Categories: ಕೋಲಾರ

ನಾರಾಯಣಗುರು ರಸ್ತೆ ನಾಮಕರಣಕ್ಕೆ ಮನವಿ

ಕೋಲಾರ: ಬ್ರಹ್ಮಶ್ರೀ ನಾರಾಯಣಗುರು ಹೆಸರನ್ನು ಜೀವಂತವಾಗಿಡುವ ಸಲುವಾಗಿ ಜಿಲ್ಲಾಡಳಿತ ವತಿಯಿಂದ ನಗರದಲ್ಲಿನ ಯಾವುದಾದರೂ ರಸ್ತೆಗೆ ಅಥವಾ ಪಾರ್ಕ್ ಗೆ ನಾರಾಯಣಗುರು ಹೆಸರನ್ನು ನಾಮಕರಣ ಮಾಡುವಂತೆ ಈಡಿಗ ಸಮುದಾಯದ ಮುಖಂಡರು ಶಾಸಕ ಕೊತ್ತೂರು ಮಂಜುನಾಥ್ ಮತ್ತು ಎಂಎಲ್ಸಿ ಎಂ.ಎಲ್ ಅನಿಲ್ ಕುಮಾರ್ ಅವರಿಗೆ ಮನವಿ ಮಾಡಿದರು,

ನಗರದ ಸುವರ್ಣ ಕನ್ನಡ ಭವನದಲ್ಲಿ ಮಂಗಳವಾರ ಬ್ರಹ್ಮಶ್ರೀ ನಾರಾಯಣಗುರು ಜಯಂತಿಯಲ್ಲಿ ಗುರುಗಳ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಚಾಲನೆ ನೀಡಿದ ಸಂದರ್ಶನದಲ್ಲಿ ಸಮುದಾಯದ ಮುಖಂಡರು ಮನವಿ ಮಾಡಿದರು ಇದಕ್ಕೆ ಶಾಸಕ ಮಾತನಾಡಿ ಸಮಾಜದಲ್ಲಿನ ಶೋಷಣೆಯ ಮುಕ್ತ ಬದುಕಿನ ಬದಲಾವಣೆಯಲ್ಲಿ ನಾರಾಯಣಗುರುಗಳ ಪಾತ್ರವು ಬಹುಮುಖ್ಯವಾಗಿದೆ ಅವರ ದಾರಿಯಲ್ಲಿ ಯುವ ಜನತೆ ನಡೆಯುವ ಅವಶ್ಯಕತೆ ಇದ್ದು ನಿಮ್ಮ ಮನವಿಯನ್ನು ಕೂಡಲೇ ಸಂಬಂಧಿಸಿದ ಅಧಿಕಾರಿಗಳಿಗೆ ತಿಳಿಸುತ್ತೇನೆ ಜೊತೆಗೆ ಅವರ ಹೆಸರು ನಾಮಕರಣ ಮಾಡಲು ಕ್ರಮ ವಹಿಸುತ್ತೇನೆ ಎಂದು ಶಾಸಕ ಕೊತ್ತೂರು ಮಂಜುನಾಥ್ ತಿಳಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ವೈ ಶಿವಕುಮಾರ್, ಬಂಗಾರಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸೀಸಂದ್ರ ಗೋಪಾಲಗೌಡ, ತೋರದೇವಂಡಹಳ್ಳಿ ಗ್ರಾಪಂ ಮಾಜಿ ಅಧ್ಯಕ್ಷ ನುಕ್ಕನಹಳ್ಳಿ ಶ್ರೀನಿವಾಸ್, ಖಾದ್ರಿಪುರ ಬಾಬು ರಂಗವಿಜಯದ ಮಾಲೂರು ವಿಜಿ, ಈಡಿಗ ಸಮುದಾಯದ ಜಿಲ್ಲಾ ಅಧ್ಯಕ್ಷ ಮಾಸ್ತಿ ರಮೇಶ್, ಕಾರ್ಯದರ್ಶಿ ಮುನಿರಾಜು,ಮುಖಂಡ ನಾರಾಯಣಪ್ಪ ಮುಂತಾದವರು ಇದ್ದರು

Ramesh Babu

Journalist

Recent Posts

ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಕ್ಷೇತ್ರಗಳ ಮೀಸಲಾತಿ ವಿವರ

ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಕ್ಷೇತ್ರಗಳ ಮೀಸಲಾತಿ ವಿವರ

4 hours ago

ಸರ್ಕಾರಿ ಗೋಮಾಳ ಒತ್ತುವರಿ ಮಾಡಿದವರು ಎಷ್ಟೇ ಪ್ರಭಾವಿಗಳಾಗಿದ್ದರೂ ಕಾನೂನು ಪ್ರಕಾರ ಕ್ರಮ: ನಕಲಿ ಭೂದಾಖಲೆ ಸೃಷ್ಟಿ ಹಾಗೂ ಅಕ್ರಮ ಖಾತೆ ಬದಲಾವಣೆ ಕಂಡುಬಂದರೆ ಕಠಿಣ ಕ್ರಮ- ಕಂದಾಯ ಸಚಿವ ಡಾ.ಜಿ ಪರಮೇಶ್ವರ್

ಸಾರ್ವಜನಿಕರ ಕೆಲಸಗಳು ತಾಲೂಕು ಕಚೇರಿಗಳಲ್ಲಿ ಯಾವುದೇ ವಿಳಂಬವಿಲ್ಲದೆ ನಡೆಯಬೇಕು. ಕಂದಾಯ ದಾಖಲೆಗಳ ನಿರ್ವಹಣೆ, ಭೂಮಿಗೆ ಸಂಬಂಧಿಸಿದ ಅರ್ಜಿಗಳ ವಿಲೇವಾರಿ ಹಾಗೂ…

6 hours ago

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಪಾರ ಮೌಲ್ಯದ ಹೈಡ್ರೋಪೋನಿಕ್ ಗಾಂಜಾ ವಶ

ಅ.07-10-2026: ಬ್ಯಾಂಕಾಕ್‌ನಿಂದ ಬೆಂಗಳೂರಿಗೆ ಆಗಮಿಸಿದ ಪ್ರಯಾಣಿಕರೊಬ್ಬರನ್ನು ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳು ತಪಾಸಣೆ ನಡೆಸಿ, ಚೆಕ್‌-ಇನ್ ಬ್ಯಾಗೇಜ್‌ನಲ್ಲಿ ಅಡಗಿಸಿಟ್ಟಿದ್ದ 942 ಗ್ರಾಂ…

9 hours ago

ದೇವನಹಳ್ಳಿ ತಹಶೀಲ್ದಾರ್ ಕಚೇರಿಗೆ ಸಚಿವ ಜಿ. ಪರಮೇಶ್ವರ್ ದಿಢೀರ್ ಭೇಟಿ

ದೇವನಹಳ್ಳಿ: ಸಾರ್ವಜನಿಕರಿಂದ ಬಂದ ದೂರುಗಳ ಹಿನ್ನೆಲೆಯಲ್ಲಿ ಕಂದಾಯ ಸಚಿವ ಡಾ. ಜಿ. ಪರಮೇಶ್ವರ್ ಅವರು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ…

10 hours ago

ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಬಳಿ ರೈಲಿಗೆ ಸಿಲುಕಿ ಅಪರಿಚಿತ ವ್ಯಕ್ತಿ ಸಾವು

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ರೈಲು ನಿಲ್ದಾಣದ ರೈಲ್ವೆ ಯಾರ್ಡ್‌ನಲ್ಲಿ ರೈಲಿಗೆ ಸಿಲುಕಿ ಸುಮಾರು 30 ವರ್ಷದ ಅಪರಿಚಿತ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ…

17 hours ago

ದಸರಾ….

ಮೈಸೂರು ದಸರಾ, ಮಹಿಷಾ ದಸರಾ, ಚಾಮುಂಡಿ ದಸರಾ..... ವಿಜಯ ದಶಮಿ - ಆಯುಧ ಪೂಜೆ..... ದುಷ್ಟ ಶಕ್ತಿಗಳ ವಿರುದ್ಧ ವಿಜಯದ…

17 hours ago