ತುಮಕೂರು ಲೋಕಸಭೆ ಕ್ಷೇತ್ರದ ಬಿಜೆಪಿ ಟಿಕೆಟ್ ಗೆ ಟಿಕೆಟ್ ಆಕಾಂಕ್ಷಿಗಳಿಂದ ಹಣಾಹಣಿ ಶುರುವಾಗಿದೆ, ಲೋಕಸಭೆ ಚುನಾವಣೆಯಲ್ಲಿ ತುಮಕೂರು ಲೋಕಸಭಾ ಕ್ಷೇತ್ರದಿಂದ ಮಾಜಿ ಸಚಿವ ವಿ. ಸೋಮಣ್ಣ ಅವರನ್ನು ಕಣಕ್ಕಿಳಿಸಲು ಭಾರತೀಯ ಜನತಾ ಪಾರ್ಟಿ ಮುಂದಾಗಿದೆ ಎಂದು ಹಾಲಿ ಸಂಸದ ಜಿ.ಎಸ್.ಬಸವರಾಜು ಅವರು ಮುಖಂಡರ ಸಭೆಯಲ್ಲಿ ತೇಲಿ ಬಿಟ್ಟಿದ್ದರು.
ಇದೀಗ ಮಾಜಿ ಸಂಸದ ಮುದ್ದಹನುಮೇಗೌಡರ ಸರದಿ ಬಂದಿದೆ. ಲೋಕಸಭೆ ಚುನಾವಣೆಗೆ ಇನ್ನೂ ಒಂದು ವರ್ಷ ಇರುವಾಗಲೇ ಸಂಸದ ಸ್ಥಾನದ ಟಿಕೆಟ್ ಗಾಗಿ ಫೈಟ್ ಆರಂಭಾವಾಗಿದೆ. ಮಾಜಿ ಸಂಸದ ಮುದ್ದಹನುಮೇಗೌಡ ಅವರು ತುಮಕೂರಿನಲ್ಲಿ ಸುದ್ದಿಗೋಷ್ಟಿ ನಡೆಸಿ ನಾನು ಟಿಕೆಟ್ ಆಕಾಂಕ್ಷಿ ಎಂದು ಹೇಳಿದ್ದಾರೆ. ಪಕ್ಷ ನನಗೆ ಟಿಕೆಟ್ ಕೊಡುವ ಭರವಸೆಯಿದೆ. ಟಿಕೆಟ್ ಗಾಗಿ ನಾನು ತಂತ್ರ ಮಾಡಲ್ಲ, ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಗೊಂಡಿದ್ದೇನೆ. ನಾನು ಕೂಡ ತುಮಕೂರು ಲೋಕಸಭೆ ಚುನಾವಣೆಯ ಟಿಕೆಟ್ ಆಕಾಂಕ್ಷಿಯಾಗಿದ್ದೇನೆ, ನಾನು ಸ್ಪರ್ಧೆ ಮಾಡುವುದು ಖಚಿತವಾಗಿದೆ ಎಂದು ತಿಳಿಸಿದ್ದಾರೆ.