ನಾನು ಯಾರ ಜಮೀನು ಕಬಳಿಕೆ‌ ಮಾಡಿಲ್ಲ- ಕಾನೂನಾತ್ಮಕವಾಗಿ ಜಮೀನು ಖರೀದಿ ಮಾಡಿದ್ದೇನೆ- ನನ್ನ ಏಳಿಗೆ ಸಹಿಸದವರಿಂದ ನನ್ನ ಮೇಲೆ ಹಲ್ಲೆ ನಡೆದಿದೆ- ಕಾನೂನು ಹೋರಾಟ ಮಾಡಿ ಗೆಲ್ಲುವೆ- ವಕೀಲ ಪ್ರತಾಪ್

ನಾನು ವೃತ್ತಿಯಲ್ಲಿ ವಕೀಲನಾಗಿದ್ದೇನೆ. ವಕೀಲ ವೃತ್ತಿಯಲ್ಲಿ ಬಂದಂತಹ ಹಣದಿಂದ ದೊಡ್ಡಬಳ್ಳಾಪುರ ತಾಲೂಕಿನ ಸಾಸಲು ಹೋಬಳಿಯ ದಡಘಟ್ಟಮಡಗು ಸಮೀಪ ಸರ್ವೇ ನಂ 23/2, 23/3, 23/4, 23/8 ರಲ್ಲಿ ಸುಮಾರು 20 ಎಕರೆ ಜಮೀನು ನನ್ನ ಮತ್ತು ನನ್ನ ಧರ್ಮಪತ್ನಿರವರು ಕ್ರಯಕ್ಕೆ ಪಡೆದು ಖಾತೆಯಾಗಿರುತ್ತದೆ. 20 ಎಕರೆ ಜಮೀನನ್ನು ಕಾನೂನಾತ್ಮಕವಾಗಿ  ಖರೀದಿ ಮಾಡಿದ್ದೇನೆ. ಈ ಹಿನ್ನೆಲೆ ಮಾ.29ರ ಭಾನುವಾರದಂದು ಜಮೀನಿಗೆ ಕಾಂಪೌಂಡ್ ನಿರ್ಮಿಸುವ ವೇಳೆ ದಡಘಟ್ಟಮಡಗು ಗ್ರಾಮದ ಒಂದು ಕುಟುಂಬದ 19 ಮಂದಿ, ಜೊತೆಗೆ ಅವರ ಹತ್ತಿರ ಸಂಬಂಧಿಗಳು ಸಹ ನಮ್ಮ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದ್ದಾರೆ. ಈ ಹಲ್ಲೆ ದುರುದ್ದೇಶದ್ದಾಗಿರುತ್ತದೆ. ನಾನು ಅವರ ಜಮೀನನ್ನು ಕಬಳಿಕೆ ಮಾಡಿಲ್ಲ. ನಾನು ಕಾಂಪೌಂಡ್ ಹಾಕುತ್ತಿರುವ ಜಮೀನಿಗೂ ಅವರಿಗೂ ಯಾವುದೇ ಸಂಬಂಧವಿಲ್ಲ. ಆದರೂ ನಮ್ಮ ಮೇಲೆ ದೌರ್ಜನ್ಯವೆಸಗಿ ಹಲ್ಲೆ ಮಾಡಿ ಕಾನೂನು ಉಲ್ಲಂಘನೆ ಮಾಡಿದ್ದಾರೆ ಎಂದು ವಕೀಲ ಪ್ರತಾಪ್ ಆರೋಪಿಸಿದರು.

ಈ ಕುರಿತು ಇಂದು ನಗರದ ಪ್ರವಾಸಿ ಮಂದಿರದಲ್ಲಿ ನಡೆದ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ನಾನು ಮೋಸ, ವಂಚನೆ, ಕಾನೂನು ಉಲ್ಲಂಘನೆ ಮಾಡಿ ಯಾವ ಭೂಮಿಯನ್ನು ಖರೀದಿ ಮಾಡಿಲ್ಲ.‌ ಅದೇರೀತಿ ನೇರವಾಗಿ ನಾನು ಯಾವತ್ತೂ, ಯಾವ ರೈತನಿಂದಲೂ ಜಮೀನು ಖರೀದಿ‌ ಮಾಡಿಲ್ಲ. ರೈತರು ಬೇರೆಯವರಿಗೆ ಮಾರಾಟ ಮಾಡಿರುವ ವ್ಯಕ್ತಿಗಳಿಂದ ಕೊಳ್ಳುತ್ತೇನೆ ಎಂದರು..

ನಾನು ಕಷ್ಟಪಟ್ಟು ದುಡಿದ ಹಣದಲ್ಲಿ ಸಮಾಜ ಸೇವೆ ಮಾಡುತ್ತಿದ್ದೇನೆ. ರಾಜಕೀಯವಾಗಿ ಸಕ್ರಿಯನಾಗಿದ್ದೇನೆ‌. ಈ ನನ್ನ ಏಳಿಗೆ ಸಹಿಸದೇ ದುರುದ್ದೇಶದಿಂದ ನನ್ನ ಹೆಸರಿಗೆ ಕಪ್ಪುಚುಕ್ಕೆ ತರಲು ನನ್ನ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ದೂರಿದರು…

ಅವರು ಜಮೀನು ವಿವಾದದಲ್ಲಿ ಕೋರ್ಟ್ ನಲ್ಲಿ ಕೇಸ್ ಹಾಕಿದ್ದರು. ಎಲ್ಲಾ ಕೇಸ್ ಡಿಸ್ ಮಿಸ್ ಆಗಿದೆ. ಯಾವುದೇ ಸ್ಟೇ ಇಲ್ಲ, ಯಾವುದೇ ಕೇಸ್ ಇಲ್ಲದೇ ಇದ್ದರೂ, ಇದು ನನ್ನ ಜಮೀನು ಎಂದು ಸುಖಾಸುಮ್ಮನೆ ಗಲಾಟೆ ಮಾಡುತ್ತಿದ್ದಾರೆ..

ನಾನು ಯಾವತ್ತೂ ಸರ್ಕಾರಿ, ಬಡವರ ಜಮೀನಿಗೆ ಹೋಗಿಲ್ಲ. ನಾನು ರಾಜಕೀಯವಾಗಿ, ಆರ್ಥಿಕವಾಗಿ ಬೆಳೆಯಬಾರದು ಎಂಬ ದುರುದ್ದೇಶದಿಂದ ಹುನ್ನಾರ ಮಾಡಿಕೊಂಡು ಗಲಾಟೆ ಮಾಡಿದ್ದಾರೆ. ನನಗೆ ಹಲ್ಲೆ ಮಾಡಿರುವುದನ್ನು ವಿಡಿಯೋ ಮಾಡಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾರೆ…ಎಂದರು.

ಅವರು ಪೊಜಿಷನಲ್ಲೇ ಇಲ್ಲ. ನೂರು ವರ್ಷದಿಂದ ಅವರ ಬಳಿ ಸೂಕ್ತ ದಾಖಲೆ ಇಲ್ಲ.‌ ನಾನು ಕಾನೂನುಬದ್ಧವಾಗಿ ಜಮೀನು ಕೊಂಡುಕೊಂಡಿದ್ದೇನೆ. ಯಾರದೋ ಜಮೀನಿಗೆ ನಾನ್ಯೇಕೆ ಹೋಗಲಿ. ಹಲ್ಲೆ ನಡೆದ ನಂತರ ರಾಜೀ ಮಾಡಿಕೊಳ್ಳಿ ಅಂತಾ ಫೋನ್ ಬಂದಿತ್ತು, ರಾಜಿಗೆ ಒಪ್ಪದಿದ್ದಾಗ ಕೌಂಟರ್ ಎಫ್ಐ ಆರ್ ಆಗಿದೆ ಎಂದರು.

ನಾನು ಕಾನೂನು ಹೋರಾಟ ನಡೆಸಿ ನನ್ನ ತಪ್ಪು ಏನೂ ಇಲ್ಲ ಎಂದು ಸಾಬೀತುಪಡಿಸುತ್ತೇನೆ. ನನ್ನ ಸಮಾಜ ಸೇವೆ ಮುಂದುವರಿಸುತ್ತೇನೆ. ನನ್ನನ್ನು ನಂಬಿ ಬಂದವರಿಗೆ ನ್ಯಾಯ ಕೊಡಿಸುತ್ತೇನೆ. ರಾಜಕೀಯವಾಗಿ ಸಕ್ರಿಯನಾಗಿರುತ್ತೇನೆ ಎಂದರು.

Ramesh Babu

Journalist

Recent Posts

15 ನೇ ಸೆಪ್ಟೆಂಬರ್ 2026, ವಿಶ್ವ ಅಂತರಾಷ್ಟ್ರೀಯ ಪ್ರಜಾಪ್ರಭುತ್ವದ ದಿನ…

  ಸಂವಿಧಾನದ ಆಶಯಗಳು ಇರುವುದು ಕೇವಲ ಓದುವುದಕ್ಕಾಗಿಯಲ್ಲ, ಅದನ್ನು ಕಾಯಾ ವಾಚಾ ಮನಸಾ ಅನುಸರಿಸಲಿಕ್ಕಾಗಿ.‌ ಶಾಸಕಾಂಗ, ಕಾರ್ಯಾಂಗ, ನ್ಯಾಯಾಂಗ, ಮಾಧ್ಯಮ…

32 minutes ago

ಗಣೇಶ ಹಬ್ಬದ ಸಂಭ್ರಮದ ನಡುವೆ ಮಸಣವಾದ ಮನೆ: ಅಗ್ನಿ ದುರಂತಕ್ಕೆ ಒಂದೇ ಕುಟುಂಬದ ನಾಲ್ವರು ಬಲಿ

ಬೆಳಗಾವಿ: ಗಣೇಶ ಚತುರ್ಥಿ ದಿನವೇ ಬೆಳಗಾವಿ ನಗರದಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಒಂದೇ ಕುಟುಂಬದ ನಾಲ್ವರು ಸಜೀವ ದಹನಗೊಂಡಿರುವ…

3 hours ago

ಗುಂಡಿ ರಸ್ತೆಗೆ ಕೆಎಸ್‌ಆರ್‌ಟಿಸಿ ಬಸ್‌ಗಳೇ ಬಲಿಪಶು: ಹದಗೆಟ್ಟ ರಸ್ತೆ–ನಿರ್ವಹಣೆ ಕೊರತೆ; ಮಾರ್ಗಮಧ್ಯೆಯೇ ಕೆಟ್ಟು ನಿಲ್ಲುವ ಬಸ್‌ಗಳಿಂದ ಪ್ರಯಾಣಿಕರ ಪರದಾಟ

ದೊಡ್ಡಬಳ್ಳಾಪುರ: ತಾಲೂಕಿನ ಗ್ರಾಮೀಣ ಭಾಗಗಳಲ್ಲಿ ಹದಗೆಟ್ಟಿರುವ ರಸ್ತೆಗಳು ಹಾಗೂ ಸಮರ್ಪಕ ನಿರ್ವಹಣೆ ಇಲ್ಲದ ಕೆಎಸ್‌ಆರ್‌ಟಿಸಿ ಬಸ್‌ಗಳಿಂದಾಗಿ ಸಾರ್ವಜನಿಕರು ನಿತ್ಯವೂ ಪರದಾಡುವಂತಾಗಿದೆ.…

15 hours ago

ಗಜಮುಖನ ಆರಾಧನೆಯಲ್ಲಿ ಮಿಂದೆದ್ದ ದೊಡ್ಡಬಳ್ಳಾಪುರ: ಬೆಸ್ತರಪೇಟೆಯಲ್ಲಿ 14 ಅಡಿ ಎತ್ತರದ ಹಿಂದೂ ಮಹಾಗಣಪತಿ ಪ್ರತಿಷ್ಠಾಪನೆ: 7ನೇ ವರ್ಷದ ಗಣೇಶೋತ್ಸವಕ್ಕೆ ಅದ್ಧೂರಿ ಮೆರುಗು

ದೊಡ್ಡಬಳ್ಳಾಪುರ: ಗೌರಿ ಗಣೇಶ ಹಬ್ಬದ ಸಂಭ್ರಮ ನಾಡಿನಾದ್ಯಂತ ಮನೆಮಾಡಿದ್ದು, ದೊಡ್ಡಬಳ್ಳಾಪುರ ನಗರದಲ್ಲೂ ಗಣೇಶೋತ್ಸವದ ಕಳೆ ಹೆಚ್ಚಾಗಿದೆ. ನಗರದ ವಿವಿಧೆಡೆ ಗಣೇಶ…

15 hours ago

ಗಣೇಶ ವಿಸರ್ಜನೆಗೆ ಗುಂಡಮಗೆರೆ ಕೆರೆ ಬಳಿ ವಿಶೇಷ ವ್ಯವಸ್ಥೆ

ದೊಡ್ಡಬಳ್ಳಾಪುರ: ಗಣೇಶೋತ್ಸವದ ಹಿನ್ನೆಲೆಯಲ್ಲಿ ಗಣೇಶ ಮೂರ್ತಿಗಳ ವಿಸರ್ಜನೆಗೆ ಅನುಕೂಲವಾಗುವಂತೆ ಹೊಸಹಳ್ಳಿ ಪೊಲೀಸ್ ಠಾಣೆ ವತಿಯಿಂದ ಗುಂಡಮಗೆರೆ ಕೆರೆಯಲ್ಲಿ ವಿಶೇಷ ವ್ಯವಸ್ಥೆ…

16 hours ago

ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ: ತೂಬಗೆರೆಯಲ್ಲೂ ಕಳೆಗಟ್ಟಿದ ಗೌರಿ ಗಣೇಶ ಹಬ್ಬದ ಆಚರಣೆ: 20 ಅಡಿ ಗಣೇಶ ಮೂರ್ತಿ ಪ್ರತಿಷ್ಠಾಪನೆ

ದೊಡ್ಡಬಳ್ಳಾಪುರ: ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ ಮನೆಮಾಡಿದ್ದು, ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಹೋಬಳಿಯಲ್ಲೂ ಹಬ್ಬದ ವಾತಾವರಣ ಕಳೆಗಟ್ಟಿದೆ. ವಿವಿಧೆಡೆ…

21 hours ago