ನಮ್ಮ ದೇಶದ ಸರ್ವೋಚ್ಚ ನ್ಯಾಯಾಲಯವು, ನಾಯಿ ಕಡಿತಕ್ಕೆ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳಿಗೆ ಸಂಬಂಧಿಸಿದಂತೆ ಈ ನಿರ್ದೇಶನಗಳನ್ನು ನೀಡಿದೆ.
* ಎಲ್ಲ ಖಾಸಗಿ ಆಸ್ಪತ್ರೆಗಳಲ್ಲಿ ನಾಯಿ, ಹಾವು/ ಇತರೆ ಪ್ರಾಣಿಗಳ ದಾಳಿ ಪ್ರಕರಣಗಳಲ್ಲಿ ಮುಂಗಡ ಹಣಕ್ಕೆ ಒತ್ತಾಯಿಸದೆ ಚಿಕಿತ್ಸೆ ನೀಡಬೇಕು.
* 2030ರ ವೇಳೆಗೆ ನಾಯಿ ಕಡಿತದ ಸಾವುಗಳನ್ನು ಶೂನ್ಯಕ್ಕೆ ತರುವ (Dog-Mediated Rabies by 2030) ಮತ್ತು ಸಾವುಗಳಾಗದಂತೆ ತಡೆಯಲು ಔಷಧಿ ಕಂಡುಕೊಳ್ಳುವ ಉದ್ದೇಶ ಹೊಂದಲಾಗಿದೆ. ಹಾಗಾಗಿ, ಸುಪ್ರೀಂ ಕೋರ್ಟ್ ನಿರ್ದೇಶನದಂತೆ,
* ಎಲ್ಲಾ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳು ಎಲ್ಲಾ ಸಮಯದಲ್ಲೂ ಕಡ್ಡಾಯವಾಗಿ ಆ್ಯಂಟಿ-ರೇಬೀಸ್ ಲಸಿಕೆಗಳು ಮತ್ತು ಇಮ್ಯುನೊಗ್ಲೋಬ್ಯುಲಿನ್‌ನ ದಾಸ್ತಾನು (Stock) ಇರಿಸಿಕೊಳ್ಳಬೇಕು.
* ರೇಬೀಸ್ಅನ್ನು ರಾಜ್ಯದಲ್ಲಿ ಅಧಿಸೂಚಿಸಲಾದ ರೋಗವೆಂದು ಘೋಷಿಸಿದ್ದು, ನಾಯಿ ಅಥವಾ ಇತರ ಯಾವುದೇ ಪ್ರಾಣಿ ಕಡಿತದ ಪ್ರಕರಣಗಳು ಆದಾಗ ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಬೇಕು. ನಿಯಮದಂತೆ, ಎಲ್ಲಾ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಈಗಾಗಲೇ ಉಲ್ಲೇಖಿಸಿದಂತೆ, ಈಕ್ವೈನ್ ರೇಬೀಸ್ ಇಮ್ಯುನೊಗ್ಲೋಬ್ಯುಲಿನ್ ಮತ್ತು ಆ್ಯಂಟಿ-ರೇಬೀಸ್ ಲಸಿಕೆಯನ್ನು ಹಾಗೂ ಅಗತ್ಯ ಚಿಕಿತ್ಸೆಯನ್ನು ಉಚಿತ ನೀಡತಕ್ಕದ್ದು.
* ಈ ರೀತಿಯ ಪ್ರಕರಣಗಳು ಬಂದಾಗ ಸರ್ಕಾರಿ/ಖಾಸಗಿ ಆಸ್ಪತ್ರೆಗಳು ತಕ್ಷಣದ ವೈದ್ಯಕೀಯ ಸ್ಕ್ರೀನಿಂಗ್ ಸೇವೆಗಳು ಮತ್ತು ಪ್ರಥಮ ಚಿಕಿತ್ಸೆಯನ್ನು ಉಚಿತವಾಗಿ ಹಾಗೂ ಸಮಯಪ್ರಜ್ಞೆಯಿಂದ ನಿರ್ವಹಿಸಬೇಕು. ಒಂದುವೇಳೆ, ಆಸ್ಪತ್ರೆಯಲ್ಲಿ ಸೌಲಭ್ಯಗಳ ಕೊರತೆ ಇದ್ದಲ್ಲಿ ರೋಗಿಗೆ ಪ್ರಾಣಾಪಾಯವಾಗದಂತೆ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚುವರಿ ಚಿಕಿತ್ಸಾ ಸೌಲಭ್ಯವಿರುವ ಆಸ್ಪತ್ರೆಗೆ ರವಾನಿಸಬೇಕು.
* ನಾಯಿ/ಹಾವು ಕಡಿತದ ಸಂತ್ರಸ್ತರಿಗೆ ನೀಡಿದ ಚಿಕಿತ್ಸೆಗಾಗಿ ಆಸ್ಪತ್ರೆ ಶುಲ್ಕವನ್ನು ಸರ್ಕಾರ ಮರುಪಾವತಿ ಮಾಡುತ್ತದೆ. ಆದರೆ, ಆಸ್ಪತ್ರೆಗಳು SAST ಯೋಜನೆಯಡಿಯಲ್ಲಿ ನಿಗದಿಪಡಿಸಿರುವ ಮೊತ್ತ ಪಡೆದು ಚಿಕಿತ್ಸೆ ನೀಡಲು ನಿರಾಕರಿಸಿದರೆ ಅಂತಹ ಆಸ್ಪತ್ರೆಗಳ ವಿರುದ್ಧ ದೂರು ದಾಖಲಿಸಲಾಗುವುದು.
* ನಾಯಿ,ಹಾವು ಇತರೆ ಪ್ರಾಣಿಗಳ ಕಡಿತ ಪ್ರಕರಣಗಳಲ್ಲಿ ವೈದ್ಯಕೀಯ ನಿರ್ಲಕ್ಷ್ಯದಿಂದ ಸಾವುಗಳಾದರೆ, ಸಂಬಂಧಿತ ವೈದ್ಯಾಧಿಕಾರಿ/ಸಂಸ್ಥೆಯ ಮುಖ್ಯಸ್ಥರಿಗೆ ಎರಡು ವರ್ಷಗಳವರೆಗೆ ಜೈಲು ಶಿಕ್ಷೆ ವಿಧಿಸಲಾಗುತ್ತದೆ. ಅಥವಾ ಆಸ್ಪತ್ರೆಗಳ ಪರವಾನಗಿಯನ್ನು ರದ್ದುಗೊಳಿಸಲಾಗುತ್ತದೆ.
ದೊಡ್ಡಬಳ್ಳಾಪುರ: ಕೊಳೆತ ಸ್ಥಿತಿಯಲ್ಲಿ ತಲೆ ಇಲ್ಲದ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿರುವ ಘಟನೆ ನೆಲಮಂಗಲ–ಮಧುರೆ ಮುಖ್ಯರಸ್ತೆಯ ಕನ್ನಮಂಗಲ ಗೇಟ್ ಸಮೀಪ…
ಮತ್ತೆ ಮತ್ತೆ ಕಾಲದ ಅಗ್ನಿಪರೀಕ್ಷೆಯಲ್ಲಿ ನಮ್ಮ ಸಂಸ್ಕೃತಿ, ಸಂಪ್ರದಾಯ ಆಚರಣೆಗಳನ್ನು ಪುನರ್ ವಿಮರ್ಶೆಗೊಳಪಡಿಸಿ, ಅನುಭವದ ಆಧಾರದ ಮೇಲೆ ಸಾರ್ವತ್ರಿಕ ಸತ್ಯಗಳನ್ನು…
ರೈತರಿಗೆ ರಾಜ್ಯ ಸರ್ಕಾರ ನೀಡುತ್ತಿರುವ ಬರ ಪರಿಹಾರದ ಕುರಿತು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಮಾಡಿದ್ದ ಟೀಕೆಗೆ ಸಚಿವ…
ನಾಗಮಂಗಲ: ಕಾರ್ಮಿಕರಿಗಾಗಿಯೇ ಪ್ರತಿ ತಾಲೂಕಿನಲ್ಲಿ 10 ಕೋಟಿ ರೂ. ವೆಚ್ಚದಲ್ಲಿ ಶಾಲೆ ತೆರೆಯಲು ಸರ್ಕಾರ ಮುಂದಾಗಿದೆ ಎಂದು ಜಿಲ್ಲಾ ಉಸ್ತುವಾರಿ…
ನಾಗಮಂಗಲ: ಕಳೆದ ವಿಧಾನಸಭಾ ಚುನಾವಣೆಗೂ ಮುನ್ನ ತಾಲೂಕಿನಲ್ಲಿ ನಿಯಮಗಳನ್ನು ಗಾಳಿಗೆ ತೂರಿ ಬರೋಬ್ಬರಿ 691 ಪ್ರಕರಣಗಳಲ್ಲಿ ಕಾನೂನುಬಾಹಿರವಾಗಿ ಸಾಗುವಳಿ ಚೀಟಿ…
ದೊಡ್ಡಬಳ್ಳಾಪುರ: ಯುವಕರು ಮೊದಲು ತಂದೆ-ತಾಯಿಯನ್ನು ಗೌರವಿಸುವುದನ್ನು ಕಲಿಯಬೇಕು. ನಂತರ ಪಾಠ-ಪ್ರವಚನಗಳನ್ನು ಕಲಿಯಬೇಕು ಎಂದು ಹೈಕೋರ್ಟ್ ವಕೀಲರಾದ ಸುರೇಶ್ ಗೌಡ ಬಿ.ವಿದ್ಯಾರ್ಥಿಗಳಿಗೆ…