Categories: ಕೋಲಾರ

‘ನಾಲ್ಕು ತಿಂಗಳಲ್ಲಿ ಮೋದಿ ಸರಕಾರ ಪತನ: ರಾಹುಲ್ ಗಾಂಧಿಗೆ ಒಳ್ಳೆಯ ದಿನಗಳು ಬರಲಿದೆ’ – ಇಂಧನ ಸಚಿವ ಕೆ.ಜೆ ಜಾರ್ಜ್

ಕೋಲಾರ: ಬಿಜೆಪಿ ಪಕ್ಷವು ನೂರು ಸುಳ್ಳುಗಳನ್ನು ಹೇಳಿ ಒಂದು ಸತ್ಯ ಮಾಡಲು ಹೊರಟಿದ್ದಾರೆ ಈಗಾಗಲೇ ಮೋದಿಯವರ ವರ್ಚಸ್ಸು ಮುಗಿದಿದೆ ಇನ್ನೂ ನಾಲ್ಕು ತಿಂಗಳಲ್ಲಿ ಕೇಂದ್ರ ಸರಕಾರವು ಪತನವಾಗಿ ಮೋದಿಯವರು ಅಧಿಕಾರ ಕಳೆದುಕೊಳ್ಳಲಿದ್ದು ದೇಶದಲ್ಲಿ ಮುಂದಿನ 15 ವರ್ಷ ರಾಹುಲ್ ಗಾಂಧಿಗೆ ಒಳ್ಳಯ ಕಾಲ ಬರಲಿದೆ ಎಂದು ಇಂಧನ ಸಚಿವ ಕೆ.ಜೆ ಜಾರ್ಜ್ ತಿಳಿಸಿದರು.

ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಶುಕ್ರವಾರ ಭೇಟಿ ನೀಡಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಅವರು ಕಳೆದ ಲೋಕಸಭಾ ಚುನಾವಣೆಯಲ್ಲಿ ದೇಶದ ಜನತೆ ಬಿಜೆಪಿಗೆ ಬುದ್ದಿಕಲಿಸಿದ್ದಾರೆ ಜನರು ಕಾಂಗ್ರೆಸ್ ಪಕ್ಷದ ಪರವಾಗಿದ್ದಾರೆ ಎಂಬುದನ್ನು ತೋರಿಸಿದ್ದಾರೆ ಒಳ್ಳೆಯ ಕಾರ್ಯಕ್ರಮಗಳನ್ನು ಕೊಟ್ಟಿದ್ದೇವೆ ಬಿಜೆಪಿಯಂತೆ ಕೋಮುಭಾವನೆ ಹಾಗೂ ಜಾತಿ ಧರ್ಮಗಳ ಗಲಾಟೆಯ ಮೂಲಕ ರಾಜಕಾರಣ ಮಾಡಲ್ಲ ಜಾಸ್ತಿ ದಿನವು ಅಂತಹ ರಾಜಕಾರಣ ಉಳಿಯಲ್ಲ ಜನರ ಆಶೀರ್ವಾದವು ಕಾಂಗ್ರೆಸ್ ಪಕ್ಷಕ್ಕೆ ಇದ್ದು ಕಾರ್ಯಕರ್ತರಿಗೂ ಒಳ್ಳೆಯ ಅವಕಾಶ ಸಿಗಲಿದೆ ಎಂದು ಹೇಳಿದರು.

ಕಾಂಗ್ರೆಸ್ ಪಕ್ಷವು ಸ್ವಾತಂತ್ರ್ಯ ಪೂರ್ವದಿಂದಲೂ ಜಾತಿ ಧರ್ಮ, ಭಾಷೆಯ ಭೇಧವಿಲ್ಲದ ಪಕ್ಷವಾಗಿದೆ ಎಲ್ಲಾ ವರ್ಗಗಳ ವಿಶ್ವಾಸದಿಂದ ಬಡವರ ಹಿಂದುಳಿದ ವರ್ಗಗಳ ಅಭಿವೃದ್ಧಿಗೆ ವಿಶೇಷ ಯೋಜನೆಗಳನ್ನು ರೂಪಿಸಲಾಗಿದೆ ಸುಮಾರು 70 ವರ್ಷಗಳ ಅಧಿಕಾರದ ಅವಧಿಯಲ್ಲಿ ದೇಶದ ಅಭಿವೃದ್ಧಿಗೆ ಕಾಂಗ್ರೆಸ್ ಕಾಣಿಕೆ ಅಪಾರವಾಗಿದೆ ಬಿಜೆಪಿಯಂತೆ ನೇರವಾಗಿ ಅಧಿಕಾರಕ್ಕೆ ಬಂದಿಲ್ಲ ಮುಂದೆ ಸಹ ಕಾಂಗ್ರೆಸ್ ಪಕ್ಷದೊಂದಿಗೆ ಜನರ ವಿಶ್ವಾಸ ಇದ್ದು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ನೇತೃತ್ವದಲ್ಲಿ ಸರ್ಕಾರ ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸಿ ನುಡಿದಂತೆ ನಡೆದಿದೆ ಎಂದು ಹೇಳಿದರು.

ಕಾಂಗ್ರೆಸ್ ಪಕ್ಷಕ್ಕೆ ಕಾರ್ಯಕರ್ತರೇ ಜೀವಾಳವಾಗಿದ್ದು ಕಾರ್ಯಕರ್ತರಿಂದ ನಾವು ಎಲ್ಲರೂ ನಾಯಕರಾಗಿದ್ದೇವೆ ಇಲ್ಲಿಗೆ ಬಂದಿದ್ದೇನೆ ಪಕ್ಷಕ್ಕಾಗಿ ದುಡಿದವರಿಗೆ ಹಂತಹಂತವಾಗಿ ಅವಕಾಶಗಳು ಸಿಗಲಿದೆ ಅಧಿಕಾರಕ್ಕಾಗಿ ಪಕ್ಷ ಅಲ್ಲ ಅನ್ನೋದು ತಿಳಿಯಬೇಕು ಜನರ ಹಿತಕ್ಕಾಗಿ ಪಕ್ಷವಾಗಬೇಕು ತಾಳ್ಮೆಯಿಂದ ಇದ್ದರೆ ಖಂಡಿತವಾಗಿಯೂ ಅವಕಾಶಗಳು ಸಿಗಲಿದೆ ಎಂದರು.

ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್ ಮಾತನಾಡಿ ಕಾಂಗ್ರೆಸ್ ಪಕ್ಷದಲ್ಲಿ ನಿಷ್ಠಾವಂತರಾಗಿದ್ದರೆ ಒಂದಲ್ಲ ಒಂದು ದಿನ ಅವಕಾಶಗಳು ಸಿಗಲಿದೆ ಎಂಬುದಕ್ಕೆ ಸಚಿವ ಕೆ.ಜೆ ಚಾರ್ಜ್ ಅವರು ಉದಾಹರಣೆ ಯುವ ಕಾಂಗ್ರೆಸ್ ಬ್ಲಾಕ್ ಮಟ್ಟದಿಂದ ರಾಷ್ಟ್ರೀಯ ಮಟ್ಟದಲ್ಲಿ ಕೆಲಸ ಮಾಡಿದ್ದು ಅವರಿಗೆ ಅವಕಾಶಗಳು ಬಂದಿವೆ ದೇಶದಲ್ಲಿ ಇಂದಿರಾಗಾಂಧಿ ಹಾಗೂ ರಾಜೀವ್ ಗಾಂಧಿ ಅವರ ಜನಪರ ಕಾರ್ಯಕ್ರಮಗಳನ್ನು ನೋಡಿ ಸಾಕಷ್ಟು ನಾಯಕರು ಕಾಂಗ್ರೆಸ್ ಪಕ್ಷ ಸೇರಲು ಪ್ತಮುಖ ಕಾರಣವಾಗಿ ಅಧಿಕಾರವಿರಲಿ ಇಲ್ಲದಿರಲಿ ಪಕ್ಷಕ್ಕಾಗಿ ದುಡಿಯುತ್ತಿದ್ದಾರೆ ಎಂದರು.

ಸಭೆಯಲ್ಲಿ ಶಾಸಕ ಕೊತ್ತೂರು ಮಂಜುನಾಥ್ ಮಾತನಾಡಿ ಕೋಲಾರ ಜಿಲ್ಲೆಯ ವಿದ್ಯುತ್‌ ಸಮಸ್ಯೆಗಳ ಪರಿಹಾರಕ್ಕೆ ಗಮನ ಹರಿಸಲು ಸಚಿವರನ್ನು ಕರೆಸಲಾಗಿದೆ ಜಿಲ್ಲೆಯಲ್ಲಿ ಹೊಸದಾಗಿ ಪವರ್ ಕೇಂದ್ರಗಳ ಸ್ಥಾಪನೆಗೆ ಒತ್ತು ನೀಡಿ ರೈತರ ಕಷ್ಟಗಳಿಗೆ ಪರಿಹಾರ ಕಂಡುಕೊಳ್ಳಲಾಗುತ್ತದೆ ಎಂದರು.

ಮಾಲೂರು ಶಾಸಕ ಕೆ.ವೈ ನಂಜೇಗೌಡ ಮಾತನಾಡಿ ಕಾಂಗ್ರೆಸ್ ಪಕ್ಷದಲ್ಲಿ ವೇಗವಾಗಿ ನಾಯಕ ಅಂತ ಗುರುತಿಸಿಕೊಂಡು ಅವಕಾಶಗಳಿಗಾಗಿ ಬರತ್ತಾರೆ ಪಕ್ಷದ ನಾಯಕನು ಎನಿಸಿಕೊಂಡವರಿಗೆ ಪಕ್ಷದ ಬಗ್ಗೆ ನಿಷ್ಠೆ ತಾಳ್ಮೆ ಇರಬೇಕು ಕಾಂಗ್ರೆಸ್ ಸರಕಾರವಿದೆ ಒಳ್ಳೆಯ ದಿನಗಳು ಬಂದಿವೆ ಅವಕಾಶಗಳು ಎಲ್ಲರಿಗೂ ಸಿಗುತ್ತವೆ ಎಂದರು,

ಈ ಸಂದರ್ಭದಲ್ಲಿ ಎಂಎಲ್ಸಿ ಎಂ.ಎಲ್ ಅನಿಲ್ ಕುಮಾರ್, ನಗರಸಭೆ ಅಧ್ಯಕ್ಷೆ ಲಕ್ಷ್ಮೀದೇವಮ್ಮ, ಉಪಾಧ್ಯಕ್ಷೆ ಸಂಗೀತಾ, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ವೈ ಶಿವಕುಮಾರ್, ಕುಡಾ ಅಧ್ಯಕ್ಷ ಮಹಮ್ಮದ್ ಹನೀಫ್, ಕಾಂಗ್ರೆಸ್ ಪರಾಜಿತ ಅಭ್ಯರ್ಥಿ ಕೆ.ವಿ ಗೌತಮ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಲಕ್ಷ್ಮೀನಾರಾಯಣ, ಕಾರ್ಯಾಧ್ಯಕ್ಷ ಊರಬಾಗಿಲು ಶ್ರೀನಿವಾಸ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಪ್ರಸಾದ್ ಬಾಬು, ಸೀಸಂದ್ರ ಗೋಪಾಲಗೌಡ, ಪದವೀಧರ ಘಟಕದ ಜಿಲ್ಲಾ ಅಧ್ಯಕ್ಷ ಪಿ.ಎಸ್ ಸುಧೀರ್, ಮುಖಂಡರಾದ ಜಯದೇವ್, ರವಿರಾಮಸ್ವಾಮಿ, ಒಬಿಸಿ ಮಂಜುನಾಥ್, ರತ್ನಮ್ಮ, ಮೈಲಾಂಡಹಳ್ಳಿ ಮುರಳಿ, ಅಶ್ವಥ್ ರೆಡ್ಡಿ, ರಾಮಯ್ಯ, ಮುಂತಾದವರು ಇದ್ದರು.

Ramesh Babu

Journalist

Recent Posts

ಅಂತರ್ಜಲ ಪ್ರಮಾಣ ವರ್ಷದಿಂದ ವರ್ಷಕ್ಕೆ ಕುಸಿತ: ಒಂದು ತಿಂಗಳಲ್ಲಿ 1.15 ಮೀ. ನೀರಿನ ಮಟ್ಟ ಕುಸಿತ: ಬೋರ್‌ವೆಲ್‌ಗಳು ಬರಿದಾದ ನೀರು: ರೈತ ಕಂಗಾಲು

ದೊಡ್ಡಬಳ್ಳಾಪುರದಲ್ಲಿ ಬೇಸಿಗೆಯ ತಾಪಮಾನ ದಿನೇ ದಿನೆ ಹೆಚ್ಚುತ್ತಿದೆ‌. ಈ ಹಿನ್ನೆಲೆ ತೀವ್ರ ಜಲಕ್ಷಾಮದ ಕಾರ್ಮೋಡ ಆವರಿಸಿದಂತಿದೆ‌. ವರ್ಷದಿಂದ ವರ್ಷಕ್ಕೆ ಏರುತ್ತಿರುವ…

16 minutes ago

ಹೃದಯವಿದ್ರಾವಕ ಘಟನೆ: ಒಂದೇ ದಿನ ಪತಿ-ಪತ್ನಿ ದಾರುಣ ಸಾವು

ಬೆಳಗಾವಿಯಲ್ಲಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಅರವಳ್ಳಿ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ಒಂದೇ ದಿನ ಪತಿ-ಪತ್ನಿ ದಾರುಣ ಸಾವನ್ನಪ್ಪಿದ್ದಾರೆ. ಅರವಳ್ಳಿ…

7 hours ago

ಮಾರಕಾಸ್ತ್ರಗಳಿಂದ ಶಿಕ್ಷಕಿಯ ಕ್ರೂರ ಹತ್ಯೆ: ಕೊಲೆ ಬಳಿಕ ದುಷ್ಕರ್ಮಿಗಳಿಂದ ಶವಕ್ಕೆ ಬೆಂಕಿ

ಕಲಬುರಗಿ ಜಿಲ್ಲೆಯಲ್ಲಿ ಸರ್ಕಾರಿ ಶಾಲಾ ಶಿಕ್ಷಕಿಯ ಮೇಲೆ ನಡೆದ ಕ್ರೂರ ಹತ್ಯೆ ಪ್ರಕರಣ ಎಲ್ಲರಲ್ಲೂ ಆತಂಕ ಮೂಡಿಸಿದೆ. ಕಮಲಾಪುರ ತಾಲೂಕಿನ…

8 hours ago

ಲಾಕಪ್ ಡೆತ್ ಮತ್ತು ಮರಣದಂಡನೆ….

ಸುಮಾರು ಆರು ವರ್ಷಗಳ ಹಿಂದೆ ಅಂದರೆ 2020ರಲ್ಲಿ ತಮಿಳುನಾಡಿನ ತೂತುಕುಡಿ ಜಿಲ್ಲೆಯಲ್ಲಿ ನಡೆದ ಅಮಾನುಷ ಲಾಕಪ್ ಡೆತ್ ಬಗ್ಗೆ ಬರೆದ…

9 hours ago

ತಂದೆ-ಮಗನ ಲಾಕಪ್ ಡೆತ್ ಕೇಸ್; ತಮಿಳುನಾಡಿನ 9 ಪೊಲೀಸರಿಗೆ ಗಲ್ಲು ಶಿಕ್ಷೆ

2020ರಲ್ಲಿ ತಮಿಳುನಾಡಿನಲ್ಲಿ ನಡೆದ ಸಾತಂಕುಲಂ ಕಸ್ಟಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮದ್ರಾಸ್ ಹೈಕೋರ್ಟ್‌ ಪೀಠವು 9 ಪೊಲೀಸ್ ಸಿಬ್ಬಂದಿಗೆ…

19 hours ago

ಇಂಧನ ತೈಲ ಮತ್ತು ಅನಿಲ ಪೂರೈಕೆ ಸಮಸ್ಯೆ – ರಾಜ್ಯದ ಜನತೆಗೆ ತೀವ್ರ ಸಂಕಷ್ಟ- ಸಚಿವ ಕೆ.ಎಚ್ ಮುನಿಯಪ್ಪ ಪ್ರತಿಕ್ರಿಯೆ

ರಾಜ್ಯದಲ್ಲಿ ಇಂಧನ ತೈಲ ಮತ್ತು ಅನಿಲ ಪೂರೈಕೆಯ ಸಮಸ್ಯೆ ಗಂಭೀರ ಸ್ವರೂಪ ಪಡೆದಿರುವ ಹಿನ್ನೆಲೆಯಲ್ಲಿ, ಆಹಾರ, ನಾಗರಿಕ ಸರಬರಾಜು ಮತ್ತು…

19 hours ago