‘ಕಲ್ಯಾಣ ರಾಜ್ಯ ಪ್ರಗತಿ ಪಕ್ಷ’ದಿಂದ ದೊಡ್ಡಬಳ್ಳಾಪುರ ಕ್ಷೇತ್ರದ ಅಭ್ಯರ್ಥಿಯಾಗಿ ಕೆಎಂಎಫ್ ನಿರ್ದೇಶಕ ಹಾಗೂ ಕಾಂಗ್ರೆಸ್ ಮುಖಂಡ ಬಿ.ಸಿ.ಆನಂದಕುಮಾರ್ ಕಣಕ್ಕಿಳಿಯಲಿದ್ದಾರೆ ಎಂಬ ವದಂತಿ ಫೇಸ್ ಬುಕ್ ಜಾಲತಾಣದಲ್ಲಿ ಹರಿದಾಡುತ್ತಿದೆ. ಈ ವದಂತಿಯನ್ನು ಬಿ.ಸಿ.ಆನಂದಕುಮಾರ್ ಸಾರಾಸಗಟಾಗಿ ತಳ್ಳಿಹಾಕಿದ್ದಾರೆ.
ಕ್ಷೇತ್ರದ ಮತದಾರರ ದಿಕ್ಕು ತಪ್ಪಿಸಲೆಂದೇ ಕೆಲ ಕಿಡಿಗೇಡಿಗಳು ಉದ್ದೇಶ ಪೂರ್ವಕವಾಗಿ ಜಾಲತಾಣಗಳಲ್ಲಿ ಹುಸಿಸುದ್ದಿ ಪ್ರಕಟಿಸಿದ್ದಾರೆ. ಜೊತೆಗೆ ಬೇಕೆಂತಲೇ ವೈರಲ್ ಮಾಡುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.
ಇದೊಂದು ಸುಳ್ಳು ಸುದ್ದಿ, ಪಕ್ಷದ ಕಾರ್ಯಕರ್ತರು, ಅಭಿಮಾನಿಗಳಲ್ಲಿ ಗೊಂದಲ ಸೃಷ್ಟಿಸಲು ಕಿಡಿಗೇಡಿಗಳು ಮಾಡುತ್ತಿರುವ ಷಡ್ಯಂತ್ರ್ಯ. ಮಾಧ್ಯಮ ಬೆಳಕು ಎಂಬ ಫೇಸ್ ಬುಕ್ ಪೇಜ್ ನಲ್ಲಿ ಆಕ್ಷೇಪಾರ್ಹ ಬರಹ ಪ್ರಕಟಿಸಿದ್ದಾರೆ ಎಂದು ದೂರಿದ್ದಾರೆ.
ನಾನು ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತ, ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಟಿಕೆಟ್ ಕೋರಿ ಅರ್ಜಿ ಸಲ್ಲಿಸಿದ್ದೇನೆ, ಜನವರಿ 20 ರೊಳಗೆ ಸೂಕ್ತ ಅಭ್ಯರ್ಥಿ ಘೋಷಿಸುವಂತೆ ಕಾಂಗ್ರೆಸ್ ರಾಜ್ಯ ನಾಯಕರಿಗೆ ಗಡುವು ಸಹ ನೀಡಿದ್ದೇವೆ. ಹೀಗಿರುವಾಗ ಹೊಸ ಪಕ್ಷದಿಂದ ಚುನಾವಣೆಗೆ ಇಳಿಯಬೇಕಾದ ಅನಿವಾರ್ಯತೆ ಬಂದಿಲ್ಲ. ನನ್ನ ಏಳಿಗೆ ಸಹಿಸದ ಕೆಲವರು ಈ ರೀತಿಯ ಅಪಪ್ರಚಾರದಲ್ಲಿ ತೊಡಗಿದ್ದಾರೆ. ಇಂತಹ ವದಂತಿಗಳಿಗೆ ಅಭಿಮಾನಿಗಳು, ಕಾರ್ಯಕರ್ತರು ಕಿವಿಗೊಡಬಾರದು ಎಂದು ಬಿ.ಸಿ.ಆನಂದ್ ಕುಮಾರ್ ಮನವಿ ಮಾಡಿದ್ದಾರೆ.
ಕೇಂದ್ರ ಸಚಿವಾಲಯ ನೀಡುವ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ಕರ್ನಾಟಕದ ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಕವಿತಾಳ ಪೊಲೀಸ್ ಠಾಣೆ…
ನಮ್ಮ ದೇಶದ ಸರ್ವೋಚ್ಚ ನ್ಯಾಯಾಲಯವು, ನಾಯಿ ಕಡಿತಕ್ಕೆ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳಿಗೆ ಸಂಬಂಧಿಸಿದಂತೆ…
ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು. ಕ್ಷಣ ಮಾತ್ರದಲ್ಲಿ ಲೆಕ್ಕಕ್ಕೂ ಸಿಗದಷ್ಟು ದೂರ ಚಲಿಸಬಲ್ಲದು. ಬೆಳಕಿನ ವೇಗವೂ ಅದಕ್ಕೆ ಸಾಟಿಯಲ್ಲ.....…
ತಾಲ್ಲೂಕಿನ ಹಾಡೋನಹಳ್ಳಿ ಗ್ರಾಮದ ನಿರ್ಜನ ಪ್ರದೇಶದಲ್ಲಿ ಒಂದು ವಾರದ ಹಿಂದೆ ದೊರೆತ ಐದು ದಿನಗಳ ನವಜಾತ ಶಿಶುವಿನ ಜೀವ ಉಳಿಸುವಲ್ಲಿ…
ಕೋಲಾರ: ಕೆ.ಸಿ.ವ್ಯಾಲಿ ಯೋಜನೆಯಿಂದ ಅಂತರ್ಜಲ ಹೆಚ್ಚಿ ರೈತರ ಬದುಕು ಹಸನಾಗಿದ್ದು, ಜೆಡಿಎಸ್ ಪಕ್ಷ ಸೇರಿದಂತೆ ಕೆಲ ಮುಖಂಡರಿಂದ ದಾರಿ ತಪ್ಪಿಸುವ…
ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು ವತಿಯಿಂದ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ…