ದೊಡ್ಡಬಳ್ಳಾಪುರ: ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘದ (ಎಂ.ಪಿ.ಆರ್.ಎ.ಸಿ.ಎಸ್.) ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳಿಗೆ ಆ. 14ರಂದು ಚುನಾವಣೆ ನಡೆಯಲಿದೆ.
ಅಂದು ಬೆಳಿಗ್ಗೆ 10ರಿಂದ 11ರವರೆಗೆ ಸಂಘದ ಕಚೇರಿಯಲ್ಲಿ ನಾಮಪತ್ರ ಸಲ್ಲಿಕೆಗೆ ಅವಕಾಶ ಕಲ್ಪಿಸಲಾಗಿದೆ. ಬೆಳಿಗ್ಗೆ 11.30ಕ್ಕೆ ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಅಗತ್ಯವಿದ್ದಲ್ಲಿ ಮಧ್ಯಾಹ್ನ 12ರಿಂದ 12.30ರವರೆಗೆ ರಹಸ್ಯ ಮತದಾನ ನಡೆಸಲಾಗುವುದು. ಬಳಿಕ ತಕ್ಷಣವೇ ಮತ ಎಣಿಕೆ ನಡೆಸಿ ಫಲಿತಾಂಶ ಪ್ರಕಟಿಸಲಾಗುವುದು ಎಂದು ಚುನಾವಣಾಧಿಕಾರಿ ತಿಳಿಸಿದ್ದಾರೆ.
ಸಂಘದ 2026–2031ನೇ ಸಾಲಿನ ಆಡಳಿತ ಮಂಡಳಿಗೆ ಆ. 2ರಂದು ನಡೆದ ಚುನಾವಣೆಯಲ್ಲಿ ಬಿಜೆಪಿ–ಜೆಡಿಎಸ್ ಮೈತ್ರಿ ಬೆಂಬಲಿತ ಅಭ್ಯರ್ಥಿಗಳು 12 ಸ್ಥಾನಗಳ ಪೈಕಿ 9 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದು, ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು 3 ಸ್ಥಾನಗಳಲ್ಲಿ ಜಯಗಳಿಸಿದ್ದಾರೆ. ಹೀಗಾಗಿ ನೂತನ ಆಡಳಿತ ಮಂಡಳಿಯಲ್ಲಿ ಬಿಜೆಪಿ–ಜೆಡಿಎಸ್ ಮೈತ್ರಿಕೂಟ ಬಹುಮತ ಹೊಂದಿದೆ.
ಸಹಕಾರ ಸಂಘಗಳ ಕಾಯ್ದೆ–1960ರ ನಿಯಮಗಳನ್ವಯ ನೂತನವಾಗಿ ಆಯ್ಕೆಯಾಗಿರುವ ನಿರ್ದೇಶಕರಿಂದ ಅಧ್ಯಕ್ಷ ಹಾಗೂ ಉಪಾಧ್ಯಕ್ಷರನ್ನು ಆಯ್ಕೆ ಮಾಡುವ ಪ್ರಕ್ರಿಯೆ ನಡೆಯಲಿದೆ.
ಈ ಕುರಿತು ಪ್ರತಿಕ್ರಿಯಿಸಿರುವ ವಕೀಲ ಹಾಗೂ ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಪ್ರತಾಪ್, ಮೈತ್ರಿಕೂಟದ ಸಂಘಟಿತ ಕಾರ್ಯವೈಖರಿ, ಕಾರ್ಯಕರ್ತರ ಪರಿಶ್ರಮ ಹಾಗೂ ರೈತರು ಮತ್ತು ಷೇರುದಾರರು ವ್ಯಕ್ತಪಡಿಸಿದ ವಿಶ್ವಾಸದಿಂದ 9 ಸ್ಥಾನಗಳಲ್ಲಿ ಗೆಲುವು ಸಾಧಿಸಲಾಗಿದೆ. ನೂತನ ಆಡಳಿತ ಮಂಡಳಿ ಸಂಘದ ಅಭಿವೃದ್ಧಿ, ಪಾರದರ್ಶಕ ಆಡಳಿತ ಹಾಗೂ ರೈತರ ಹಿತಾಸಕ್ತಿಗೆ ಆದ್ಯತೆ ನೀಡಿ ಕಾರ್ಯನಿರ್ವಹಿಸಲಿದೆ ಎಂದು ತಿಳಿಸಿದ್ದಾರೆ.
ಲಂಚ ಪ್ರಕರಣ: ಮ್ಯೂನಿಷನ್ಸ್ ಇಂಡಿಯಾ ಕಾರ್ಯನಿರ್ವಾಹಕ ನಿರ್ದೇಶಕ ಸಿಬಿಐ ಬಲೆಗೆಲಂಚ ಸ್ವೀಕಾರ ಆರೋಪಕ್ಕೆ ಸಂಬಂಧಿಸಿದಂತೆ ಮ್ಯೂನಿಷನ್ಸ್ ಇಂಡಿಯಾ ಲಿಮಿಟೆಡ್ (MIL)…
ಸ್ಟಿಂಗ್ ಆಪರೇಷನ್ ಮಾಡಿಸುವುದಕ್ಕೆ ಮುಖ್ಯಮಂತ್ರಿಗಳಿಗೆ ತಲೆ ಕೆಟ್ಟಿದೆಯೇ? ಪದೇಪದೇ ಈ ವಿಚಾರದಲ್ಲಿ ಮುಖ್ಯಮಂತ್ರಿಗಳನ್ನು ಎಳೆದು ತರುವ ಎಚ್.ಡಿ. ಕುಮಾರಸ್ವಾಮಿ ಅವರಿಗೆ…
ದೊಡ್ಡಬಳ್ಳಾಪುರ: ಯಲಹಂಕ ಸಮೀಪದ ರಾಜಾನುಕುಂಟೆ ರೈಲ್ವೆ ನಿಲ್ದಾಣದ ಬಳಿ ರೈಲ್ವೆ ಹಳಿಗಳ ಮೇಲೆ ನಿಲ್ಲಿಸಿದ್ದ ಎರಡು ರೈಲು ಬೋಗಿಗಳಿಗೆ ಬೆಂಕಿ…
ದೊಡ್ಡಬಳ್ಳಾಪುರ ತಾಲ್ಲೂಕಿನ ಮಧುರೆ ಕೆರೆಯಲ್ಲಿ ಅಕ್ರಮವಾಗಿ ಮಣ್ಣು ತೆಗೆಯುವ ದಂಧೆ ನಡೆಯುತ್ತಿದೆ ಎಂಬ ಆರೋಪ ಕೇಳಿಬಂದಿದ್ದು, ಸುಮಾರು 35 ಟ್ರ್ಯಾಕ್ಟರ್ಗಳು…
ನಮ್ಮ ತೆರಿಗೆ ನಮ್ಮ ಹಕ್ಕು, ಈ ವಿಷಯದಲ್ಲಿ ರಾಜಕೀಯ ಮೀರಿ ವೈಜ್ಞಾನಿಕ ಸಮತೋಲನ ಸಾಧಿಸಬೇಕಾದುದು ಇಂದಿನ ತುರ್ತು ಅಗತ್ಯವಾಗಿದೆ..... ಕೇಂದ್ರದ…
ದೇವನಹಳ್ಳಿ: ನಿಧಾನವಾಗಿ ಸಾಗುತ್ತಿದ್ದ ಲಾರಿಗೆ ಹಿಂಬದಿಯಿಂದ ವೇಗವಾಗಿ ಬಂದ ರೇಂಜ್ ರೋವರ್ ಕಾರು ಡಿಕ್ಕಿ ಹೊಡೆದ ಪರಿಣಾಮ ಮೊಳಕಾಲ್ಮೂರು ಕ್ಷೇತ್ರದ…