ನಾನು HMT ಕೈಗಡಿಯಾರ ಕಟ್ಟಿದ್ದೇನೆ, ನೀವೂ ಕಟ್ಟಿ- ಜೆಡಿಎಸ್‌ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ

ಒಂದು ಕಾಲದಲ್ಲಿ ದೇಶದ ಹೃದಯ ಬಡಿತ ಹಾಗೂ ಎಲ್ಲರ ಪಾಲಿಗೂ ನಿತ್ಯನಾಡಿಯಾಗಿದ್ದ ಎಚ್ಎಂಟಿ ಕೈಗಡಿಯಾರವನ್ನು ನಾನು ಕಟ್ಟಿದ್ದೇನೆ ನೀವೂ ಕಟ್ಟಿ ಎಂದು ಜೆಡಿಎಸ್‌ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಕರೆಕೊಟ್ಟಿದ್ದಾರೆ.

ಹಬ್ಬದ ಹಿನ್ನೆಲೆ ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಅವರಿಂದ ಎಚ್‌ಎಂಟಿ ವಾಚ್‌ ಕಟ್ಟಿಸಿಕೊಂಡ ನಿಖಿಲ್‌ ಅವರು ತಮ್ಮ ಎಕ್ಸ್ ಖಾತೆಯಲ್ಲಿ ಫೋಟೋವನ್ನು ಹಂಚಿಕೊಂಡಿದ್ದಾರೆ.

” HMT ಕೈಗಡಿಯಾರ ಒಂದು ಕಾಲದಲ್ಲಿ ಭಾರತದ ಹೃದಯ ಬಡಿತವಾಗಿತ್ತು. ಎಲ್ಲರ ಪಾಲಿಗೂ ಅದು ನಿತ್ಯನಾಡಿಯಾಗಿತ್ತು. ನಮ್ಮ ತಲೆಮಾರಿನ ಯುವಜನರಿಗೆ HMT ವಾಚ್ ಎಂದರೆ ಅದೊಂದು ದಂತಕಥೆ. ನನ್ನ ಪೂಜ್ಯ ತಂದೆಯವರು ಹಾಗೂ ಕೇಂದ್ರ ಸರಕಾರದ ಭಾರೀ ಕೈಗಾರಿಕೆ, ಉಕ್ಕು ಖಾತೆ ಸಚಿವ ಎಚ್‌ ಡಿ ಕುಮಾರಸ್ವಾಮಿ ಅವರು ಗೌರಿಹಬ್ಬದ ದಿನವಾದ ಇಂದು HMT ಕೈಗಡಿಯಾರ ಖರೀದಿಸಿ ನನ್ನ ಕೈಗೆ ಕಟ್ಟಿದರು. ಈ ಸಂದರ್ಭದಲ್ಲಿ HMT ಅಧ್ಯಕ್ಷ, ವ್ಯವಸ್ಥಾಪಕ ನಿರ್ದೇಶಕರಾದ ರಾಜೇಶ್ ಕೋಹ್ಲಿ ಇನ್ನಿತರೆ ಹಿರಿಯ ಅಧಿಕಾರಿಗಳು ಹಾಜರಿದ್ದರು. ಯುವ ಜನರು ನಮ್ಮ ನಾಡಿನ ಹೆಮ್ಮೆಯ ಪ್ರತೀಕವಾದ HMT ಕೈಗಡಿಯಾರಗಳನ್ನೇ ಕಟ್ಟಬೇಕು ಎಂಬುದು ನನ್ನ ವಿನಂತಿ. ನಾನು HMT ಕೈಗಡಿಯಾರ ಕಟ್ಟಿದ್ದೇನೆ, ನೀವೂ ಕಟ್ಟಿ. ನಮ್ಮHMT ನಮ್ಮಹೆಮ್ಮೆ ” ಎಂದು ತಮ್ಮ ಎಕ್ಸ್ ಖಾತೆಯಲ್ಲಿ ನಿಖಿಲ್‌ ಕುಮಾರಸ್ವಾಮಿ ಬರೆದುಕೊಂಡಿದ್ದಾರೆ.

Ramesh Babu

Journalist

Recent Posts

ಗ್ರಾಮಾಂತರ ಜಿಲ್ಲೆಯ 13 ಕೆರೆಗಳಿಗೆ ಜಲಭಾಗ್ಯ!

ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಿರುವ ಬರದ ತೀವ್ರತೆ, ಅಂತರ್ಜಲ ಮಟ್ಟ ಕುಸಿತ ಹಾಗೂ ಕುಡಿಯುವ ನೀರಿನ ಕೊರತೆಯಿಂದ ತತ್ತರಿಸುತ್ತಿರುವ ಬೆಂಗಳೂರು ಗ್ರಾಮಾಂತರ…

3 hours ago

ಬೆಂಗಳೂರು ಶಿಕ್ಷಕರ ಕ್ಷೇತ್ರದಲ್ಲಿ ಜಿದ್ದಾಜಿದ್ದಿನ ಕಣ: ಆಡಳಿತಾರೂಢ ಕಾಂಗ್ರೆಸ್ ಮತ್ತು ಬಿಜೆಪಿ–ಜೆಡಿಎಸ್ ಮೈತ್ರಿಕೂಟದ ನಡುವೆ ನೇರ ಹಣಾಹಣಿ

ಬೆಂಗಳೂರು ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಯ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಆಡಳಿತಾರೂಢ ಕಾಂಗ್ರೆಸ್ ಮತ್ತು ಬಿಜೆಪಿ–ಜೆಡಿಎಸ್ ಮೈತ್ರಿಕೂಟದ…

1 day ago

ಚಿನ್ನದ ಅಂಬಾರಿಯಲ್ಲಿ ವಿರಾಜಮಾನಳಾದ ನಾಡಿನ ಅಧಿದೇವತೆ ತಾಯಿ ಶ್ರೀ ಚಾಮುಂಡೇಶ್ವರಿ: 750 ಕೆ.ಜಿ. ಚಿನ್ನದ ಅಂಬಾರಿ ಹೊತ್ತ ಪ್ರಶಾಂತ!

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ವಿಜಯದಶಮಿ ಅಂಗವಾಗಿ ಅರಮನೆ ಆವರಣದಲ್ಲಿ ನಡೆದ ಐತಿಹಾಸಿಕ ಜಂಬೂಸವಾರಿಗೆ ಶುಭ ಮೀನ ಲಗ್ನದಲ್ಲಿ…

2 days ago

ಪ್ರಕ್ಷ್ಯುಬ್ಧ ವಿಶ್ವ….

ಕೊರೋನಾ ಮಾರಿಯ ನಂತರದಲ್ಲಿ ವಿಶ್ವದ ಒಟ್ಟಾರೆ ಪರಿಸ್ಥಿತಿ ಪ್ರಕ್ಶುಬ್ಧವಾಗಿಯೇ ಮುಂದುವರಿದಿದೆ. ಕೋವಿಡ್ ನಿಂದಾದ ನಷ್ಟದಿಂದ ಆರ್ಥಿಕ ಚೇತರಿಕೆ ಕಂಡುಕೊಳ್ಳಬೇಕಾದ ಸಂದರ್ಭದಲ್ಲಿ…

2 days ago

ಟೈಗರ್ ಶ್ರಾಫ್ ಕಾರಿನ ಮೇಲೆ ಗುಂಡಿನ ದಾಳಿ: ಬಿಷ್ಣೋಯ್ ಗ್ಯಾಂಗ್ ಹೊಣೆ?

  ಮುಂಬೈ: ಬಾಲಿವುಡ್ ನಟ ಟೈಗರ್ ಶ್ರಾಫ್ ಅವರ ಕಾರಿನ ಮೇಲೆ ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿರುವುದಾಗಿ…

4 days ago

ಬೀದಿ ನಾಯಿಗಳ ದಾಳಿಗೆ 10ಕ್ಕೂ ಹೆಚ್ಚು ಕುರಿ, ಮೇಕೆ ಬಲಿ!: ದೂರು ನೀಡಿದರೂ ಕ್ರಮ ಕೈಗೊಳ್ಳದ ಪಂಚಾಯಿತಿ ಅಧಿಕಾರಿಗಳ ವಿರುದ್ಧ ರೈತರ ಆಕ್ರೋಶ

ದೇವನಹಳ್ಳಿ: ಬೀದಿ ನಾಯಿಗಳ ಗುಂಪೊಂದು ಕುರಿ, ಮೇಕೆಗಳ ಕೊಟ್ಟಿಗೆಗೆ ನುಗ್ಗಿ ದಾಳಿ ನಡೆಸಿದ ಪರಿಣಾಮ 10ಕ್ಕೂ ಹೆಚ್ಚು ಕುರಿ ಮತ್ತು…

5 days ago