ಮನೆ ಬಳಿ ತನ್ನ ಪಾಡಿಗೆ ತಾನು ಆಟವಾಡುತ್ತಿದ್ದ 4ವರ್ಷ ಮಗುವಿನ ಮೇಲೆ ಬೀದಿ ನಾಯಿಗಳು ದಾಳಿ ನಡೆಸಿದ್ದು, ಕುತ್ತಿಗೆ ಭಾಗಕ್ಕೆ ಬಾಯಿ ಹಾಕಿ ರಕ್ತ ಬರುವವ ಹಾಗೆ ಕಚ್ಚಿ, ಬೆನ್ನಿನ ಮೇಲೆ ಎರಗಿ ಬಲವಾಗಿ ಪರಚಿ ಗಾಯ ಮಾಡಿರುವ ಘಟನೆ ನಗರದ ಗಾಣಿಗರಪೇಟೆಯ ವಾಸವಿ ಕಲ್ಯಾಣ ಮಂಟಪದಲ್ಲಿ ನಿನ್ನೆ ಸಂಜೆ ನಡೆದಿದೆ.
ನಗರದ ಗಾಣಿಗರಪೇಟೆಯ ನಿವಾಸಿ ರಾಜೀವ್ ರವರ ನಾಲ್ಕು ವರ್ಷದ ಮಗಳಾದ ಸ್ವೀಕೃತಿ ಮೇಲೆ ಬೀದಿ ನಾಯಿ ದಾಳಿ ಮಾಡಿದೆ.
ಮಗುವಿನ ಮೇಲೆ ನಾಯಿ ದಾಳಿ ಮಾಡುತ್ತಿರುವುದನ್ನ ನೋಡಿದ ಅಕ್ಕಪಕ್ಕದ ಮನೆಯವರು, ಕೂಡಲೇ ನಾಯಿ ದಾಳಿಯಿಂದ ಪಾರು ಮಾಡುವಷ್ಟರಲ್ಲಿ ಕುತ್ತಿಗೆಗೆ ಬಾಯಿ ಹಾಕಿಯೇ ಬಿಟ್ಟಿತ್ತು. ನಾಯಿ ಕಡಿತಕ್ಕೆ ತೀವ್ರ ರಕ್ತ ಬಂದಿದೆ. ಕೂಡಲೇ ಖಾಸಗಿ ಆಸ್ಪತ್ರೆಗೆ ರವಾನಿಸಿ ಚಿಕಿತ್ಸೆ ನೀಡಿಸಲಾಯಿತು. ಸದ್ಯ ಅದೃಷ್ಟವಶಾತ್ ನಾಯಿ ದಾಳಿಯಿಂದ ಪಾರಾಗಿರುವ ಮಗು.
ಮಗಳ ಮೇಲೆ ಬೀದಿ ನಾಯಿ ದಾಳಿ ಮಾಡಿರುವ ಬಗ್ಗೆ ಮಾತನಾಡಿದ ರಾಜೀವ್, ಒಂದು ವೇಳೆ ನಾಯಿ ಕುತ್ತಿಗೆ ಮುಂಭಾಗಕ್ಕೆ ಬಾಯಾಕಿದ್ದರೆ ಮಗಳ ಸ್ಥಿತಿ ಉಹಿಸಲೇ ಅಸಾಧ್ಯವಾಗಿತ್ತು ಎಂದು ಹೇಳಿದರು.
ನಗರಸಭೆಯ ನಿರ್ಲಕ್ಷ್ಯತೆಗೆ ಅಕ್ರೋಶಗೊಂಡಿರುವ ಸ್ಥಳೀಯರಾದ ರಮೇಶ್ ನಗರಸಭೆ ಕಚೇರಿ ಮುಂದೆ ಪ್ರತಿಭಟನೆ ಮಾಡುವ ಎಚ್ಚರಿಕೆಯನ್ನ ಸಹ ನೀಡಿದ್ದಾರೆ.
ದೇವನಹಳ್ಳಿ: ತುರ್ತು ರಕ್ತದ ಅವಶ್ಯಕತೆ ಹಿನ್ನೆಲೆಯಲ್ಲಿ ರಕ್ತದಾನ ಮಾಡಲು ತೆರಳುತ್ತಿದ್ದ ಇಬ್ಬರು ಯುವಕರು ರಸ್ತೆ ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ಬೆಂಗಳೂರು…
ದೇವನಹಳ್ಳಿ: ತುರ್ತು ರಕ್ತದ ಅವಶ್ಯಕತೆ ಹಿನ್ನೆಲೆಯಲ್ಲಿ ರಕ್ತದಾನ ಮಾಡಲು ತೆರಳುತ್ತಿದ್ದ ಇಬ್ಬರು ಯುವಕರು ರಸ್ತೆ ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ಬೆಂಗಳೂರು…
ನಾವು ಅಕ್ರಮ ವಲಸಿಗರಲ್ಲ, ವಂಚಕರಲ್ಲ, ಈ ಮಣ್ಣಿನ ಮೂಲ ನಿವಾಸಿಗಳು. ದಯವಿಟ್ಟು ನಮ್ಮ ಅಸ್ತಿತ್ವವನ್ನು, ಸ್ವಾಭಿಮಾನವನ್ನು ಪ್ರಶ್ನಿಸಬೇಡಿ. ನಾವು ಭಾರತೀಯರು......…
ಬೆಳಗಾವಿ ಜಿಲ್ಲೆಯ ನೀರಾವರಿ ಯೋಜನೆಗಳ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ ಅವರು ಅಧಿಕಾರಿಗಳಿಗೆ…
ದೊಡ್ಡಬಳ್ಳಾಪುರ: ಪೊಲೀಸರೆಂದು ಪರಿಚಯಿಸಿಕೊಂಡು ವೃದ್ಧ ದಂಪತಿಯನ್ನು ನಂಬಿಸಿ ಚಿನ್ನಾಭರಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಮೂಲದ ಇಬ್ಬರು ಆರೋಪಿಗಳನ್ನು…
ಜಿಲ್ಲೆಯಲ್ಲಿ ಮಳೆ ಕೊರತೆ ಕೃಷಿ ಕ್ಷೇತ್ರದ ಜತೆಗೆ ಒಳನಾಡು ಮೀನುಗಾರಿಕೆಗೂ ತೀವ್ರ ಹೊಡೆತ ನೀಡಿದೆ. ಜಿಲ್ಲೆಯ ಬಹುತೇಕ ಕೆರೆಗಳು ನೀರಿಲ್ಲದೆ…