಾ ಕಾಲೇಜುಗಳಲ್ಲಿ ಏರ್ಪಡಿಸಿದ್ದ ಚರ್ಚಾ ಸ್ಪರ್ಧೆಯಲ್ಲಿ ಭಾಗವಹಿಸಿ ವಿಜೇತರಾದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು.
ಕಾರ್ಯಕ್ರಮದಲ್ಲಿ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಶಾಂತಕುಮಾರ್, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅಧ್ಯಕ್ಷರಾದ ರಾಜಣ್ಣ, ಆಲೂರು ದುದ್ದನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಜಯಲಕ್ಷ್ಮಮ್ಮ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಅನುರಾಧ.ಕೆ.ಎನ್, ಅಪರ ಜಿಲ್ಲಾಧಿಕಾರಿ ಅಮರೇಶ್ ಹೆಚ್, ಉಪ ವಿಭಾಗಾಧಿಕಾರಿ ಶ್ರೀನಿವಾಸ, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ರಮೇಶ್, ದೊಡ್ಡಬಳ್ಳಾಪುರ ವಿಭಾಗದ ಡಿವೈಎಸ್ಪಿ ರವಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರಾದ ರವಿಕುಮಾರ್ ಡಿ.ಎಂ, ಜಿಲ್ಲಾ ಮಟ್ಟದ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು, ಸಮುದಾಯದ ಮುಖಂಡರಾದ ಕೆ.ಸಿ ವೆಂಕಟೇಗೌಡ, ಬಿ.ಮುನೇಗೌಡ, ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಸಾರ್ವಜನಿಕರು ಸೇರಿ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Ramesh Babu

Journalist

Recent Posts

10.50 ಕೋಟಿ ಸಾಲ ವಂಚನೆ ಆರೋಪ: ಸೌಂದರ್ಯ ಸೌಹಾರ್ದ ಕ್ರೆಡಿಟ್‌ ಸೊಸೈಟಿ ಅಧ್ಯಕ್ಷನ ವಿರುದ್ಧ ಎಫ್‌ಐಆರ್‌

ಬೆಂಗಳೂರು: ಸೂಕ್ತ ದಾಖಲೆಗಳನ್ನು ಪರಿಶೀಲಿಸದೆ 10.50 ಕೋಟಿ ಸಾಲ ಮಂಜೂರು ಮಾಡಿ ಸೌಂದರ್ಯ ಸೌಹಾರ್ದ ಕ್ರೆಡಿಟ್‌ ಕೋ-ಆಪರೇಟಿವ್‌ ಸೊಸೈಟಿಗೆ ಆರ್ಥಿಕ…

1 hour ago

ಬೆಳ್ಳಂಬೆಳಗ್ಗೆ ಭೀಕರ ಅಪಘಾತ: ಬೈಕ್‌ಗಳ ಮುಖಾಮುಖಿ ಡಿಕ್ಕಿ: ಸವಾರ ಸ್ಥಳದಲ್ಲೇ ಸಾವು

ದೊಡ್ಡಬಳ್ಳಾಪುರ: ತಾಲ್ಲೂಕಿನ ಮಾಕಳಿ ರೈಲ್ವೆ ನಿಲ್ದಾಣದ ಸಮೀಪ ಹಿಂದೂಪುರ–ಯಲಹಂಕ ಹೆದ್ದಾರಿಯಲ್ಲಿ ಶನಿವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್…

10 hours ago

ಸೆ.28ರಿಂದ 30ರವರೆಗೆ ಬ್ಯಾಂಕ್ ನೌಕರರ ಮುಷ್ಕರ: ಭಾನುವಾರ ಬ್ಯಾಂಕ್‌ ಸೇವೆ ಲಭ್ಯ

ಬ್ಯಾಂಕ್ ನೌಕರರ ಒಕ್ಕೂಟವು ಸೆ.28ರಿಂದ 30ರವರೆಗೆ ಮುಷ್ಕರಕ್ಕೆ ಕರೆ ನೀಡಿರುವ ಹಿನ್ನೆಲೆಯಲ್ಲಿ, ಸಾರ್ವಜನಿಕರು ಹಾಗೂ ಗ್ರಾಹಕರಿಗೆ ಅನುಕೂಲ ಮಾಡಿಕೊಡುವ ಉದ್ದೇಶದಿಂದ…

1 day ago

ಗ್ಯಾರಂಟಿ ಯೋಜನೆ ನಿಲ್ಲಿಸುವುದಿಲ್ಲ- ಸಚಿವ ಎನ್. ಚಲುವರಾಯಸ್ವಾಮಿ ಭರವಸೆ*

ಜನರು ನೀಡಿದ ಅವಕಾಶವನ್ನು ಸದ್ಬಳಕೆ ಮಾಡಿಕೊಳ್ಳಬೇಕು‌ ಎಂಬ ಉದ್ದೇಶದಿಂದ ನನಗಿರುವ ಅಧಿಕಾರವನ್ನು ಬಳಸಿಕೊಂಡು ನಿಮ್ಮ ಸೇವೆ ಮಾಡುತ್ತಿದ್ದೆನೆ ಎಂದು ಮಂಡ್ಯ…

1 day ago

ಹೈನುಗಾರಿಕೆಗೆ ಅಜೋಲಾ ಆಸರೆ: ಹಸಿರು ಮೇವಿನ ಕೊರತೆಗೆ ಪರ್ಯಾಯ: ಹಾಲು ನೀಡುವ ರಾಸುಗಳಿಗೆ ಪೌಷ್ಟಿಕ ಪೂರಕ ಆಹಾರ

ಬೆಂಗಳೂರು ಗ್ರಾಮಾಂತರ: ಮಳೆಯ ಕೊರತೆ ಹಾಗೂ ಹಸಿರು ಮೇವಿನ ಅಭಾವದಿಂದ ಜಾನುವಾರು ಸಾಕಾಣಿಕೆದಾರರು ಎದುರಿಸುತ್ತಿರುವ ಸಂಕಷ್ಟಕ್ಕೆ ಪರ್ಯಾಯವಾಗಿ, ಜಾನುವಾರುಗಳಿಗೆ ಸ್ಥಳೀಯವಾಗಿಯೇ…

1 day ago

ಸೆ. 28ಕ್ಕೆ ಅವತಿ ಬೆಟ್ಟದಲ್ಲಿ “ವಿಶ್ವ ಪ್ರವಾಸೋದ್ಯಮ ದಿನಾಚರಣೆ-2026″

ವಿಶ್ವ ಪ್ರವಾಸೋದ್ಯಮ ದಿನಾಚರಣೆಯನ್ನು ದೇವನಹಳ್ಳಿ ತಾಲ್ಲೂಕಿನ ಅವತಿಯ ತಿಮ್ಮರಾಯಸ್ವಾಮಿ ಬೆಟ್ಟದಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ…

2 days ago