
ದೊಡ್ಡಬಳ್ಳಾಪುರ ತಾಲೂಕಿನ ನಾಯಕರಂಡನಹಳ್ಳಿ ಬಳಿ ಹಾದು ಹೋಗುವ ಹಿಂದೂಪುರ-ಯಲಹಂಕ ಹೆದ್ದಾರಿಯಲ್ಲಿ ಕೆಎಸ್ ಆರ್ ಟಿಸಿ ಬಸ್ ಹಾಗೂ ಕಲ್ಲಿದ್ದಲು ಲಾರಿ ನಡುವೆ ಭೀಕರ ಅಪಘಾತ ನಡೆದಿದೆ…

ಗೌರಿಬಿದನೂರು ಕಡೆಯಿಂದ ಕೆಎಸ್ ಆರ್ ಟಿಸಿ ಬಸ್ ಹಾಗೂ ಕಲ್ಲಿದ್ದಲು ತುಂಬಿದ್ದ ಲಾರಿ ಬರುತ್ತಿದ್ದವು. ಮುಂದೆ ಕಲ್ಲಿದ್ದಲು ತುಂಬಿದ್ದ ಲಾರಿ ಹೋಗುತ್ತಿತ್ತು. ಹಿಂಬದಿಯಿಂದ ಕೆಎಸ್ ಆರ್ ಟಿಸಿ ಬಸ್ ಓವರ್ ಟೇಕ್ ಮಾಡಲು ಹೋಗಿ ಲಾರಿಗೆ ಡಿಕ್ಕಿ ಹೊಡೆದಿದೆ..

ಘಟನೆಯಲ್ಲಿ ಕೆಎಸ್ ಆರ್ ಟಿಸಿ ಬಸ್ ನಲ್ಲಿದ್ದ ಹಲವಾರು ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿದ್ದು, ಹೆದ್ದಾರಿಯಲ್ಲಿ ಫುಲ್ ಟ್ರಾಫಿಕ್ ಜಾಮ್ ಉಂಟಾಗಿ ವಾಹನ ಸವಾರರು ಪರದಾಡುವಂತಾಗಿದೆ….

ಸತತ ಒಂದು ಗಂಟೆಯಿಂದ ಬಸ್ಸಿನಲ್ಲಿ ಸಿಲುಕಿದ ಗಾಯಾಳುಗಳನ್ನು ಹೊರತೆಗೆಯುವ ಪ್ರಯತ್ನ ನಡೆಯುತ್ತಿದೆ….
ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ…