ನಾಯಿ, ಹಾವು/ ಇತರೆ ಪ್ರಾಣಿಗಳ ದಾಳಿ ಪ್ರಕರಣಗಳಲ್ಲಿ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳು

ನಮ್ಮ‌ ದೇಶದ ಸರ್ವೋಚ್ಚ ನ್ಯಾಯಾಲಯವು, ನಾಯಿ ಕಡಿತಕ್ಕೆ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳಿಗೆ ಸಂಬಂಧಿಸಿದಂತೆ ಈ ನಿರ್ದೇಶನಗಳನ್ನು ನೀಡಿದೆ.

* ಎಲ್ಲ ಖಾಸಗಿ ಆಸ್ಪತ್ರೆಗಳಲ್ಲಿ ನಾಯಿ, ಹಾವು/ ಇತರೆ ಪ್ರಾಣಿಗಳ ದಾಳಿ ಪ್ರಕರಣಗಳಲ್ಲಿ ಮುಂಗಡ ಹಣಕ್ಕೆ ಒತ್ತಾಯಿಸದೆ ಚಿಕಿತ್ಸೆ ನೀಡಬೇಕು.

* 2030ರ ವೇಳೆಗೆ ನಾಯಿ ಕಡಿತದ ಸಾವುಗಳನ್ನು ಶೂನ್ಯಕ್ಕೆ ತರುವ (Dog-Mediated Rabies by 2030) ಮತ್ತು ಸಾವುಗಳಾಗದಂತೆ ತಡೆಯಲು ಔಷಧಿ ಕಂಡುಕೊಳ್ಳುವ ಉದ್ದೇಶ ಹೊಂದಲಾಗಿದೆ. ಹಾಗಾಗಿ, ಸುಪ್ರೀಂ ಕೋರ್ಟ್ ನಿರ್ದೇಶನದಂತೆ,

* ಎಲ್ಲಾ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳು ಎಲ್ಲಾ ಸಮಯದಲ್ಲೂ ಕಡ್ಡಾಯವಾಗಿ ಆ್ಯಂಟಿ-ರೇಬೀಸ್ ಲಸಿಕೆಗಳು ಮತ್ತು ಇಮ್ಯುನೊಗ್ಲೋಬ್ಯುಲಿನ್‌ನ ದಾಸ್ತಾನು (Stock) ಇರಿಸಿಕೊಳ್ಳಬೇಕು.

* ರೇಬೀಸ್ಅ‌‌ನ್ನು ರಾಜ್ಯದಲ್ಲಿ ಅಧಿಸೂಚಿಸಲಾದ ರೋಗವೆಂದು ಘೋಷಿಸಿದ್ದು, ನಾಯಿ ಅಥವಾ ಇತರ ಯಾವುದೇ ಪ್ರಾಣಿ ಕಡಿತದ ಪ್ರಕರಣಗಳು ಆದಾಗ ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಬೇಕು. ನಿಯಮದಂತೆ, ಎಲ್ಲಾ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಈಗಾಗಲೇ ಉಲ್ಲೇಖಿಸಿದಂತೆ, ಈಕ್ವೈನ್ ರೇಬೀಸ್ ಇಮ್ಯುನೊಗ್ಲೋಬ್ಯುಲಿನ್‌ ಮತ್ತು ಆ್ಯಂಟಿ-ರೇಬೀಸ್ ಲಸಿಕೆಯನ್ನು ಹಾಗೂ ಅಗತ್ಯ ಚಿಕಿತ್ಸೆಯನ್ನು ಉಚಿತ ನೀಡತಕ್ಕದ್ದು.

* ಈ ರೀತಿಯ ಪ್ರಕರಣಗಳು ಬಂದಾಗ ಸರ್ಕಾರಿ/ಖಾಸಗಿ ಆಸ್ಪತ್ರೆಗಳು ತಕ್ಷಣದ ವೈದ್ಯಕೀಯ ಸ್ಕ್ರೀನಿಂಗ್ ಸೇವೆಗಳು ಮತ್ತು ಪ್ರಥಮ ಚಿಕಿತ್ಸೆಯನ್ನು ಉಚಿತವಾಗಿ ಹಾಗೂ ಸಮಯಪ್ರಜ್ಞೆಯಿಂದ ನಿರ್ವಹಿಸಬೇಕು. ಒಂದುವೇಳೆ, ಆಸ್ಪತ್ರೆಯಲ್ಲಿ ಸೌಲಭ್ಯಗಳ ಕೊರತೆ ಇದ್ದಲ್ಲಿ ರೋಗಿಗೆ ಪ್ರಾಣಾಪಾಯವಾಗದಂತೆ  ಪ್ರಥಮ ಚಿಕಿತ್ಸೆ ನೀಡಿ ಹೆಚ್ಚುವರಿ ಚಿಕಿತ್ಸಾ ಸೌಲಭ್ಯವಿರುವ ಆಸ್ಪತ್ರೆಗೆ ರವಾನಿಸಬೇಕು.

* ನಾಯಿ/ಹಾವು ಕಡಿತದ ಸಂತ್ರಸ್ತರಿಗೆ ನೀಡಿದ ಚಿಕಿತ್ಸೆಗಾಗಿ ಆಸ್ಪತ್ರೆ ಶುಲ್ಕವನ್ನು ಸರ್ಕಾರ ಮರುಪಾವತಿ ಮಾಡುತ್ತದೆ. ಆದರೆ, ಆಸ್ಪತ್ರೆಗಳು SAST ಯೋಜನೆಯಡಿಯಲ್ಲಿ ನಿಗದಿಪಡಿಸಿರುವ ಮೊತ್ತ ಪಡೆದು ಚಿಕಿತ್ಸೆ ನೀಡಲು ನಿರಾಕರಿಸಿದರೆ ಅಂತಹ ಆಸ್ಪತ್ರೆಗಳ ವಿರುದ್ಧ ದೂರು ದಾಖಲಿಸಲಾಗುವುದು.

* ನಾಯಿ,ಹಾವು ಇತರೆ ಪ್ರಾಣಿಗಳ ಕಡಿತ ಪ್ರಕರಣಗಳಲ್ಲಿ ವೈದ್ಯಕೀಯ ನಿರ್ಲಕ್ಷ್ಯದಿಂದ ಸಾವುಗಳಾದರೆ, ಸಂಬಂಧಿತ ವೈದ್ಯಾಧಿಕಾರಿ/ಸಂಸ್ಥೆಯ ಮುಖ್ಯಸ್ಥರಿಗೆ ಎರಡು ವರ್ಷಗಳವರೆಗೆ ಜೈಲು ಶಿಕ್ಷೆ ವಿಧಿಸಲಾಗುತ್ತದೆ. ಅಥವಾ ಆಸ್ಪತ್ರೆಗಳ ಪರವಾನಗಿಯನ್ನು ರದ್ದುಗೊಳಿಸಲಾಗುತ್ತದೆ.

Ramesh Babu

Journalist

Recent Posts

ತಂದೆ-ಮಗನ ಲಾಕಪ್ ಡೆತ್ ಕೇಸ್; ತಮಿಳುನಾಡಿನ 9 ಪೊಲೀಸರಿಗೆ ಗಲ್ಲು ಶಿಕ್ಷೆ

2020ರಲ್ಲಿ ತಮಿಳುನಾಡಿನಲ್ಲಿ ನಡೆದ ಸಾತಂಕುಲಂ ಕಸ್ಟಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮದ್ರಾಸ್ ಹೈಕೋರ್ಟ್‌ ಪೀಠವು 9 ಪೊಲೀಸ್ ಸಿಬ್ಬಂದಿಗೆ…

3 hours ago

ಇಂಧನ ತೈಲ ಮತ್ತು ಅನಿಲ ಪೂರೈಕೆ ಸಮಸ್ಯೆ – ರಾಜ್ಯದ ಜನತೆಗೆ ತೀವ್ರ ಸಂಕಷ್ಟ- ಸಚಿವ ಕೆ.ಎಚ್ ಮುನಿಯಪ್ಪ ಪ್ರತಿಕ್ರಿಯೆ

ರಾಜ್ಯದಲ್ಲಿ ಇಂಧನ ತೈಲ ಮತ್ತು ಅನಿಲ ಪೂರೈಕೆಯ ಸಮಸ್ಯೆ ಗಂಭೀರ ಸ್ವರೂಪ ಪಡೆದಿರುವ ಹಿನ್ನೆಲೆಯಲ್ಲಿ, ಆಹಾರ, ನಾಗರಿಕ ಸರಬರಾಜು ಮತ್ತು…

3 hours ago

ಆಟೋ ಎಲ್‌ಪಿಜಿಗಾಗಿ ಸಾಲುಗಟ್ಟಿ ನಿಂತ ನೂರಾರು ಆಟೋಗಳು

ಆಟೋ ಎಲ್‌ಪಿಜಿಗಾಗಿ ಡಿಕ್ರಾಸ್ ರಸ್ತೆಯ ಸೂಪರ್ ಗ್ಯಾಸ್ ಬಂಕ್ ಬಳಿ ನೂರಾರು ಆಟೋಗಳು ಸಾಲುಗಟ್ಟಿ ನಿಂತಿವೆ. ಆಟೋ ಎಲ್ಪಿಜಿ ಇಲ್ಲದೆ…

6 hours ago

ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿ ಪ್ರವೇಶಾತಿಗೆ ಅರ್ಜಿ ಆಹ್ವಾನ

2026-27 ನೇ ಸಾಲಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿ(ಆಂಗ್ಲ ಮಾಧ್ಯಮ)ಗೆ ಸೇರಲು ಪರಿಶಿಷ್ಟ ಪಂಗಡದ ಪ್ರತಿಭಾವಂತ…

8 hours ago

ಛಲವಾದಿ‌‌ ಮಹಾಸಭಾ ದೊಡ್ಡಬಳ್ಳಾಪುರ ತಾಲೂಕು ಅಧ್ಯಕ್ಷರಾಗಿ ಎಸ್ ಯು ರಮೇಶ್ ಅವಿರೋಧ ಆಯ್ಕೆ

ಛಲವಾದಿ‌‌ ಮಹಾಸಭಾ ದೊಡ್ಡಬಳ್ಳಾಪುರ ತಾಲೂಕು ಅಧ್ಯಕ್ಷರಾಗಿ ಎಸ್ ಯು ರಮೇಶ್ ಅವಿರೋಧವಾಗಿ ಆಯ್ಕೆ ಆಗಿದ್ದಾರೆ. ಜಿಲ್ಲಾಧ್ಯಕ್ಷ ನರೇಶ್ ನೇತೃತ್ವದಲ್ಲಿ ನಗರದ…

9 hours ago

ಖತರ್ನಾಕ್ ಬೈಕ್ ಕಳ್ಳರ ಬಂಧನ: ಬಂಧಿತರಿಂದ 18.30 ಲಕ್ಷ ಮೌಲ್ಯದ 27 ಬೈಕ್ ಗಳು ವಶ

ಬೆಳಗಾವಿಯ ಸಂಕೇಶ್ವರ ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ ನಡೆದಿದೆ. ಅಂತಾರಾಜ್ಯ ಇಬ್ಬರು ಬೈಕ್ ಕಳ್ಳರನ್ನು ಬಂಧಿಸಲಾಗಿದೆ. ಬಂಧಿತರಿಂದ 18.30 ಲಕ್ಷ ಮೌಲ್ಯದ…

10 hours ago