ವಿಧಾನಸಭೆ ಚುನಾವಣೆಗೆ ತಾಲ್ಲೂಕಿನ ಮೂರು ಪಕ್ಷಗಳಿಂದ ಕಣಕ್ಕಿಳಿಯಲಿರುವ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿ, ಅಖಾಡಕ್ಕೆ ಇಳಿಯಲು ಸನ್ನದ್ದರಾಗುತ್ತಿದ್ದಾರೆ.
ತಾಲ್ಲೂಕಿನಲ್ಲಿ ಕಾಂಗ್ರೆಸ್ ನಿಂದ ಎರಡು ಬಾರಿ ಗೆದ್ದಿರುವ ಹಾಲಿ ಶಾಸಕ ಟಿ. ವೆಂಕಟರಮಣಯ್ಯ, ಜೆಡಿಎಸ್ ನಿಂದ ಮೂರು ಬಾರಿ ಸೋತಿರುವ ಬಿ.ಮುನೇಗೌಡ, ಬಿಜೆಪಿಯಿಂದ ಹೊಸಮುಖ ಧೀರಜ್ ಮುನಿರಾಜು ಅಖಾಡಕ್ಕಿಳಿಯಲು ಕದನ ಕಲಿಗಳು ಸಿದ್ಧರಾಗಿದ್ದಾರೆ.
ಟಿಕೆಟ್ ಘೋಷಣೆಯಾದ ಬೆನ್ನಲ್ಲೇ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಲು ಸೂಕ್ತ ದಿನ, ಗಳಿಗೆ, ಕಾಲವನ್ನು ನಿರ್ಣಯಿಸಲು ಜ್ಯೋತಿಷಿಗಳ ಮೊರೆಹೋಗಿದ್ದಾರೆ.
ರಾಶಿ, ಜನ್ಮನಕ್ಷತ್ರಕ್ಕೆ ಅನುಗುಣವಾಗಿ ನಾಮಪತ್ರ ಸಲ್ಲಿಕೆಗೆ ಸಮಯವನ್ನು ನಿಗದಿಪಡಿಸಿಕೊಂಡಿರುವ ಅಭ್ಯರ್ಥಿಗಳು, ಈಗಾಗಲೇ ಚುನಾವಣಾಧಿಕಾರಿಗಳ ಕಚೇರಿಯಿಂದ ನಾಮಪತ್ರಗಳನ್ನು ಪಡೆದಿದ್ದು, ಅಗತ್ಯ ದಾಖಲೆಗಳನ್ನು ಸಿದ್ಧಪಡಿಸಿಕೊಳ್ಳುತ್ತಿದ್ದಾರೆ.
ಏ.13ರಿ೦ದ ನಾಮಪತ್ರ ಸಲ್ಲಿಕೆ ಆರಂಭವಾಗಿದೆ. ಏ.20ರವರೆಗೆ ನಾಮಪತ್ರ ಸಲ್ಲಿಕೆಗೆ ಅವಕಾಶವಿದೆ. ಸರಕಾರಿ ರಜಾ ದಿನಗಳನ್ನು ಹೊರತುಪಡಿಸಿ, ಉಳಿದ ದಿನ ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 3 ಗಂಟೆವರೆಗೆ ನಾಮಪತ್ರ ಸಲ್ಲಿಸಲ ಅವಕಾಶವಿದೆ. ನಾಮಪತ್ರ ಸಲ್ಲಿಕೆಗೆ ಇನ್ನು ಐದು ದಿನ ಮಾತ್ರ ಬಾಕಿ.
ಚುನಾವಣೆಗೆ ಈ ಬಾರಿ ಒಂದು ತಿಂಗಳ ಮುಂಚೆಯೇ ಟಿಕೆಟ್ ಖಾತರಿ ಮಾಡಿಕೊಂಡು ಪ್ರಚಾರದಲ್ಲಿ ತೊಡಗಿಸಿಕೊಂಡಿರುವ ಜೆಡಿಎಸ್ ಅಭ್ಯರ್ಥಿ ಬಿ.ಮುನೇಗೌಡ ಮೊದಲಿಗರಾಗಿ ಕುಟುಂಬದೊಂದಿಗೆ ಶನಿವಾರ ನಾಮಪತ್ರ ಸಲ್ಲಿಸಿದ್ದಾರೆ. ಅಧಿಕೃತವಾಗಿ ನಾಮಪತ್ರ ಸಲ್ಲಿಕೆಗೆ ಕೊನೆ ದಿನವಾದ 20 ರಂದು ಗುರುವಾರ ನಿಗದಿಯಾಗಿದ್ದು, ಕಾರ್ಯಕರ್ತರ ಬೃಹತ್ ದಂಡಿನೊಂದಿಗೆ ಸಲ್ಲಿಸಲಿದ್ದಾರೆ. ಒಂದು ಉಪಚುನಾವಣೆ ಸೇರಿದಂತೆ ಮೂರು ಬಾರಿ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಿ ಸೋಲುಂಡಿರುವ ಮುನೇಗೌಡರಿಗೆ ಈ ಬಾರಿಯಾದರೂ ಮತದಾರರು ಕೈ ಹಿಡಿಯುವ ನಿರೀಕ್ಷೆಯಲ್ಲಿದ್ದಾರೆ.
ಏ.17ಕ್ಕೆ ‘ಕೈ’ ಅಭ್ಯರ್ಥಿ ನಾಮಿನೇಷನ್:
2013, 2108 ಚುನಾವಣೆಗಳಲ್ಲಿ ಗೆಲುವು ಸಾಧಿಸಿರುವ ಕಾಂಗ್ರೆಸ್ ಅಭ್ಯರ್ಥಿ ವೆಂಕಟರಮಣಯ್ಯ 17 ರಂದು ಸೋಮವಾರ ತಮ್ಮ ಉಮೇದುವಾರಿಕೆ ಸಲ್ಲಿಸಲು ಸಿದ್ದರಾಗಿದ್ದಾರೆ. ಬೃಹತ್ ಮೆರವಣಿಗೆಯೊಂದಿಗೆ ಶಕ್ತಿ ಪ್ರದರ್ಶನದ ಮೂಲಕ ನಾಮಪತ್ರ ಸಲ್ಲಿಸಲು ಸಿದ್ಧತೆ ನಡೆಸಿರುವ ಶಾಸಕ ಟಿ.ವೆಂಕಟರಮಣಯ್ಯ ಹ್ಯಾಟ್ರಿಕ್ ಗೆಲುವಿನ ನಗೆ ಬೀರುವ ನಿರೀಕ್ಷೆಯಲ್ಲಿದ್ದಾರೆ.
ಏ.18ಕ್ಕೆ ಕಮಲ ಕಲಿ ಉಮೇದುವಾರಿಕೆ
ಸತತ ಮೂರು ವರ್ಷಗಳಿಂದ ಕ್ಷೇತ್ರದಲ್ಲಿ ಸಾಮಾಜಿಕ ಸೇವೆಯಲ್ಲಿ ತೊಡಗಿಸಿಕೊಂಡಿರುವ ಯುವ ನಾಯಕ ಧೀರಜ್ ಮುನಿರಾಜು ಮಂಗಳವಾರ 18 ರಂದು ನಾಮಪತ್ರ ಸಲ್ಲಿಸುವ ಮುಖಾಂತರ ಚುನಾವಣಾ ಅಖಾಡಕ್ಕೆ ಧುಮುಕಲಿದ್ದಾರೆ. ತಾಲ್ಲೂಕಿನಾದ್ಯಂತ ಪಕ್ಷ ಸಂಘಟನೆಯಲ್ಲಿ ತೊಡಗಿರುವ ಧೀರಜ್ ಮುನಿರಾಜುಗೆ ಬಿಜೆಪಿಯಿಂದ ಗೆಲುವಿನ ಮಾಲೆ ದೊರೆಯುವ ಒತ್ತಾಸೆಯಲ್ಲಿದ್ದಾರೆ. ಇಂದಿನಿಂದ ಅಧಿಕೃತವಾಗಿ ಚುನಾವಣಾ ಪ್ರಚಾರ ಕೈಗೊಳ್ಳಲಿದ್ದಾರೆ.
ಶಕ್ತಿ ಪ್ರದರ್ಶನ ಅಭ್ಯರ್ಥಿಗಳ ಸಕಲ ಸಿದ್ಧತೆ:
ಚುನಾವಣಾ ಕದನ ಕಲಿಗಳ ನಾಮಪತ್ರ ಸಲ್ಲಿಕೆ ದಿನಾಂಕಗಳು ಪ್ರತ್ಯೇಕವಾಗಿರುವದರಿಂದ ಬೆಂಬಲಿಗರ, ಕಾರ್ಯಕರ್ತರ ಶಕ್ತಿ ಪ್ರದಶರ್ನಕ್ಕೆ ಸಾಕ್ಷಿಯಾಗಲಿದೆ. ಮೆರವಣಿಗೆ, ಹಾರ-ತುರಾಯಿ, ಪಟಾಕಿಗಳನ್ನು ಸಿದ್ಧ ಮಾಡಿಕೊಂಡಿರುವ ಅಭ್ಯರ್ಥಿಗಳು ಗೆಲುವು ನಮ್ಮದೆ ಎಂಬಂತ ಬಲ ಪ್ರದರ್ಶನಕ್ಕೆ ಸಿದ್ಧತೆ ನಡೆಸಿದ್ದಾರೆ.
ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನೇ ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಕಮ್ಮಸಂದ್ರದಲ್ಲಿ ನಡೆದಿದೆ. ಘಟನೆಯಲ್ಲಿ 9 ವರ್ಷದ…
ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…
ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…
ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…
ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…
ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…