ನಾನು ಜೆಡಿಎಸ್ ನಲ್ಲೇ ಇದ್ದಿದ್ದರೆ ಮುಖ್ಯಮಂತ್ರಿ ಆಗುತ್ತಿರಲಿಲ್ಲ. ದೇವೇಗೌಡರು ಮತ್ತು ಅವರ ಮಕ್ಕಳು ನನ್ನನ್ನು ಮುಖ್ಯಮಂತ್ರಿ ಮಾಡಲು ಬಿಡುತ್ತಿರಲಿಲ್ಲ- ಸಿಎಂ ಸಿದ್ದರಾಮಯ್ಯ

ಗ್ರಾಮೀಣ ಭಾರತದ ಆರ್ಥಿಕ ಅಭಿವೃದ್ಧಿಗೆ ಪ್ರತೀ ಗ್ರಾಮದಲ್ಲಿ ಒಂದು ಶಾಲೆ, ಒಂದು ಗ್ರಾಮ ಪಂಚಾಯತಿ, ಒಂದು ಸಹಕಾರ ಸಂಘ ಅತ್ಯಗತ್ಯ ಎನ್ನುವುದು ನೆಹರೂ ಅವರ ದೃಷ್ಟಿಯಾಗಿತ್ತು. ಇವರ ಈ ದೂರದೃಷ್ಟಿಯ ಕಾರಣಕ್ಕೆ ದೇಶದಲ್ಲಿ ಸಹಕಾರ ಚಳವಳಿ ಗಟ್ಟಿಯಾಯಿತು.
ನೆಹರೂ ಅವರ ಈ ದೂರದೃಷ್ಟಿ ಕಾರಣಕ್ಕೆ ಅವರ ಜನ್ಮ ದಿನದಂದೇ ಪ್ರತೀ ವರ್ಷ ಸಹಕಾರ ಸಪ್ತಾಹ ಉದ್ಘಾಟನೆಯಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಚಾಮರಾಜನಗರದಲ್ಲಿ ನಡೆದ 72ನೇ ಅಖಿಲ ಭಾರತ ಸಹಕಾರ ಸಪ್ತಾಹದ ಸಮಾರೋಪ ಸಮಾರಂಭದಲ್ಲಿ  ಅವರು ಮಾತನಾಡಿದರು.

ಇಂದು ರಾಜ್ಯದಲ್ಲಿ ಕೃಷಿ, ಹೈನುಗಾರಿಕೆ, ಕೈಗಾರಿಕೆ, ಬ್ಯಾಂಕಿಂಗ್ ಸೇರಿ ಹಲವಾರು ಕ್ಷೇತ್ರಗಳಲ್ಲಿ ಸಹಕಾರಿ ಚಳವಳಿ, ಸಹಕಾರಿ ಸಂಘಗಳು ಬೆಳೆಯುತ್ತಲೇ ಇವೆ. ಇದು ಆರೋಗ್ಯಕಾರಿ ಬೆಳವಣಿಗೆ ಎಂದರು.

ನಾನು ಪಶು ಸಂಗೋಪನಾ ಸಚಿವನಾಗಿದ್ದಾಗ ಹಾಲು ಉತ್ಪಾದಕರ ಸಹಕಾರ ಸಂಘಗಳ ಸ್ವಾಯತ್ತತೆ ಮತ್ತು ಸ್ವಾವಲಂಬನೆಗೆ ಪೂರ್ಣ ಸಹಕಾರ ನೀಡಿದ್ದೆ. ಈಗ ಒಂದು ದಿನಕ್ಕೆ ಒಂದು ಕೋಟಿ ಲೀಟರ್ ಹಾಲು ಉತ್ಪಾದನೆಯಾಗುತ್ತಿದೆ. ನಾನು ಹಾಲು ಉತ್ಪಾದಕರ ಅನುಕೂಲಕ್ಕಾಗಿ ಲೀಟರ್ ಗೆ 5ರೂ ನಂತೆ ಒಂದು ದಿನಕ್ಕೆ 5 ಕೋಟಿ ರೂಪಾಯಿ ಸಹಾಯ ಧನವನ್ನು ರೈತರಿಗೆ ನಮ್ಮ ಸರ್ಕಾರದಿಂದ ನೀಡಲಾಗುತ್ತಿದೆ. ನಾವು ಎರಡು ಬಾರಿ ಹಾಲಿನ ದರವನ್ನು ಹೆಚ್ಚಿಸಿದರೂ ಆ ಹೆಚ್ಚುವರಿ ಹಣ ಹಾಲು ಉತ್ಪಾದಕರಿಗೇ ಹೋಗಬೇಕು ಎಂದು ಸ್ಪಷ್ಟ ಸೂಚನೆ ನೀಡಿದ್ದೇನೆ ಎಂದು ಹೇಳಿದರು.

ನಾನು ಮುಖ್ಯಮಂತ್ರಿ ಆದಾಗಿನಿಂದ ಎಲ್ಲಾ ಜಾತಿ, ಎಲ್ಲಾ ಧರ್ಮದ ಜನರ ಕಲ್ಯಾಣಕ್ಕಾಗಿ ಕಾರ್ಯಕ್ರಮಗಳನ್ನು ರೂಪಿಸಿ ಜಾರಿ ಮಾಡುತ್ತಿದ್ದೇವೆ‌. ಚಾಮರಾಜನಗರ ಜಿಲ್ಲೆಯ ಎಲ್ಲಾ ಜಾತಿಯ, ಎಲ್ಲಾ ಧರ್ಮದವರೂ ನನಗೆ ಸಹಕಾರ ಕೊಟ್ಟಿದ್ದಾರೆ. ಹೀಗಾಗಿ ಚಾಮರಾಜನಗರ ಜಿಲ್ಲೆಯನ್ನು ನಾನು ಯಾವತ್ತೂ ಮರೆಯುವುದಿಲ್ಲ ಎಂದರು.

ಚಾಮರಾಜನಗರಕ್ಕೆ ಅನೇಕ ಸಾರಿ ಬಂದಿದ್ದೀನಿ. ಈ ಜಿಲ್ಲೆಗೆ ಬಂದರೆ ಮುಖ್ಯಮಂತ್ರಿ ಸ್ಥಾನ ಹೋಗುತ್ತದೆ ಅನ್ನೋ ಮೌಢ್ಯ ಪ್ರಚಲಿತದಲ್ಲಿ ಇದೆ. ಆದರೆ ಇಲ್ಲಿಗೆ ಬಂದು ಹೋದಷ್ಟೂ ನನ್ನ ಸ್ಥಾನ ಮಾತ್ರವಲ್ಲ, ನಮ್ಮ ಪಕ್ಷದ ಅಧಿಕಾರವೂ ಮತ್ತೆ ಮತ್ತೆ ಗಟ್ಟಿ ಆಗಿದೆ ಎಂದು ಹೇಳಿದರು.

ನಾನು ಜೆಡಿಎಸ್ ನಲ್ಲೇ ಇದ್ದಿದ್ದರೆ ಮುಖ್ಯಮಂತ್ರಿ ಆಗುತ್ತಿರಲಿಲ್ಲ. ದೇವೇಗೌಡರು ಮತ್ತು ಅವರ ಮಕ್ಕಳು ನನ್ನನ್ನು ಮುಖ್ಯಮಂತ್ರಿ ಮಾಡಲು ಬಿಡುತ್ತಿರಲಿಲ್ಲ ಎಂದರು.

ಸಹಕಾರಿ ಚಳವಳಿಯಲ್ಲಿದ್ದ ಜಿ.ಟಿ.ದೇವೇಗೌಡರು ಈಗಲೂ ಜೆಡಿಎಸ್ ನಲ್ಲಿ ಇದ್ದಾರೆ. ಆದರೆ ನನ್ನ ಪರವಾಗಿಯೇ ಇದ್ದಾರೆ. ಜಿ.ಟಿ.ದೇವೇಗೌಡರು 2006ರ ವರೆಗೂ ನನ್ನ ಜೊತೆಗೇ ಇದ್ದರು‌. ಜೆಡಿಎಸ್ ನಿಂದ ನನ್ನನ್ನು ಉಚ್ಚಾಟಿಸಿದ ಮೇಲೆ ಜಿ.ಟಿ.ದೇವೇಗೌಡರು ಅಲ್ಲೇ ಉಳಿದು ಬಿಟ್ಟರು. ಈಗ ಮತ್ತೆ ಒಂದು ರೀತಿಯಲ್ಲಿ ನಮ್ಮ ಜೊತೆಗೇ ಇದ್ದಾರೆ ಎಂದು ಹೇಳಿದರು.

ಸಹಕಾರ ಸಂಘದ ನೇಮಕಾತಿಗಳಲ್ಲಿ ಸಹಕಾರ ಡಿಪ್ಲೊಮೋ, ಪದವಿ ಪಡೆದವರಿಗೆ ಆದ್ಯತೆ ನೀಡಲಾಗುವುದು. ಪಠ್ಯಗಳಲ್ಲಿ ಸಹಕಾರಿ ತತ್ವದ ಮಹತ್ವವನ್ನು ಅಳವಡಿಸಲಾಗುವುದು. ನಮ್ಮ ಸರ್ಕಾರ ಸಹಕಾರ ರಂಗದ ಬೆಳೆವಣಿಗೆಗೆ ಎಲ್ಲಾ ರೀತಿಯ ನೆರವು ನೀಡಲಿದೆ ಎಂದರು.

Ramesh Babu

Journalist

Recent Posts

ಆಸ್ತಿ ವಿವರ ಮುಚ್ಚಿಟ್ಟು ಸುಳ್ಳು ಪ್ರಮಾಣಪತ್ರ ಸಲ್ಲಿಕೆ ವಿಚಾರ: ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರ ಕಾಂಗ್ರೆಸ್​ ಶಾಸಕ ಎಸ್‌.ಎನ್‌. ಸುಬ್ಬಾರೆಡ್ಡಿ ಆಯ್ಕೆ ಅಸಿಂಧುಗೊಳಿಸಿ ಕರ್ನಾಟಕ ಹೈಕೋರ್ಟ್ ಆದೇಶ

ಬಾಗೇಪಲ್ಲಿ ಕಾಂಗ್ರೆಸ್‌ ಶಾಸಕ ಎಸ್ ಎನ್ ಸುಬ್ಬಾರೆಡ್ಡಿ ಆಯ್ಕೆ ಅಸಿಂಧು ಎಂದು ಕರ್ನಾಟಕ ಹೈಕೋರ್ಟ್‌ ಆದೇಶ ನೀಡಿದೆ. ಚುನಾವಣಾ ಆಯೋಗ…

56 minutes ago

ಜೆಡಿಎಸ್ ಕಾರ್ಯಕರ್ತರನ್ನ ಮುಟ್ಟಬೇಡಿ- ಶಾಸಕ ಧೀರಜ್ ಮುನಿರಾಜುಗೆ ಜೆಡಿಎಸ್ ನೂತನ ಜಿಲ್ಲಾಧ್ಯಕ್ಷ ಖಡಕ್ ಮಾತು: ಮುಂದಿನ 20 ದಿನದೊಳಗಾಗಿ ತಾಲೂಕು ಪದಾಧಿಕಾರಿಗಳ ನೇಮಕ

ನಮ್ಮ ಕಾರ್ಯಕರ್ತರನ್ನು ಮುಟ್ಟಬೇಡಿ, ಆಸೆ ಆಮಿಷವೊಡ್ಡಿ ನಿಮ್ಮ ಪಕ್ಷಕ್ಕೆ ಸೇರಿಸಿಕೊಳ್ಳಬೇಡಿ. ನಮ್ಮ ಕಾರ್ಯಕರ್ತರನ್ನು ನಿಮ್ಮ ಪಕ್ಷಕ್ಕೆ ಸೇರಿಸುತ್ತೇವೆ ಎಂದು ಹೇಳಿಲ್ಲ.…

3 hours ago

ಮೊಬೈಲ್ ಚಾರ್ಜಿಂಗ್ ಶಾರ್ಟ್ ಸರ್ಕಿಟ್: ಮನೆಯಲ್ಲಿ ದಟ್ಟ ಹೊಗೆ: ಭಯಭೀತರಾದ ಜನ: ತಪ್ಪಿದ ಭಾರೀ ಅನಾಹುತ

ಮೊಬೈಲ್ ಚಾರ್ಜ್ ಆಗುತ್ತಿರುವಾಗ ಶಾರ್ಟ್ ಸರ್ಕಿಟ್ ಆಗಿ ಮನೆಯಲ್ಲಿ ದಟ್ಟಹೊಗೆ ಆವರಿಸಿಕೊಂಡು ಕೆಲಕಾಲ ಎಲ್ಲರಲ್ಲಿ ಆತಂಕ ಮೂಡಿಸಿದ್ದ ಘಟನೆ ದೊಡ್ಡಬಳ್ಳಾಪುರ…

8 hours ago

ವೈಚಾರಿಕ ( ವೈಜ್ಞಾನಿಕ ) ಅಧ್ಯಾತ್ಮ………

ಅಧ್ಯಾತ್ಮ ಮತ್ತು ಸದ್ಗುರು ಜಗ್ಗಿ ವಾಸುದೇವ್........ ಇತ್ತೀಚಿನ ವರ್ಷಗಳಲ್ಲಿ ಹೆಚ್ಚು ಜನಪ್ರಿಯರಾದ ಅಧ್ಯಾತ್ಮ ಗುರು. ಅಧ್ಯಾತ್ಮಿಕ ಚಿಂತಕರಲ್ಲಿ ವಿವಿಧ ರೀತಿಯ…

9 hours ago

ಐಸಿಸಿ ಟಿ-20 ವಿಶ್ವಕಪ್ ಟೂರ್ನಿ: ಪಾಕಿಸ್ತಾನ ತಂಡವನ್ನು 61 ರನ್ ಗಳಿಂದ ಬಗ್ಗುಬಡಿದ ಭಾರತ: ದೇಶದ ಜನತೆಗೆ ಮಹಾಶಿವರಾತ್ರಿ ಗಿಫ್ಟ್

ಕೊಲಂಬೊದ ಪ್ರೇಮದಾಸ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಐಸಿಸಿ ಟಿ-20 ವಿಶ್ವಕಪ್ ಟೂರ್ನಿಯ ಗ್ರೂಪ್ ಹಂತದ ಪಂದ್ಯದಲ್ಲಿ ಪಾಕಿಸ್ತಾನ ತಂಡವನ್ನು ಭಾರತ…

10 hours ago

ಫೆ.26ರಂದು ಪ್ರಸಿದ್ದ ಮಧುರೆ ಶನಿಮಹಾತ್ಮಸ್ವಾಮಿ 71ನೇ ಬ್ರಹ್ಮರಥೋತ್ಸವ

ಫೆ.26ರಂದು ದೊಡ್ಡಬಳ್ಳಾಪುರ ತಾಲ್ಲೂಕಿನ ಪ್ರಸಿದ್ದ ಚಿಕ್ಕಮಧುರೆ ಶ್ರೀ ಶನಿಮಹಾತ್ಮಸ್ವಾಮಿಯ 71ನೇ ಬ್ರಹ್ಮರಥೋತ್ಸವವು ವಿಜೃಂಭಣೆಯಿಂದ ನೆರವೇರಲಿದೆ ಎಂದು ದೇವಾಲಯದ ಪ್ರಧಾನ ಅರ್ಚಕ…

20 hours ago