2 ದಿನಗಳ ಹಿಂದೆ ಕಾಣೆಯಾಗಿದ್ದ 15 ವರ್ಷದ ಬಾಲಕಿ ಶವವಾಗಿ ಪತ್ತೆಯಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಅನುಗೊಂಡನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶವವಾಗಿ ಪತ್ತೆಯಾಗಿದೆ.
ಬರಗೂರು ಗ್ರಾಮದ ನಿವಾಸಿ ನಿತಿನ್ (23), ಎಂಬ ಯುವಕ ಬಾಲಕಿಯನ್ನ ಅಪಹರಿಸಿ ಕೊಲೈಗೈದಿರುವ ಶಂಕೆ ವ್ಯಕ್ತವಾಗಿದೆ.
ಕಳೆದ 15 ದಿನಗಳಿಂದ ಆರೋಪಿ ನಿತಿನ್ ಪ್ರೀತಿಸು ಎಂದು ಬಾಲಕಿ ಹಿಂದೆ ಬಿದ್ದು, ಪೀಡಿಸುತ್ತಿದ್ದ ಎನ್ನಲಾಗಿದೆ. ಪ್ರೀತಿ ನಿರಾಕರಣೆ ಹಿನ್ನೆಲೆ ಬಾಲಕಿಗೆ ಚಾಕುವಿನಿಂದ ತಿವಿದು ಕೊಲೆ ಮಾಡಲಾಗಿದೆ ಎಂಬ ಮಾಹಿತಿ ತಿಳಿದುಬಂದಿದೆ.
ಕೊಲೆ ನಂತರ ಆರೋಪಿ ನಿತಿನ್ ಆತ್ಮಹತ್ಯೆ ಹೈಡ್ರಾಮ ಮಾಡಿದ್ದಾನೆ. ಸದ್ಯ ಕೋಲಾರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.
ಅನುಗೊಂಡನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಾಪತ್ತೆಯಾಗಿದ್ದ ಶಾಲಾ ವಿದ್ಯಾರ್ಥಿನಿ ಮರ್ಡರ್ ಕೇಸ್ ವಿಚಾರಕ್ಕೆ ಸಂಬಂಧಿಸಿದಂತೆ ಪೊಲೀಸರ ವಿರುದ್ಧ ಪೋಷಕರು ರಸ್ತೆ ತಡೆದು ಪ್ರತಿಭಟನೆ ನಡೆಸಿದ್ದಾರೆ.
ಬಾಲಕಿಯ ಸಂಬಂಧಿಕರು ದಲಿತ ಸಂಘಟನೆ ಮುಖಂಡರೊಂದಿಗೆ ಹೊಸಕೋಟೆ ತಾಲೂಕಿನ ಡಿ.ಹೊಸಹಳ್ಳಿ ಬಳಿ ಹೊಸಕೋಟೆ ಚಿಕ್ಕತಿರುಪತಿ ರಸ್ತೆ ತಡೆದು ಪ್ರತಿಭಟನೆ ನಡೆಸಿದ್ದಾರೆ.
ದಲಿತ ಹೆಣ್ಣು ಮಗಳನ್ನ ಕಿಡ್ನಾಪ್ ಮಾಡಿ ಕ್ರೂರವಾಗಿ ಕೊಲೆ ಮಾಡಿದ್ದಾರೆ ಎಂದು ಅರೋಪ ಮಾಡಿ, ಬಾಲಕಿ ಮೃತದೇಹವಿರುವ ಅಂಬ್ಯುಲೆನ್ಸ್ ರಸ್ತೆಯಲ್ಲಿ ನಿಲ್ಲಿಸಿ ಈ ಘಟನೆಯಲ್ಲಿ ಭಾಗಿಯಾಗಿರುವ ಎಲ್ಲರನ್ನೂ ಬಂಧಿಸುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಲಾಗಿದೆ.
ಈ ವೇಳೆ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ಮಾತಿನ ಚಕಮಕಿ ನಡೆದಿದೆ.
ಆರೋಪಿ ನಿತಿನ್ ಜೊತೆಗೆ ಇನ್ನೂ ಹಲವರು ಕೃತ್ಯದಲ್ಲಿ ಭಾಗಿ ಆರೋಪ ಮಾಡಲಾಗಿದೆ. ಬಾಲಕಿಯ ಸಾವಿಗೆ ನ್ಯಾಯ ಕೊಡಿಸುವಂತೆ ಒತ್ತಾಯ ಮಾಡಲಾಗಿದೆ. ಪ್ರತಿಭಟನಾಕಾರರ ಮನವೊಲಿಸಲು ಪೊಲೀಸರು ಹರಸಾಹಸ ನಡೆಸಿದ್ದಾರೆ.