ನಾನು KRPP ಪಕ್ಷದಿಂದ ಕಣಕ್ಕಿಳಿಯುವುದಿಲ್ಲ ;ವದಂತಿಗೆ ತೆರೆ ಎಳೆದ ಬಿ.ಸಿ.ಆನಂದ್ ಕುಮಾರ್; ಕಿಡಿಗೇಡಿಗಳಿಂದ ಅಪಪ್ರಚಾರ ಎಂದು ಆಕ್ರೋಶ

‘ಕಲ್ಯಾಣ ರಾಜ್ಯ ಪ್ರಗತಿ ಪಕ್ಷ’ದಿಂದ ದೊಡ್ಡಬಳ್ಳಾಪುರ ಕ್ಷೇತ್ರದ ಅಭ್ಯರ್ಥಿಯಾಗಿ ಕೆಎಂಎಫ್ ನಿರ್ದೇಶಕ ಹಾಗೂ ಕಾಂಗ್ರೆಸ್ ಮುಖಂಡ ಬಿ.ಸಿ.ಆನಂದಕುಮಾರ್ ಕಣಕ್ಕಿಳಿಯಲಿದ್ದಾರೆ ಎಂಬ ವದಂತಿ ಫೇಸ್ ಬುಕ್ ಜಾಲತಾಣದಲ್ಲಿ ಹರಿದಾಡುತ್ತಿದೆ. ಈ ವದಂತಿಯನ್ನು ಬಿ.ಸಿ.ಆನಂದಕುಮಾರ್ ಸಾರಾಸಗಟಾಗಿ ತಳ್ಳಿಹಾಕಿದ್ದಾರೆ.

ಕ್ಷೇತ್ರದ ಮತದಾರರ ದಿಕ್ಕು ತಪ್ಪಿಸಲೆಂದೇ ಕೆಲ ಕಿಡಿಗೇಡಿಗಳು ಉದ್ದೇಶ ಪೂರ್ವಕವಾಗಿ ಜಾಲತಾಣಗಳಲ್ಲಿ ಹುಸಿ‌ಸುದ್ದಿ ಪ್ರಕಟಿಸಿದ್ದಾರೆ. ಜೊತೆಗೆ ಬೇಕೆಂತಲೇ ವೈರಲ್‌ ಮಾಡುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.

ಇದೊಂದು ಸುಳ್ಳು ಸುದ್ದಿ, ಪಕ್ಷದ ಕಾರ್ಯಕರ್ತರು, ಅಭಿಮಾನಿಗಳಲ್ಲಿ ಗೊಂದಲ ಸೃಷ್ಟಿಸಲು ಕಿಡಿಗೇಡಿಗಳು‌ ಮಾಡುತ್ತಿರುವ ಷಡ್ಯಂತ್ರ್ಯ. ಮಾಧ್ಯಮ ಬೆಳಕು ಎಂಬ ಫೇಸ್ ಬುಕ್ ಪೇಜ್ ನಲ್ಲಿ ಆಕ್ಷೇಪಾರ್ಹ ಬರಹ ಪ್ರಕಟಿಸಿದ್ದಾರೆ ಎಂದು ದೂರಿದ್ದಾರೆ.

ನಾನು ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತ, ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಟಿಕೆಟ್ ಕೋರಿ ಅರ್ಜಿ ಸಲ್ಲಿಸಿದ್ದೇನೆ, ಜನವರಿ 20 ರೊಳಗೆ ಸೂಕ್ತ ಅಭ್ಯರ್ಥಿ ಘೋಷಿಸುವಂತೆ ಕಾಂಗ್ರೆಸ್ ರಾಜ್ಯ ನಾಯಕರಿಗೆ ಗಡುವು ಸಹ ನೀಡಿದ್ದೇವೆ. ಹೀಗಿರುವಾಗ ಹೊಸ ಪಕ್ಷದಿಂದ ಚುನಾವಣೆಗೆ ಇಳಿಯಬೇಕಾದ ಅನಿವಾರ್ಯತೆ ಬಂದಿಲ್ಲ. ನನ್ನ ಏಳಿಗೆ ಸಹಿಸದ ಕೆಲವರು ಈ ರೀತಿಯ ಅಪಪ್ರಚಾರದಲ್ಲಿ ತೊಡಗಿದ್ದಾರೆ. ಇಂತಹ ವದಂತಿಗಳಿಗೆ ಅಭಿಮಾನಿಗಳು, ಕಾರ್ಯಕರ್ತರು ಕಿವಿಗೊಡಬಾರದು ಎಂದು ಬಿ.ಸಿ.ಆನಂದ್ ಕುಮಾರ್ ಮನವಿ ಮಾಡಿದ್ದಾರೆ.

Ramesh Babu

Journalist

Recent Posts

ಸರ್ಕಾರಿ ಶಾಲಾ ಮಕ್ಕಳಿಗೆ ಟ್ರ್ಯಾಕ್‌ಸೂಟ್, ಶೂ ವಿತರಣೆ

ದೊಡ್ಡಬಳ್ಳಾಪುರ: ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಉತ್ತಮ ಶಿಕ್ಷಣದ ಜೊತೆಗೆ ಅಗತ್ಯ ಮೂಲಸೌಕರ್ಯ ಹಾಗೂ ಪ್ರೋತ್ಸಾಹ ದೊರೆಯುವಂತೆ ಸಮಾಜದ…

5 hours ago

ಕಸ ವಿಂಗಡಣೆ ಯಂತ್ರಕ್ಕೆ ಸಿಲುಕಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ಕಸ ವಿಂಗಡಣೆ ಮಾಡುವ ಯಂತ್ರಕ್ಕೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿರುವ ದಾರುಣ ಘಟನೆ ತಾಲೂಕಿನ ಎಂಎಸ್‌ಜಿಪಿ ಕಸ ಸಂಸ್ಕರಣಾ ಘಟಕದಲ್ಲಿ…

10 hours ago

ಅಕ್ಟೋಬರ್ 2….. ಶಾಸ್ತ್ರಿ ಮತ್ತು ಗಾಂಧಿ……..,

ದೇಶದ ಪ್ರಧಾನಿಯೊಬ್ಬರು ಹೀಗೂ ಬದುಕಬಹುದು ಎಂದು ತೋರಿಸಿ ಮಾದರಿಯಾದ ವ್ಯಕ್ತಿ ಲಾಲ್ ಬಹದ್ದೂರ್ ಶಾಸ್ತ್ರಿ. ಅವರಿಗೆ ಹುಟ್ಟು ಹಬ್ಬದ ಶುಭಾಶಯಗಳು.......…

13 hours ago

ಬೆಂಬಲ ಬೆಲೆಯಡಿ ಸೂರ್ಯಕಾಂತಿ, ಹೆಸರುಕಾಳು, ಸೋಯಾಬೀನ್‌ಗೆ ಖರೀದಿಗೆ ಕೇಂದ್ರದ ಅನುಮೋದನೆ

2026-27ನೇ ಸಾಲಿನ ಮುಂಗಾರು ಹಂಗಾಮಿನ ಬೆಂಬಲ ಬೆಲೆ ಯೋಜನೆಯಡಿ ಸೂರ್ಯಕಾಂತಿ, ಹೆಸರುಕಾಳು ಹಾಗೂ ಸೋಯಾಬೀನ್ ಉತ್ಪನ್ನಗಳನ್ನು ಕನಿಷ್ಠ ಬೆಂಬಲ ಬೆಲೆ…

1 day ago

ಸಿಎಂಗೆ ರೈತಪರ ಕಾಳಜಿ ಇಲ್ಲ ಶಾಸಕ ಧೀರಜ್ ಮುನಿರಾಜು ಆರೋಪ

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಬಡವರು ಹಾಗೂ ರೈತರ ಬಗ್ಗೆ ಕಾಳಜಿ ಇಲ್ಲ. ಹೂಡಿಕೆದಾರರು ಹಾಗೂ ಬಂಡವಾಳಶಾಹಿಗಳ ಹಿತಾಸಕ್ತಿಯ ಬಗ್ಗೆಯೇ…

1 day ago

ಎಸ್ ಐ ಆರ್ ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಗೆ ತಪ್ಪು ಮಾಹಿತಿ ನೀಡುವ ಅಧಿಕಾರಿಗಳ ವಿರುದ್ಧ ಕ್ರಮ – ಡಿಸಿ ಅನುರಾಧ

ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಗೆ ತಪ್ಪು ಮಾಹಿತಿ ನೀಡಿ ದಾರಿ ತಪ್ಪಿಸುವ ಬಿಎಲ್‌ಒ ಅಥವಾ…

1 day ago