ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ: ತೂಬಗೆರೆಯಲ್ಲೂ ಕಳೆಗಟ್ಟಿದ ಗೌರಿ ಗಣೇಶ ಹಬ್ಬದ ಆಚರಣೆ: 20 ಅಡಿ ಗಣೇಶ ಮೂರ್ತಿ ಪ್ರತಿಷ್ಠಾಪನೆ

ದೊಡ್ಡಬಳ್ಳಾಪುರ: ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ ಮನೆಮಾಡಿದ್ದು, ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಹೋಬಳಿಯಲ್ಲೂ ಹಬ್ಬದ ವಾತಾವರಣ ಕಳೆಗಟ್ಟಿದೆ. ವಿವಿಧೆಡೆ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸಿ ವಿಶೇಷ ಪೂಜೆ, ಧಾರ್ಮಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.

ತೂಬಗೆರೆ ಹೋಬಳಿಯಲ್ಲಿ ಮಧು ಹಾಗೂ ಅವರ ಸಂಘಡಿಗರ ನೇತೃತ್ವದಲ್ಲಿ 5ನೇ ವರ್ಷದ ಗೌರಿ ಗಣೇಶೋತ್ಸವವನ್ನು ಅದ್ಧೂರಿಯಾಗಿ ಆಚರಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಸುಮಾರು 20 ಅಡಿ ಎತ್ತರದ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸಿ, ವಿಶೇಷ ಪೂಜಾ ಕೈಂಕರ್ಯಗಳು ಹಾಗೂ ಧಾರ್ಮಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.

ಹಬ್ಬದ ಅಂಗವಾಗಿ ಗಣೇಶನಿಗೆ ವಿಶೇಷ ಅಲಂಕಾರ ಮಾಡಲಾಗಿದ್ದು, ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಪೂಜೆ ಸಲ್ಲಿಸುತ್ತಿದ್ದಾರೆ. ಯುವಕರು ಹಾಗೂ ಸ್ಥಳೀಯರು ಒಗ್ಗೂಡಿ ಹಬ್ಬದ ಆಚರಣೆಯಲ್ಲಿ ಪಾಲ್ಗೊಂಡಿದ್ದು, ಪ್ರದೇಶದಲ್ಲಿ ಹಬ್ಬದ ಸಂಭ್ರಮ ಮತ್ತಷ್ಟು ಹೆಚ್ಚಿದೆ.

ಗಣೇಶೋತ್ಸವದ ಅಂಗವಾಗಿ ಸಾರ್ವಜನಿಕರಿಗೆ ಅನುಕೂಲವಾಗುವಂತೆ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದ್ದು, ಭಕ್ತರಿಗೆ ಪ್ರಸಾದ ವಿತರಣೆ ಸೇರಿದಂತೆ ಹಲವು ಧಾರ್ಮಿಕ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗಿದೆ. ಪರಿಸರ ಸ್ನೇಹಿ ರೀತಿಯಲ್ಲಿ ಹಬ್ಬ ಆಚರಿಸುವುದು ಹಾಗೂ ಶಾಂತಿ, ಸೌಹಾರ್ದತೆಯಿಂದ ಗಣೇಶೋತ್ಸವ ನಡೆಸುವಂತೆ ಆಯೋಜಕರು ಮನವಿ ಮಾಡಿದ್ದಾರೆ.

ನಿಮಜ್ಜನ ಕಾರ್ಯಕ್ರಮಕ್ಕೆ ಸಚಿವರ ಆಗಮನ

ಗಣೇಶೋತ್ಸವದ ಬಳಿಕ ನಡೆಯಲಿರುವ ಗಣೇಶ ಮೂರ್ತಿ ನಿಮಜ್ಜನ ಕಾರ್ಯಕ್ರಮದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್. ಮುನಿಯಪ್ಪ ಅವರು ಭಾಗವಹಿಸಲಿದ್ದಾರೆ ಎಂದು ಆಯೋಜಕರಾದ ಮಧು ತಿಳಿಸಿದ್ದಾರೆ.

ಪ್ರತಿವರ್ಷವೂ ಸ್ಥಳೀಯರ ಸಹಕಾರದೊಂದಿಗೆ ಗಣೇಶೋತ್ಸವವನ್ನು ಆಚರಿಸುತ್ತಿದ್ದು, ಈ ಬಾರಿ 5ನೇ ವರ್ಷದ ಹಿನ್ನೆಲೆಯಲ್ಲಿ ವಿಶೇಷವಾಗಿ 20 ಅಡಿ ಎತ್ತರದ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸಲಾಗಿದೆ. ಮುಂದಿನ ದಿನಗಳಲ್ಲೂ ಹಬ್ಬವನ್ನು ಇನ್ನಷ್ಟು ಅರ್ಥಪೂರ್ಣವಾಗಿ ಹಾಗೂ ವಿಜೃಂಭಣೆಯಿಂದ ಆಚರಿಸುವ ಉದ್ದೇಶ ಹೊಂದಿರುವುದಾಗಿ ಅವರು ತಿಳಿಸಿದ್ದಾರೆ.

ಗಣೇಶೋತ್ಸವದ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶವಾಗದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಹಬ್ಬದ ಸಂದರ್ಭದಲ್ಲಿ ಶಾಂತಿ ಮತ್ತು ಸೌಹಾರ್ದತೆ ಕಾಪಾಡುವಂತೆ ಸಾರ್ವಜನಿಕರಿಗೆ ಮನವಿ ಮಾಡಲಾಗಿದೆ.

Ramesh Babu

Journalist

Recent Posts

ರಾಂಪುರ ಮಜರ ವಡೇರಹಳ್ಳಿ ಗ್ರಾಮದ ಗ್ರಾಮಠಾಣಾ ಜಾಗ ಒತ್ತುವರಿ ತೆರವು

ದೊಡ್ಡಬಳ್ಳಾಪುರ: ತಾಲ್ಲೂಕಿನ ದೊಡ್ಡಬೆಳವಂಗಲ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ರಾಂಪುರ ಮಜರ ವಡೇರಹಳ್ಳಿ ಗ್ರಾಮದಲ್ಲಿರುವ ಸುಮಾರು 2 ಎಕರೆ 10 ಗುಂಟೆ…

8 hours ago

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಗೂಡ್ಸ್ ವಾಹನ

ದೊಡ್ಡಬಳ್ಳಾಪುರ: ಹೊನ್ನದೇವಿಪುರ ಗೇಟ್ ಬಳಿಯ ಹಂದಿ ಫಾರಂನ ಗೂಡ್ಸ್ ವಾಹನ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ…

19 hours ago

ದೀಪಾವಳಿ ವೇಳೆ ರಾತ್ರಿ 8ರಿಂದ 10ರವರೆಗೆ ಮಾತ್ರ ಪಟಾಕಿ ಸಿಡಿಸಲು ಅವಕಾಶ: ಹಸಿರು ಪಟಾಕಿ ಬಳಕೆ ಕಡ್ಡಾಯ; ನಿಯಮ ಉಲ್ಲಂಘಿಸಿದರೆ ಗೋದಾಮು ಮುಟ್ಟುಗೋಲು, ಕ್ರಿಮಿನಲ್ ಪ್ರಕರಣ: ಸಚಿವ ರಾಮಲಿಂಗಾರೆಡ್ಡಿ ಸೂಚನೆ

ಬೆಂಗಳೂರು: ದೀಪಾವಳಿ ಹಬ್ಬದ ಸಂದರ್ಭದಲ್ಲಿ ರಾತ್ರಿ 8 ಗಂಟೆಯಿಂದ 10 ಗಂಟೆಯವರೆಗೆ ಮಾತ್ರ ಪಟಾಕಿ ಸಿಡಿಸಲು ಅವಕಾಶವಿದ್ದು, ಉಳಿದ ಸಮಯದಲ್ಲಿ…

19 hours ago

68 ಎಕರೆಗೂ ಅಧಿಕ ಸರ್ಕಾರಿ ಜಮೀನಿನ ಅಕ್ರಮ ಖಾತೆ ಬದಲಾವಣೆ ಆರೋಪ: ಹಿಂದಿನ ಎಸಿ ದುರ್ಗಶ್ರೀ ವಿರುದ್ಧ ಪ್ರಕರಣ ದಾಖಲು

ದೊಡ್ಡಬಳ್ಳಾಪುರ: ದೇವನಹಳ್ಳಿ ತಾಲ್ಲೂಕಿನ ಮೂರು ಗ್ರಾಮಗಳ ವ್ಯಾಪ್ತಿಯಲ್ಲಿ 68 ಎಕರೆ 35 ಗುಂಟೆಗೂ ಅಧಿಕ ಜಮೀನಿಗೆ ಸಂಬಂಧಿಸಿದಂತೆ ನಕಲಿ ದಾಖಲೆಗಳನ್ನು…

1 day ago

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂವರಿಗೆ ರಾಜ್ಯೋತ್ಸವ ಪ್ರಶಸ್ತಿ

ಬೆಂಗಳೂರು: 2026ನೇ ಸಾಲಿನ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗಳನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಶುಕ್ರವಾರ ಪ್ರಕಟಿಸಿದ್ದು, ಒಟ್ಟು 71 ಸಾಧಕರನ್ನು…

1 day ago

ಕೆ.ಜಿ.ಎಫ್‌ನ 28 ವರ್ಷದ ಯುವತಿ ಮೆದುಳು ನಿಷ್ಕ್ರಿಯ; ಯಕೃತ್ ಹಾಗೂ ಹೃದಯದ ಕವಾಟಗಳ ದಾನ

ಕೋಲಾರ: ಮಗಳ ಅಗಲಿಕೆಯ ದುಃಖದ ನಡುವೆಯೂ ಮಾನವೀಯತೆ ಮೆರೆದ ಕುಟುಂಬವೊಂದು ಅಂಗಾಂಗ ದಾನಕ್ಕೆ ಮುಂದಾಗುವ ಮೂಲಕ ಇಬ್ಬರು ರೋಗಿಗಳ ಬದುಕಿನಲ್ಲಿ…

2 days ago