ನಾಯಕತ್ವ ರೂಢಿಸಿಕೊಳ್ಳಲು ಎನ್‌ಎಸ್‌ಎಸ್‌ ಪೂರಕ-ನಿವೃತ್ತ ಪ್ರಾಧ್ಯಾಪಕ ಚಂದ್ರಪ್ಪ

ದೊಡ್ಡಬಳ್ಳಾಪುರ: ಯುವಜನತೆ ಸಾಮಾಜಿಕ ಕಾಳಜಿಯನ್ನು ಬೆಳೆಸಿಕೊಳ್ಳುವ ಮೂಲಕ ನಾಯಕತ್ವ ಗುಣಗಳನ್ನು ವೃದ್ದಿಸಿಕೊಳ್ಳಬೇಕು ಎಂದು ನಿವೃತ್ತ ಪ್ರಾಧ್ಯಾಪಕ ಚಂದ್ರಪ್ಪ ಅಭಿಪ್ರಾಯಪಟ್ಟರು.

ನಗರದ ಶ್ರೀ ದೇವರಾಜ ಅರಸ್‌ ವ್ಯವಹಾರ ನಿರ್ವಹಣಾ ಮಹಾವಿದ್ಯಾಲಯದಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಘಟಕದಿಂದ ಮಂಗಳವಾರ ನಡೆದ ಎನ್‌ಎಸ್‌ಎಸ್‌ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಅವರು ಮಾತನಾಡಿದರು.

ಎನ್‌ಎಸ್‌ಎಸ್‌ ಇಂದು ಭಾರತದ ಬಹುತೇಕ ವಿಶ್ವವಿದ್ಯಾಲಯಗಳು ಮತ್ತು ಕಾಲೇಜುಗಳಲ್ಲಿ ಘಟಕಗಳನ್ನು ಹೊಂದಿದ್ದು, ಲಕ್ಷಾಂತರ ಯುವ ಸ್ವಯಂ ಸೇವಕರನ್ನು ಒಳಗೊಂಡಿದೆ. ಜಾಗತಿಕ ಮಟ್ಟದಲ್ಲಿ ಅತಿ ದೊಡ್ಡ ಯುವಜನ ಸಂಘಟನೆ ಎಂದು ಗುರುತಿಸಲ್ಪಟ್ಟಿದೆ ಎಂದ ಅವರು, ಕಾಲೇಜು ಹಂತದಲ್ಲಿ ವಿದ್ಯಾರ್ಥಿಗಳು ತಮ್ಮ ಪಠ್ಯ ಚಟುವಟಿಕೆಗಳ ಜೊತೆಗೆ ಎನ್‌ಎಸ್‌ಎಸ್‌ನಂತಹ ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಳ್ಳುವುದು ಅಗತ್ಯ ಎಂದರು.

ವ್ಯಕ್ತಿತ್ವ ನಿರ್ಮಾಣಕ್ಕೆ ಒತ್ತು ನೀಡಿ ವಿಭಿನ್ನ ಆಲೋಚನಾ ಕ್ರಮವನ್ನು ಬೆಳೆಸಿಕೊಳ್ಳುವುದು ಇಂದಿನ ಅಗತ್ಯತೆಯಾಗಿದ್ದು, ಸಡಿಲಗೊಳ್ಳುತ್ತಿರುವ ಮಾನವೀಯ ಸಂಬಂಧಗಳನ್ನು ಬೆಸೆಯುವ ಮಾರ್ಗವಾಗಿ ಎನ್‌ಎಸ್‌ಎಸ್‌ ಮಹತ್ವ ಪಡೆದಿದೆ ಎಂದು ತಿಳಿಸಿದರು.

ಉಪಪ್ರಾಂಶುಪಾಲ ಪ್ರೊ.ದಕ್ಷಿಣಾಮೂರ್ತಿ, ಐಕ್ಯೂಎಸಿ ಸಂಯೋಜಕ ಪ್ರೊ.ಕೆ.ಆರ್.ರವಿಕಿರಣ್‌, ಸಂಜೆ ಕಾಲೇಜು ಪ್ರಾಂಶುಪಾಲ ಡಾ.ಎಂ.ಚಿಕ್ಕಣ್ಣ, ನಿರ್ವಹಣಾ ವಿಭಾಗ ಮುಖ್ಯಸ್ಥೆ ಪಿ.ಚೈತ್ರ, ಎನ್‌ಎಸ್‌ಎಸ್‌ ಕಾರ್ಯಕ್ರಮಾಧಿಕಾರಿ ಕೆ.ಸಿ.ಲಕ್ಷ್ಮೀಶ, ಅಧ್ಯಾಪಕರಾದ ಬಾಬುಸಾಬಿ, ವೆಂಕಟೇಶ್‌, ಭಾನುಶ್ರೀ ಮತ್ತಿತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆ: ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

2026-27 ಸಾಲಿಗೆ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನ…

8 hours ago

ಕೊಡಿಪಾಳ್ಯ ಬಳಿ ಕ್ಯಾಂಟರ್ ಪಲ್ಟಿ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಕೊಡಿಪಾಳ್ಯ ಸಮೀಪ ಕ್ಯಾಂಟರ್‌ವೊಂದು ಪಲ್ಟಿಯಾಗಿ ಬಿದ್ದ ಘಟನೆ ನಡೆದಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.…

9 hours ago

ಮೊಬೈಲ್ ಕಳೆದುಹೋದರೆ ಗಾಬರಿ ಬೇಡ: ತಕ್ಷಣದ ಕ್ರಮವೇ ರಕ್ಷಣೆ: ಮೊಬೈಲ್‌ ಕಳೆದುಹೋದ 10 ನಿಮಿಷಗಳಲ್ಲಿ ಮಾಡಬೇಕಾದ 7 ಕೆಲಸಗಳು ಇಲ್ಲಿವೆ ನೋಡಿ…

ಬೆಂಗಳೂರು ಗ್ರಾಮಾಂತರ: ಮೊಬೈಲ್‌ ಫೋನ್‌ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್‌ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್‌ ಕೇವಲ ಸಂಪರ್ಕ…

12 hours ago

ಎಸ್ಐಆರ್ ಅಕ್ರಮ ಹಾಗೂ ಬರ ಪರಿಹಾರ ವಿಳಂಬ: ಕೇಂದ್ರ ಮತ್ತು ವಿಪಕ್ಷದ ವಿರುದ್ಧ ಸಚಿವ ಚಲುವರಾಯಸ್ವಾಮಿ ಆಕ್ರೋಶ

ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…

12 hours ago

ಬರ ಪರಿಹಾರಕ್ಕೆ 60 ಸಾವಿರ ಕೋಟಿ ನಷ್ಟದ ಅಂದಾಜು- ಡಿಸಿಎಂ ಡಾ.ಜಿ ಪರಮೇಶ್ವರ್

ರಾಜ್ಯದಲ್ಲಿ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟದ ಅಂದಾಜು 50 ರಿಂದ 60 ಸಾವಿರ ಕೋಟಿವರೆಗೆ ತಲುಪುವ ಸಾಧ್ಯತೆಯಿದ್ದು, ಕೇಂದ್ರ…

14 hours ago

“ಸರ್ಕಾರದ ಕೆಲಸ ದೇವರ ಕೆಲಸ ” ಎಂದು ಹೇಳುವವರು ದೇವರಿಗೂ ವಂಚಿಸುತ್ತಿದ್ದಾರೆ…

ರೆಕ್ಕೆ ಮುರಿದ ಹಕ್ಕಿಯೊಂದು, ಬಿಕ್ಕಿ ಬಿಕ್ಕಿ ಅಳುತಲಿದೆ........ ಕಾಲು ಮುರಿದ ನಾಯಿಯೊಂದು, ಕುಂಟಿ ಕುಂಟಿ ನಡೆಯುತಿದೆ..... ಆಡಳಿತ ವ್ಯವಸ್ಥೆಯ ಕಾರ್ಯವೈಖರಿಯನ್ನು…

19 hours ago