ನಾಮಫಲಕಗಳಲ್ಲಿ ಕನ್ನಡವನ್ನು ಕಡೆಗಣಿಸಿರುವುದನ್ನು ವಿರೋಧಿಸಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಾಧ್ಯಕ್ಷ ನಾರಾಯಣಗೌಡರ ಬಣ ನಡೆಸಿದ ಬೃಹತ್ ಜನಜಾಗೃತಿ ಪ್ರತಿಭಟನಾ ಹೋರಾಟಕ್ಕೆ ರಾಜ್ಯಾದ್ಯಂತ ಉತ್ತಮ ಬೆಂಬಲ ಸಿಕ್ಕಿದೆ.
ದೊಡ್ಡಬಳ್ಳಾಪುರ ತಾಲೂಕು ರಕ್ಷಣಾ ವೇದಿಕೆ ವತಿಯಿಂದ ಹೋರಾಟಕ್ಕೆ ನೂರಾರು ಕಾರ್ಯಕರ್ತರು ಬೆಂಬಲ ಸೂಚಿಸಿ ಹೋರಾಟದಲ್ಲಿ ಭಾಗವಹಿಸಿದ್ದರು.
ನಾರಾಯಣಗೌಡರ ಆದೇಶದಂತೆ ರಾಜ್ಯ ಉಪಾಧ್ಯಕ್ಷ ಪುಟ್ಟೇಗೌಡರ ಹಾಗೂ ಮಹಿಳಾ ಘಟಕದ ಉಪಾಧ್ಯಕ್ಷರಾದ ಅನ್ನಪೂರ್ಣ ರವರ ಮಾರ್ಗದರ್ಶನದಲ್ಲಿ ತಾಲೂಕು ಅಧ್ಯಕ್ಷರಾದ ವಿ.ಪುರುಷೋತ್ತಮ್ ಗೌಡ ನೇತೃತ್ವದಲ್ಲಿ ಹೋರಾಟಕ್ಕೆ ಬೆಂಬಲ ಸೂಚಿಸಿ ತಾಲೂಕಿನ ನೂರಾರು ಕಾರ್ಯಕರ್ತರು ಹೋರಾಟದ ಕೇಂದ್ರ ಬಿಂದುವಾದ ಸಾದಳ್ಳಿ ಗೇಟ್ ಬಳಿ ವಾಹನಗಳಲ್ಲಿ ತೆರಳಿ ಆಂಗ್ಲ ಭಾಷೆಯ ನಾಮಫಲಕಗಳ ತೆರವಿಗೆ ಆಗ್ರಹಿಸಿ ದಿಕ್ಕಾರ ಕೂಗಿದರು.
ನಂತರ ನಾರಾಯಣಗೌಡರ ಸಲಹೆಯಂತೆ ಮಾಲ್ ಆಫ್ ಏಶಿಯಾಗೆ ಮುತ್ತಿಗೆ ಹಾಕಲು ಬೆಂಗಳೂರು ಕಡೆ ತೆರಳಿದಾಗ ಮಾರ್ಗ ಮಧ್ಯೆ ಪೊಲೀಸರು ದೊಡ್ಡಬಳ್ಳಾಪುರದ ಹೋರಾಟಗಾರರನ್ನು ತಡೆದು ವಾಪಸ್ ಕಳಿಸಿದರು.
ಇದರ ಮಧ್ಯೆ ದಾರಿಯಲ್ಲಿ ಸಿಕ್ಕ ಆಂಗ್ಲ ಭಾಷೆಯ ನಾಮಫಲಕಗಳನ್ನು ಕಿತ್ತು ಬಿಸಾಡಿ ವಲಸಿಗರ ಹಾಗೂ ಕನ್ನಡ ವಿರೋಧಿಗಳ ವಿರುದ್ಧ ಘೋಷಣೆ ಕೂಗಿದರು.
ಪ್ರತಿಭಟನೆಯಲ್ಲಿ ರಕ್ಷಣಾ ವೇದಿಕೆ ಕಾರ್ಮಿಕ ಘಟಕದ ಅಧ್ಯಕ್ಷ ಪುಟ್ಟರಾಜು, ಮಹಿಳಾ ಘಟಕದ ಗೀತಾ, ಶೋಭಾ ಹಾಗೂ ಯುವ ಘಟಕದ ಹಲವಾರುಕಾರ್ಯಕರ್ತರು ಭಾಗವಹಿಸಿದ್ದರು.
22 ವರ್ಷದ ಯುವಕ ಮನೆಯಲ್ಲೇ ನೇಣಿಗೆ ಶರಣಾಗಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ನಾರಸಿಂಹನಹಳ್ಳಿ ಗ್ರಾಮದಲ್ಲಿ ಕಳೆದ ರಾತ್ರಿ…
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಪ್ರಗತಿ…
ದೊಡ್ಡಬಳ್ಳಾಪುರದಲ್ಲಿ ನಟ ಪ್ರಥಮ್ ಗೆ ಜೀವ ಬೆದರಿಕೆ ಹಾಗೂ ಹಲ್ಲೆ ಯತ್ನ ಪ್ರಕರಣಕ್ಕೆ ಸಂಬಂಧಸಿದಂತೆ, ಇಂದು ಆರೋಪಿಗಳಾದ ಯಶಸ್ವಿನಿ ಗೌಡ,…
ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಂಬಂಧಿಸಿದಂತೆ ಐತಿಹಾಸಿಕ, ಧಾರ್ಮಿಕ, ನೈಸರ್ಗಿಕ ಹಾಗೂ ಹೆಚ್ಚು ಪ್ರವಾಸಿಗರು ಭೇಟಿ ನೀಡುವ ಪ್ರಮುಖ ಒಟ್ಟು 25…
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ವಸತಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಮುಖ್ಯಾಂಶಗಳು; • ಪ್ರಧಾನಮಂತ್ರಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಐತಿಹಾಸಿಕ ಹಿನ್ನೆಲೆಯುಳ್ಳ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಮಾರ್ಗದಲ್ಲಿ…