ನಾಪತ್ತೆಯಾಗಿದ್ದ ಮಹಿಳೆ ಹೊಂಡದಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಸೆಬ್ಬೇನಹಳ್ಳಿಯಲ್ಲಿ ನಡೆದಿದೆ.
ಪೂಜಾ(25) ಮೃತ ಮಹಿಳೆ. ಕೌಟುಂಬಿಕ ಕಲಹ ಹಿನ್ನೆಲೆ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.
ಆತ್ಮಹತ್ಯೆಗೆ ಗಂಡನ ಮನೆಯವರ ಕಿರುಕುಳವೇ ಕಾರಣ ಎಂದು ಪೂಜಾ ಪೋಷಕರ ಆರೋಪವಾಗಿದೆ.
ಪತಿ ಓಂಕಾರ್, ಆತನ ಅಣ್ಣ ರಾಜಣ್ಣ ಮೇಲೆ ಆರೋಪ ಮಾಡಲಾಗಿದೆ.
ಪತಿ ಓಂಕಾರ್ ಅವರ ಅಣ್ಣ ರಾಜಣ್ಣ ಕಳೆದ ನಾಲ್ಕು ದಿನಗಳ ಹಿಂದೆ ಪೂಜಾಳನ್ನ ಗಂಡನ ಮನೆಗೆ ಕರೆದೊಯ್ದಿದ್ದ. ಎರಡು ದಿನಗಳಿಂದ ಪೂಜಾ ನಾಪತ್ತೆಯಾಗಿದ್ದಳು. ಇಂದು ಸೆಬ್ಬೇನಹಳ್ಳಿಯ ಹೊಂಡದಲ್ಲಿ ಪೂಜಾಳ ಶವ ಪತ್ತೆಯಾಗಿದೆ.
ಸ್ಥಳಕ್ಕೆ ಅಂದನಕೆರೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಅಂದನಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಎ.ವಿ ಲಕ್ಷ್ಮಿನಾರಾಯಣ ಅವರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2 ರನ್ನಾಗಿ ನೇಮಕ ಮಾಡಲಾಗಿದೆ.. ಈ ಹಿಂದೆ ತುಮಕೂರು…
ನಗರಾಭಿವೃದ್ಧಿ ಕೋಶದ ಇಂಜಿನಿಯರ್ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆಸಲಾಗಿದ್ದು, ದಾಳಿ ವೇಳೆ 14 ಕೋಟಿ ಅಕ್ರಮ ಆಸ್ತಿ ಪತ್ತೆಯಾಗಿದೆ.…
ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಫೈರೋಜ್ ಪಠಾಣ್ ಅವರನ್ನು ಧಾರವಾಡ ನಗರದ ಹಾಶ್ಮಿನಗರದಲ್ಲಿ ಇರುವ ಮನೆಯಲ್ಲೇ ಹತ್ಯೆ ಮಾಡಿರುವ ಘಟನೆ…
ಮುಂದಿನ ಸುಮಾರು 15 ವರ್ಷಗಳಲ್ಲಿ ನಮ್ಮ ಮಕ್ಕಳ ಭವಿಷ್ಯ ಉತ್ತಮವಾಗಿರಬೇಕಾದರೆ, ಈ ಸಮಾಜ ನಾವು ಈಗಿರುವ ಪರಿಸ್ಥಿತಿಗಿಂತ ಒಳ್ಳೆಯ ಗುಣಮಟ್ಟದ…
ಮಹಿಳೆಯರ ಒಳ ಉಡುಪುಗಳನ್ನು ಕದ್ದು ಧರಿಸುತ್ತಿದ್ದ ವಿಚಿತ್ರ ಕಳ್ಳನನ್ನು ಪೊಲೀಸರು ಬಂಧಿಸಿದ್ದಾರೆ. ಅಮೃತ್ ಎಂಬ ಈ ಆರೋಪಿ, ರಾತ್ರಿ ವೇಳೆ…
ದೊಡ್ಡಬಳ್ಳಾಪುರ ನಗರದಲ್ಲಿ ಏ.12 ರಂದು 220/66/11ಕೆವಿ ಕೆಐಎಡಿಬಿ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ F02-Birla Super ಫೀಡರ್‌ನಲ್ಲಿ ವಿದ್ಯುತ್ ಕಾಮಗಾರಿಗಳು…