ನಾಯಕರಂಡನಹಳ್ಳಿ ಬಳಿ ಭೀಕರ ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಸತತ ಒಂದು ಗಂಟೆಯಿಂದ ಬಸ್ಸಿನಲ್ಲಿ ಸಿಲುಕಿರುವ ಬಾಲಕನನ್ನು ಹೊರತೆಗೆಯಲು ಹರಸಾಹಸಪಡಲಾಗುತ್ತಿದೆ….
ದೊಡ್ಡಬಳ್ಳಾಪುರ ತಾಲೂಕಿನ ನಾಯಕರಂಡನಹಳ್ಳಿ ಬಳಿ ಹಾದು ಹೋಗುವ ಹಿಂದೂಪುರ-ಯಲಹಂಕ ಹೆದ್ದಾರಿಯಲ್ಲಿ ಕೆಎಸ್ ಆರ್ ಟಿಸಿ ಬಸ್ ಹಾಗೂ ಕಲ್ಲಿದ್ದಲು ಲಾರಿ ನಡುವೆ ಭೀಕರ ಅಪಘಾತ ನಡೆದಿದೆ…
ಡಿಕ್ಕಿ ರಭಸಕ್ಕೆ ಕೆಎಸ್ ಆರ್ ಟಿಸಿ ಬಸ್ಸಿನ ಮುಂಭಾಗ ಸಂಪೂರ್ಣ ಜಖಂಗೊಂಡಿದೆ. ಮುಂಭಾಗದಲ್ಲಿ ಕುಳಿತಿದ್ದ ಬಾಲಕ ಬಸ್ಸಿನಲ್ಲಿ ಸಿಲುಕಿಕೊಂಡಿದ್ದಾನೆ. ಬಾಲಕನನ್ನು ರಕ್ಷಣೆ ಮಾಡಲು ಸತತ ಒಂದೂವರೆ ಗಂಟೆಯಿಂದಲೂ ಪ್ರಯತ್ನ ಮಾಡಲಾಗುತ್ತಿದೆ.
ಸ್ಥಳಕ್ಕೆ ಅಗ್ನಿ ಶಾಮಕ ದಳ ಸಿಬ್ಬಂದಿ, ಪೊಲೀಸ್ ಸಿಬ್ಬಂದಿ, ಸಾರ್ವಜನಿಕರು ಬಾಲಕನನ್ನು ರಕ್ಷಣೆ ಮಾಡುವ ಕಾರ್ಯದಲ್ಲಿ ತೊಡಗಿದ್ದಾರೆ.
ಗೌರಿಬಿದನೂರು ಕಡೆಯಿಂದ ಕೆಎಸ್ ಆರ್ ಟಿಸಿ ಬಸ್ ಹಾಗೂ ಕಲ್ಲಿದ್ದಲು ತುಂಬಿದ್ದ ಲಾರಿ ಬರುತ್ತಿದ್ದವು. ಮುಂದೆ ಕಲ್ಲಿದ್ದಲು ತುಂಬಿದ್ದ ಲಾರಿ ಹೋಗುತ್ತಿತ್ತು. ಹಿಂಬದಿಯಿಂದ ಕೆಎಸ್ ಆರ್ ಟಿಸಿ ಬಸ್ ಓವರ್ ಟೇಕ್ ಮಾಡಲು ಹೋಗಿ ಲಾರಿಗೆ ಡಿಕ್ಕಿ ಹೊಡೆದಿದೆ..
ಘಟನೆಯಲ್ಲಿ ಕೆಎಸ್ ಆರ್ ಟಿಸಿ ಬಸ್ ನಲ್ಲಿದ್ದ ಹಲವಾರು ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿದ್ದು, ಹೆದ್ದಾರಿಯಲ್ಲಿ ಫುಲ್ ಟ್ರಾಫಿಕ್ ಜಾಮ್ ಉಂಟಾಗಿ ವಾಹನ ಸವಾರರು ಪರದಾಡುವಂತಾಗಿದೆ….
2020ರಲ್ಲಿ ತಮಿಳುನಾಡಿನಲ್ಲಿ ನಡೆದ ಸಾತಂಕುಲಂ ಕಸ್ಟಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮದ್ರಾಸ್ ಹೈಕೋರ್ಟ್ ಪೀಠವು 9 ಪೊಲೀಸ್ ಸಿಬ್ಬಂದಿಗೆ…
ರಾಜ್ಯದಲ್ಲಿ ಇಂಧನ ತೈಲ ಮತ್ತು ಅನಿಲ ಪೂರೈಕೆಯ ಸಮಸ್ಯೆ ಗಂಭೀರ ಸ್ವರೂಪ ಪಡೆದಿರುವ ಹಿನ್ನೆಲೆಯಲ್ಲಿ, ಆಹಾರ, ನಾಗರಿಕ ಸರಬರಾಜು ಮತ್ತು…
ಆಟೋ ಎಲ್‌ಪಿಜಿಗಾಗಿ ಡಿಕ್ರಾಸ್ ರಸ್ತೆಯ ಸೂಪರ್ ಗ್ಯಾಸ್ ಬಂಕ್ ಬಳಿ ನೂರಾರು ಆಟೋಗಳು ಸಾಲುಗಟ್ಟಿ ನಿಂತಿವೆ. ಆಟೋ ಎಲ್ಪಿಜಿ ಇಲ್ಲದೆ…
2026-27 ನೇ ಸಾಲಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿ(ಆಂಗ್ಲ ಮಾಧ್ಯಮ)ಗೆ ಸೇರಲು ಪರಿಶಿಷ್ಟ ಪಂಗಡದ ಪ್ರತಿಭಾವಂತ…
ಛಲವಾದಿ ಮಹಾಸಭಾ ದೊಡ್ಡಬಳ್ಳಾಪುರ ತಾಲೂಕು ಅಧ್ಯಕ್ಷರಾಗಿ ಎಸ್ ಯು ರಮೇಶ್ ಅವಿರೋಧವಾಗಿ ಆಯ್ಕೆ ಆಗಿದ್ದಾರೆ. ಜಿಲ್ಲಾಧ್ಯಕ್ಷ ನರೇಶ್ ನೇತೃತ್ವದಲ್ಲಿ ನಗರದ…
ಬೆಳಗಾವಿಯ ಸಂಕೇಶ್ವರ ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ ನಡೆದಿದೆ. ಅಂತಾರಾಜ್ಯ ಇಬ್ಬರು ಬೈಕ್ ಕಳ್ಳರನ್ನು ಬಂಧಿಸಲಾಗಿದೆ. ಬಂಧಿತರಿಂದ 18.30 ಲಕ್ಷ ಮೌಲ್ಯದ…