ನಾಡಪ್ರಭು ಕೆಂಪೇಗೌಡರ 515 ನೇ ಜಯಂತ್ಯೋತ್ಸವ: ಕೆಂಪೇಗೌಡರ ಜ್ಯೋತಿ ರಥಯಾತ್ರೆಗೆ ಚಾಲನೆ ನೀಡಿದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್ ಮುನಿಯಪ್ಪ

ಬೆಂಗಳೂರು ನಿರ್ಮಾತೃ ಕೆಂಪೇಗೌಡರ 515 ನೇ ಜಯಂತಿಯ ರಾಜ್ಯ ಮಟ್ಟದ ಕಾರ್ಯಕ್ರಮವು ಬೆಂಗಳೂರು ನಗರದ ಕಂಠೀರವ ಸ್ಟೇಡಿಯಂನಲ್ಲಿ ಆಯೋಜಿಸಲಾಗಿದ್ದು, ನಾಡಪ್ರಭು ಕೆಂಪೇಗೌಡರ ಮೂಲ ಸ್ಥಳದಿಂದ ರಾಜ್ಯ ಮಟ್ಟದ ಕಾರ್ಯಕ್ರಮಕ್ಕೆ ಜ್ಯೋತಿ ಕಳುಹಿಸುವ ಅಂಗವಾಗಿ ಗುರುವಾರದಂದು ನಾಡಪ್ರಭು ಕೆಂಪೇಗೌಡರ ಮೂಲಸ್ಥಳವಾದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಆವತಿ ಗ್ರಾಮದಲ್ಲಿನ ಚನ್ನಕೇಶವ ದೇವಾಲಯದಿಂದ ಜ್ಯೋತಿ ಹೊರಡಿಸಲು ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಸಚಿವರು ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ರಥಯಾತ್ರೆಗೆ ಚಾಲನೆ ನೀಡಿದರು.

ಇದಕ್ಕೂ ಮುನ್ನ ಕೆಂಪೇಗೌಡರ ಪೂರ್ವಜರಾದ ರಣಭೈರೇಗೌಡರ ಪುತ್ಥಳಿಗೆ ಮಾಲಾರ್ಪಣೆ ಮಾಡುವ ಮೂಲಕ ಗೌರವ ನಮನ ಸಲ್ಲಿಸಿ ನಂತರ ಚನ್ನಕೇಶವ ದೇವಸ್ಥಾನದಲ್ಲಿ ಸಚಿವರು ವಿಶೇಷ ಪೂಜೆಯನ್ನು ಸಲ್ಲಿಸಿದರು.

ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಚಿವರಿಂದ ಕೆಂಪೇಗೌಡರ ಪ್ರತಿಮೆಗೆ ಪುಷ್ಪನಮನ ಸಮರ್ಪಣೆ

ಬೆಂಗಳೂರು ನಿರ್ಮಾತೃ ನಾಡಪ್ರಭು ಕೆಂಪೇಗೌಡರ 515 ನೇ ಜಯಂತಿ” ಅಂಗವಾಗಿ ಇಂದು ದೇವನಹಳ್ಳಿಯ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿರುವ “ನಾಡಪ್ರಭು ಕೆಂಪೇಗೌಡರ 108 ಅಡಿ ಎತ್ತರದ ಭವ್ಯ ಕಂಚಿನ ಪ್ರಗತಿಯ ಪ್ರತಿಮೆ”ಗೆ ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಸಚಿವರು ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್.ಮುನಿಯಪ್ಪ ಅವರು ಪುಷ್ಪಾರ್ಚನೆ ಮಾಡುವ ಮೂಲಕ ಗೌರವ ನಮನ ಸಲ್ಲಿಸಿದರು.

*ಜೂನ್ 29 ಕ್ಕೆ ಜಿಲ್ಲಾ ಮಟ್ಟದ ಕೆಂಪೇಗೌಡ ಜಯಂತಿ*

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಬೆಂಗಳೂರು ನಿರ್ಮಾತೃ ಕೆಂಪೇಗೌಡರ ಜಯಂತಿಯ ಜಿಲ್ಲಾ ಮಟ್ಟದ ಕಾರ್ಯಕ್ರಮವು ಜೂನ್ 29ರ ಶನಿವಾರದಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಆಯೋಜಿಸಲಾಗಿದೆ.

ಕಾರ್ಯಕ್ರಮದಲ್ಲಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅಧ್ಯಕ್ಷ ರಾಜಣ್ಣ, ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಯೋಜನಾ ಪ್ರಾಧಿಕಾರದ(ಬಯಪ) ಅಧ್ಯಕ್ಷ ಶಾಂತಕುಮಾರ್, ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ, ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕೆ.ಎನ್ ಅನುರಾಧ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿ.ಬಿ.ಎಂ.ಪಿ)ಯ ಯಲಹಂಕ ವಲಯದ ಆಯುಕ್ತರಾದ ಕರೀಗೌಡ, ಅಪರ ಜಿಲ್ಲಾಧಿಕಾರಿ ಅಮರೇಶ್.ಹೆಚ್, ಉಪವಿಭಾಗಾಧಿಕಾರಿ ಶ್ರೀನಿವಾಸ್, ಜಿ.ಪಂ ಉಪಕಾರ್ಯದರ್ಶಿ ರಮೇಶ್ ಟಿ.ಕೆ, ದೇವನಹಳ್ಳಿ ತಹಶೀಲ್ದಾರ್ ಶಿವರಾಜ್, ಜಿಲ್ಲಾ ಮಟ್ಟದ ಅಧಿಕಾರಿಗಳು, ಸ್ಥಳೀಯ ಜನಪ್ರತಿನಿಧಿಗಳು, ಮುಖಂಡರಾದ ಕೆ.ಸಿ ವೆಂಕಟೇಗೌಡ, ವಿವಿಧ ಸಂಘಟನೆಗಳ ಮುಖಂಡರು ಸೇರಿ ನೂರಾರು ಸಾರ್ವಜನಿಕರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಮಹಾವೀರ ಜಯಂತಿ: ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

ಇಂದು ನಾಡಿನಾದ್ಯಂತ ಮಹಾವೀರ ಜಯಂತಿಯನ್ನು ಅದ್ಧೂರಿಯಾಗಿ ಆಚರಣೆ ಮಾಡಲಾಯಿತು. ಅದೇರೀತಿ ದೊಡ್ಡಬಳ್ಳಾಪುರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಒಳರೋಗಿಗಳಿಗೆ ಹಣ್ಣು ಹಂಪಲು ವಿತರಣೆ…

3 hours ago

ನಾನು ಯಾರ ಜಮೀನು ಕಬಳಿಕೆ‌ ಮಾಡಿಲ್ಲ- ಕಾನೂನಾತ್ಮಕವಾಗಿ ಜಮೀನು ಖರೀದಿ ಮಾಡಿದ್ದೇನೆ- ನನ್ನ ಏಳಿಗೆ ಸಹಿಸದವರಿಂದ ನನ್ನ ಮೇಲೆ ಹಲ್ಲೆ ನಡೆದಿದೆ- ಕಾನೂನು ಹೋರಾಟ ಮಾಡಿ ಗೆಲ್ಲುವೆ- ವಕೀಲ ಪ್ರತಾಪ್

ನಾನು ವೃತ್ತಿಯಲ್ಲಿ ವಕೀಲನಾಗಿದ್ದೇನೆ. ವಕೀಲ ವೃತ್ತಿಯಲ್ಲಿ ಬಂದಂತಹ ಹಣದಿಂದ ದೊಡ್ಡಬಳ್ಳಾಪುರ ತಾಲೂಕಿನ ಸಾಸಲು ಹೋಬಳಿಯ ದಡಘಟ್ಟಮಡಗು ಸಮೀಪ ಸರ್ವೇ ನಂ…

3 hours ago

KIADB ಭೂಸ್ವಾಧೀನ ವಿರೋಧಿಸಿ ತಾಲೂಕು ಕಚೇರಿಗೆ ಟ್ರ್ಯಾಕ್ಟರ್ ರ್ಯಾಲಿ

ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ, ಚಿಕ್ಕಬೆಳವಂಗಲ, ರಾಂಪುರ. ನಾರನಹಳ್ಳಿ, ಸೊಣ್ಣೇನಹಳ್ಳಿ  ಗ್ರಾಮಗಳ ವ್ಯಾಪ್ತಿಯ ಸುಮಾರು 2100 ಎಕರೆ ಭೂಮಿಯನ್ನು ಕೆಐಎಡಿಬಿ ಸ್ವಾಧೀನಪಡಿಸಿಕೊಳ್ಳಲು…

11 hours ago

ಹುಟ್ಟಿಸುವವನೂ ಅವನೇ…. ಸಾಯಿಸುವವನೂ ಅವನೇ…

ದೇವರು ಎಷ್ಟೊಂದು ಒಳ್ಳೆಯವನಲ್ಲವೇ........ ಲಕ್ಷಾಂತರ ಜನರನ್ನು ಕೊಲ್ಲಿಸಲು ಅಡಾಲ್ಫ್ ಹಿಟ್ಲರನನ್ನು ಒಂದು ದೇಶದ ಅಧ್ಯಕ್ಷನನ್ನಾಗಿಸಿದ. ಈಗ ಡೊನಾಲ್ಡ್ ಟ್ರಂಪ್ ಅವರನ್ನು…

17 hours ago

ಮಹಿಳೆಯರು ಎಲ್ಲ ವಲಯಗಳಲ್ಲಿ ತಮ್ಮ ಛಾಪು ಮೂಡಿಸಿದ್ದು, ಸಬಲೀಕರಣದ ಆಶಯ ಸಾಕಾರದತ್ತ ಸಾಗುತ್ತಿದೆ-ಎನ್.ಶೋಭಾ

ಮಹಿಳೆಯರು ಎಲ್ಲ ವಲಯಗಳಲ್ಲಿ ತಮ್ಮ ಛಾಪು ಮೂಡಿಸಿದ್ದು, ಮಹಿಳಾ ಸಬಲೀಕರಣದ ಆಶಯ ಸಾಕಾರದತ್ತ ಸಾಗುತ್ತಿದೆ ಎಂದು ಆರಕ್ಷಕ ನಿರೀಕ್ಷಕರಾದ ಎನ್.ಶೋಭಾ…

1 day ago

ಮನೆ ಹೊಸ್ತಿಲಿನಲ್ಲಿ ಪೂಜೆಗಿಟ್ಟಿದ್ದ ಒಣಗಿದ ದಾಸವಾಳ ಹೂ ನುಂಗಿ ಆರುವರೆ ತಿಂಗಳ ಮಗು ದಾರುಣ ಸಾವು

ಮನೆಯ ಹೊಸ್ತಿಲಿನಲ್ಲಿ ಪೂಜೆಗಾಗಿ ಇಟ್ಟಿದ್ದ ಒಣಗಿದ ದಾಸವಾಳದ ಹೂವನ್ನು ಆಟವಾಡುತ್ತಾ ನುಂಗಿದ ಆರುವರೆ ತಿಂಗಳ ಕಂದಮ್ಮ ಉಸಿರುಗಟ್ಟಿ ಸಾವನ್ನಪ್ಪಿರುವ ಘಟನೆ…

1 day ago