ನಾಮಕರಣಕ್ಕೆ ತೆರಳುತ್ತಿದ್ದ ಮಿನಿ ಬಸ್ ಪಲ್ಟಿ: ಬಸ್ ನಲ್ಲಿ 25 ಜನ ಪ್ರಯಾಣ: ಹಲವರಿಗೆ ಗಂಭೀರ ಗಾಯ: ಆಸ್ಪತ್ರೆಗೆ ದಾಖಲು

ನಾಮಕರಣಕ್ಕೆ ತೆರಳುತ್ತಿದ್ದ ಮಿನಿ ಬಸ್ ಪಲ್ಟಿಯಾಗಿರುವ ಘಟನೆ ತಾಲೂಕಿನ ಮೇಷ್ಟ್ರು ಮನೆ ಗೇಟ್ ಬಳಿ ನಡೆದಿದೆ.

ಬಸ್ ನಲ್ಲಿ ಸುಮಾರು 25 ಜನ ಪ್ರಯಾಣ ಮಾಡುತ್ತಿದ್ದರು ಎಂದು ತಿಳಿದುಬಂದಿದೆ. ಬಸ್ ಪಲ್ಟಿಯಾದ ಹಿನ್ನೆಲೆ ಹಲವರಿಗೆ ಗಂಭೀರ ಗಾಯಗಳಾಗಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಪ್ರಯಾಣಿಕರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ತುಮಕೂರಿನ‌ ಶಿರಾದಿಂದ ಯಲಹಂಕಕ್ಕೆ ಪ್ರಯಾಣ ಮಾಡಲಾಗುತ್ತಿತ್ತು ಎನ್ನಲಾಗಿದೆ.

ಘಟನಾ ಸ್ಥಳಕ್ಕೆ ದೊಡ್ಡಬಳ್ಳಾಪುರ ‌ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Ramesh Babu

Journalist

Recent Posts

ಯುವ ಆಪದ್ ಮಿತ್ರ ಯೋಜನೆ: ವಿಪತ್ತು ನಿರ್ವಹಣೆ ಕುರಿತು ಒಂದು ವಾರ ತರಬೇತಿ ಶಿಬಿರ

ಯುವ ಆಪದ್ ಮಿತ್ರ ಯೋಜನೆಯ ಅಂಗವಾಗಿ ಕಾಲೇಜಿನ ವಿದ್ಯಾರ್ಥಿಗಳು ದೊಡ್ಡಬಳ್ಳಾಪುರದ ಅನಿಬೆಸೆಂಟ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ತರಬೇತಿ ಮತ್ತು…

1 hour ago

ಮಹಿಳೆಯರನ್ನು ಮಂಚಕ್ಕೆ ಕರೆದ ಆರೋಪ: ಮೂಡುಬಿದಿರೆ ಪೊಲೀಸ್ ಇನ್ಸ್‌ಪೆಕ್ಟರ್ ಸಂದೇಶ್ ಪಿ.ಜಿ ಅಮಾನತು

ಪೊಲೀಸ್ ಠಾಣೆಗೆ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ದೂರು ಕೊಡಲು ಬಂದ ಮಹಿಳೆಯರನ್ನು ಮಂಚಕ್ಕೆ ಕರೆಯುತ್ತಾರೆ ಎಂಬ ಆರೋಪದ ಮೇರೆಗೆ ಮೂಡುಬಿದಿರೆ…

1 hour ago

ಮುಂಗಾರು ಪೂರ್ವ ಮಳೆ: ಮಳೆಯಲ್ಲಿ ಸಾಲುಗಟ್ಟಿ ನಿಂತ ರಾಗಿ‌ ಮಾರಾಟ ಮಾಡಲು ಬಂದ ಟ್ರ್ಯಾಕ್ಟರ್ ಗಳು

ಇಂದು ಸಂಜೆ ಸುಮಾರು 4:30ರಲ್ಲಿ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಪ್ರಾರಂಭವಾದ ಮಳೆಯು ಸತತವಾಗಿ 7ಗಂಟೆಯವರೆಗೆ ಬಿದ್ದಿದ್ದು, ಜನ ಜೀವನ ಅಸ್ತವ್ಯಸ್ತಗೊಂಡಿತು. ಅದೇರೀತಿ…

3 hours ago

ರಣ ಬಿಸಿಲಿನಿಂದ ಕಂಗೆಟ್ಟಿದ್ದ ಜನ: ಧರೆಗಿಳಿದ ವರ್ಷದ ಮೊದಲ ಮಳೆ: ಬಿಸಿಲಿನ ಬೇಗೆಗೆ ಬೆಂದಿದ್ದ ಭೂಮಿ ತಂಪು ತಂಪು: ಗುಡುಗು ಸಹಿತ ಬಿದ್ದ ಮಳೆ ಹನಿಗೆ ಜನ ಫುಲ್ ಖುಷ್

ಬಿಸಿಲಿನ ತಾಪ ಹೆಚ್ಚಾಗುತ್ತಿದ್ದ ಸಂದರ್ಭದಲ್ಲಿ ದೊಡ್ಡಬಳ್ಳಾಪುರ ನಗರದ ಕೆಲವು ಪ್ರದೇಶಗಳಲ್ಲಿ ಮಂಗಳವಾರ ಸಂಜೆ ವರ್ಷದ ಮೊದಲ ಮಳೆ ಸುರಿಯಿತು. ಬಂಗಾಳ…

4 hours ago

ನಾಳೆ (ಮಾ.18) ಎಸ್.ಎಸ್.ಎಲ್.ಸಿ ಪರೀಕ್ಷೆ -01: ಬೆಂ. ಗ್ರಾ ಜಿಲ್ಲೆಯಲ್ಲಿ 14,314 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ

2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಮಾರ್ಚ್ 18 ಬುಧವಾರದಿಂದ ಏಪ್ರಿಲ್ 02 ಗುರುವಾರದ ವರೆಗೆ ಬೆಳಿಗ್ಗೆ 10:15 ಗಂಟೆಯಿಂದ ಮಧ್ಯಾಹ್ನ…

6 hours ago

ನೂತನ ಶಾಲಾ ಕಟ್ಟಡ ಮತ್ತು ಅಂಗನವಾಡಿ ಕೇಂದ್ರ ಉದ್ಘಾಟನೆ

ದೊಡ್ಡಬಳ್ಳಾಪುರ: ನಗರದ 4 ನೇ ವಾರ್ಡ್‌ನ ವಿನಾಯಕ ನಗರದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಅಸ್ಟಿಮೊ ಫೈ ಕಂಪನಿಯ…

12 hours ago