ನಾಲ್ಕು ವರ್ಷದ ಮಗು ಮೇಲೆ ಬೀದಿ ನಾಯಿ ದಾಳಿ: ಬೀದಿನಾಯಿಗಳ ಹಾವಳಿಗೆ ಬೆದರಿದ ನಗರದ ಜನ: ಬೀದಿನಾಯಿಗಳ ಉಪಟಳ ತಪ್ಪಿಸುವಲ್ಲಿ ನಗರಸಭೆ ನಿರ್ಲಕ್ಷ್ಯ: ನಗರಸಭೆ ನಿರ್ಲಕ್ಷ್ಯ ಖಂಡಿಸಿದ ಜನ ಕಚೇರಿ ಬಳಿ ಧರಣಿ ಮಾಡುವ ಎಚ್ಚರಿಕೆ

ಮನೆ‌ ಬಳಿ‌ ತನ್ನ ಪಾಡಿಗೆ ತಾನು ಆಟವಾಡುತ್ತಿದ್ದ 4ವರ್ಷ ಮಗುವಿನ ಮೇಲೆ ಬೀದಿ‌ ನಾಯಿಗಳು‌ ದಾಳಿ ನಡೆಸಿದ್ದು, ಕುತ್ತಿಗೆ ಭಾಗಕ್ಕೆ ಬಾಯಿ ಹಾಕಿ ರಕ್ತ ಬರುವವ ಹಾಗೆ ಕಚ್ಚಿ, ಬೆನ್ನಿನ‌ ಮೇಲೆ ಎರಗಿ ಬಲವಾಗಿ ಪರಚಿ ಗಾಯ ಮಾಡಿರುವ ಘಟನೆ ನಗರದ ಗಾಣಿಗರಪೇಟೆಯ ವಾಸವಿ ಕಲ್ಯಾಣ ಮಂಟಪದಲ್ಲಿ ನಿನ್ನೆ ಸಂಜೆ ನಡೆದಿದೆ.

ನಗರದ ಗಾಣಿಗರಪೇಟೆಯ ನಿವಾಸಿ ರಾಜೀವ್ ರವರ ನಾಲ್ಕು ವರ್ಷದ ಮಗಳಾದ ಸ್ವೀಕೃತಿ ಮೇಲೆ ಬೀದಿ ನಾಯಿ ದಾಳಿ ಮಾಡಿದೆ.

ಮಗುವಿನ ಮೇಲೆ ನಾಯಿ ದಾಳಿ ಮಾಡುತ್ತಿರುವುದನ್ನ ನೋಡಿದ ಅಕ್ಕಪಕ್ಕದ ಮನೆಯವರು, ಕೂಡಲೇ ನಾಯಿ ದಾಳಿಯಿಂದ ಪಾರು ಮಾಡುವಷ್ಟರಲ್ಲಿ ಕುತ್ತಿಗೆಗೆ ಬಾಯಿ ಹಾಕಿಯೇ ಬಿಟ್ಟಿತ್ತು. ನಾಯಿ ಕಡಿತಕ್ಕೆ ತೀವ್ರ ರಕ್ತ ಬಂದಿದೆ. ಕೂಡಲೇ ಖಾಸಗಿ ಆಸ್ಪತ್ರೆಗೆ ರವಾನಿಸಿ ಚಿಕಿತ್ಸೆ ನೀಡಿಸಲಾಯಿತು. ಸದ್ಯ ಅದೃಷ್ಟವಶಾತ್ ನಾಯಿ ದಾಳಿಯಿಂದ ಪಾರಾಗಿರುವ ಮಗು.

ಮಗಳ ಮೇಲೆ ಬೀದಿ ನಾಯಿ ದಾಳಿ ಮಾಡಿರುವ ಬಗ್ಗೆ ಮಾತನಾಡಿದ ರಾಜೀವ್, ಒಂದು ವೇಳೆ ನಾಯಿ ಕುತ್ತಿಗೆ ಮುಂಭಾಗಕ್ಕೆ ಬಾಯಾಕಿದ್ದರೆ ಮಗಳ ಸ್ಥಿತಿ ಉಹಿಸಲೇ ಅಸಾಧ್ಯವಾಗಿತ್ತು ಎಂದು ಹೇಳಿದರು.

ನಗರದಲ್ಲಿ ಇತ್ತೀಚೆಗೆ ಬೀದಿನಾಯಿಗಳ ಹಾವಳಿ ಹೆಚ್ಚಾಗಿದೆ, ನಿನ್ನೆ ಶಾಂತಿನಗರದಲ್ಲಿ 5 ಜನರಿಗೆ, ರೋಜಿಪುರದಲ್ಲಿ 10 ಜನರಿಗೆ ನಾಯಿ ಕಚ್ಚಿರುವ ಪ್ರಕರಣಗಳು ಬೆಳಕಿಗೆ ಬಂದಿವೆ , ಕಳೆದ ತಿಂಗಳು 800 ಜನರಿಗೆ ನಾಯಿ ಕಚ್ಟಿದ ಪ್ರಕರಣಗಳು ಪತ್ತೆಯಾಗಿದೆ, ಬೀದಿನಾಯಿಗಳ ಉಪಟಳದಿಂದ ಜನರು ಕಂಗಲಾಗಿದ್ದಾರೆ, ನಾಯಿಗಳ ಹಾವಳಿಗೆ ಕಡಿವಾಣ ಹಾಕಬೇಕಿದ್ದ ನಗರಸಭೆ ಅಧಿಕಾರಿಗಳು ಕೈಕಟ್ಟಿ ಕುಳಿತು ನಿರ್ಲಕ್ಷ್ಯ ವಹಿಸುತ್ತಿದ್ದಾರೆ. ಬೀದಿ ನಾಯಿಗಳನ್ನ ಹಿಡಿಯಲು ಗುತ್ತಿಗೆದಾರರಿಗೆ ವರ್ಕ್ ಆರ್ಡರ್ ಕೊಡಲಾಗಿದೆ, ಆದರೆ ನಾಯಿ ಹಿಡಿಯುವ ಕೆಲಸ ಮಾತ್ರ ಪ್ರಾರಂಭವಾಗದಿರುವುದೇ ಈ ಅವಾಂತರಕ್ಕೆ ಕಾರಣವಾಗಿದೆ.

ನಗರಸಭೆಯ ನಿರ್ಲಕ್ಷ್ಯತೆಗೆ ಅಕ್ರೋಶಗೊಂಡಿರುವ ಸ್ಥಳೀಯರಾದ ರಮೇಶ್ ನಗರಸಭೆ ಕಚೇರಿ ಮುಂದೆ ಪ್ರತಿಭಟನೆ ಮಾಡುವ ಎಚ್ಚರಿಕೆಯನ್ನ ಸಹ ನೀಡಿದ್ದಾರೆ.

Ramesh Babu

Journalist

Recent Posts

ದೊಡ್ಡಬಳ್ಳಾಪುರದಲ್ಲಿ ರಾಯಲ್‌ ಓಕ್‌ ಫರ್ನಿಚರ್ ನೂತನ ಮಳಿಗೆ ಉದ್ಘಾಟನೆ

ಭಾರತದ ಅಗ್ರ ಪೀಠೋಪಕರಣ ಬ್ರ್ಯಾಂಡ್ ಆಗಿರುವ ರಾಯಲ್‌ ಓಕ್‌ ಫರ್ನಿಚರ್, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನೂತನ ಮಳಿಗೆಗೆ ಚಾಲನೆ…

2 hours ago

ರಾಜ್ಯದಲ್ಲಿ ಆಟೋ ಎಲ್‌ಪಿಜಿ ಕೊರತೆ ಇಲ್ಲ – ​ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯಿಂದ ಸ್ಪಷ್ಟನೆ

ಎಲ್ಲಾ ವಲಯಗಳಿಗೂ ಯಾವುದೇ ಅಡೆತಡೆ ಇಲ್ಲದೆ ಎಲ್.ಪಿ.ಜಿ‌ ಸರಬರಾಜು ಮಾಡಲಾಗುತ್ತಿದೆ ಅಲ್ಲದೇ ವಿಶೇಷವಾಗಿ *ಆಟೋ‌ ಎಲ್.ಪಿ.ಜಿ*.ಗೆ ಯಾವುದೇ ರೀತಿಯ ‌ಕೊರತೆ…

5 hours ago

Affordable Emotional Support Animal Letters for Enhanced Well-being

Cheap Emotional Support Animal Letter: Affordable ESA Documentation Affordable Emotional Support Animal Letters for Enhanced…

13 hours ago

ದೊಡ್ಡಬಳ್ಳಾಪುರದಲ್ಲಿ ಅದ್ಧೂರಿ ಶ್ರೀರಾಮೋತ್ಸವ‌:‌ ಹೆಲಿಕಾಪ್ಟರ್‌ನಿಂದ ಪುಷ್ಪಾರ್ಚನೆ: ಶ್ರೀರಾಮ ನಾಮದಲ್ಲಿ ಮಿಂದೆದ್ದ ಸಹಸ್ರಾರು ಜನ

ಶ್ರೀರಾಮನವಮಿ ಅಂಗವಾಗಿ ವಿಶ್ವ ಹಿಂದೂ ಪರಿಷತ್ ಬಜರಂಗ ದಳ ವತಿಯಿಂದ ದೊಡ್ಡಬಳ್ಳಾಪುರ ನಗರದಲ್ಲಿ ಮಾರ್ಚ್ 27 ರಿಂದ ಮೂರು ದಿನಗಳ…

17 hours ago

ಕೃಷಿ ಹೊಂಡದಲ್ಲಿ ಮುಳುಗಿ ನಾಲ್ವರು ಮಕ್ಕಳು ದಾರುಣ ಸಾವು

ಆಟವಾಡುತ್ತಾ ಈಜಲು ಹೋದ ನಾಲ್ವರು ಮಕ್ಕಳು ಕೃಷಿ ಹೊಂಡದಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ತಾಲ್ಲೂಕಿನ ನಗನೂರು…

20 hours ago

ಶ್ರೀರಾಮನವಮಿ ಅನ್ನ ಪ್ರಸಾದಿಂದ ಗ್ರಾಮಸ್ಥರಿಗೆ ಫುಡ್ ಪಾಯಿಸನ್…!!?: ಪ್ರಸಾದ ತಿಂದ ಬಹುತೇಕ ಜನ ಆಸ್ಪತ್ರೆ ಪಾಲು….!

ಶ್ರೀರಾಮನವಮಿ ಅನ್ನ ಪ್ರಸಾದಿಂದ ಗ್ರಾಮಸ್ಥರಿಗೆ ಫುಡ್ ಪಾಯಿಸನ್...!!?ಆಗಿದ್ದು, ಅನ್ನಪ್ರಸಾದ ಸೇವಿಸಿದ ಗ್ರಾಮಸ್ಥರಲ್ಲಿ ಬಹುತೇಕ ಜನ ಆಸ್ಪತ್ರೆ ಪಾಲಾಗಿದ್ದಾರೆ. ಆಸ್ಪತ್ರೆಯಲ್ಲಿ ದಾಖಲಾಗಿರುವ…

22 hours ago