ನಾಮಕರಣಕ್ಕೆ ತೆರಳುತ್ತಿದ್ದ ಮಿನಿ ಬಸ್ ಪಲ್ಟಿಯಾಗಿರುವ ಘಟನೆ ತಾಲೂಕಿನ ಮೇಷ್ಟ್ರು ಮನೆ ಗೇಟ್ ಬಳಿ ನಡೆದಿದೆ.
ಬಸ್ ನಲ್ಲಿ ಸುಮಾರು 25 ಜನ ಪ್ರಯಾಣ ಮಾಡುತ್ತಿದ್ದರು ಎಂದು ತಿಳಿದುಬಂದಿದೆ. ಬಸ್ ಪಲ್ಟಿಯಾದ ಹಿನ್ನೆಲೆ ಹಲವರಿಗೆ ಗಂಭೀರ ಗಾಯಗಳಾಗಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಪ್ರಯಾಣಿಕರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ತುಮಕೂರಿನ ಶಿರಾದಿಂದ ಯಲಹಂಕಕ್ಕೆ ಪ್ರಯಾಣ ಮಾಡಲಾಗುತ್ತಿತ್ತು ಎನ್ನಲಾಗಿದೆ.
ಘಟನಾ ಸ್ಥಳಕ್ಕೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.