
ಗೌರಿ ಗಣೇಶ ಮತ್ತು ಈದ್ ಮಿಲಾದ್ ಹಬ್ಬದ ಪ್ರಯುಕ್ತ ಆ.18ರ ಸೋಮವಾರ ಮಧ್ಯಾಹ್ನ 3:30ಕ್ಕೆ ಸರಿಯಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ, ಜಿಲ್ಲಾ ಪೊಲೀಸ್ ಇಲಾಖಾ ವತಿಯಿಂದ ದೊಡ್ಡಬಳ್ಳಾಪುರ ನಗರದ ಕೆಸಿಪಿ ಸರ್ಕಲ್ ಬಳಿ ಇರುವ ಮಣಿಶಂಕರ್ ಕಲ್ಯಾಣ ಮಂಟಪದಲ್ಲಿ ಶಾಂತಿ ಸಭೆಯನ್ನು ಆಯೋಜಿಸಲಾಗಿದೆ……
ಶಾಂತಿ ಸಭೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎ.ಬಿ.ಬಸವರಾಜು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಕೆ ಬಾಬಾ, ಡಿವೈಎಸ್ ಪಿ ರವಿ.ಪಿ, ಉಪವಿಭಾಗಾಧಿಕಾರಿ, ತಹಶೀಲ್ದಾರ್, ದೊಡ್ಡಬಳ್ಳಾಪುರ ಉಪವಿಭಾಗದ ಎಲ್ಲಾ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ ಪೆಕ್ಟರ್ ಗಳು, ನಗರಸಭೆ ಪೌರಾಯುಕ್ತ ಸೇರಿದಂತೆ ವಿವಿಧ ಇಲಾಖಾಧಿಕಾರಿಗಳು ಹಾಗೂ ಸಿಬ್ಬಂದಿ ಇರಲಿದ್ದಾರೆ.
ಶಾಂತಿ ಸಭೆಯಲ್ಲಿ ಹಬ್ಬ ಆಚರಣೆ ವೇಳೆ ಕಾನೂನು ಸುವ್ಯವಸ್ಥೆ ಪಾಲನೆ ಮಾಡುವುದು ಹೇಗೆ, ಶಾಂತಿ-ಸೌಹಾರ್ದಯುತವಾಗಿ, ಪರಿಸರಕ್ಕೆ ಹಾಗೂ ಸಮಾಜಕ್ಕೆ ಹಾನಿಯಾಗದಂತೆ ಹಬ್ಬವನ್ನು ಹೇಗೆ ಆಚರಣೆ ಮಾಡಬೇಕು, ಯಾವುದೇ ಅಹಿತಕರ ಘಟನೆಗಳಿಗೆ ಕಾರಣವಾಗದಂತೆ ಹಬ್ಬ ಆಚರಿಸುವ ಕುರಿತು ಮಾಹಿತಿ ನೀಡಲಾಗುವುದು.
ನಾಳೆ ನಡೆಯಲಿರುವ ಸಭೆಯಲ್ಲಿ ಸಮಸ್ತ ನಾಗರಿಕರು ಪಾಲ್ಗೊಂಡು ಜಿಲ್ಲಾಡಳಿತ ಹಾಗೂ ಜಿಲ್ಲಾ ಪೊಲೀಸ್ ಇಲಾಖೆ ನೀಡುವ ಕಾನೂನು ನಿಯಮಗಳ ಕುರಿತು ಮಾಹಿತಿ ಪಡೆದು ಹಬ್ಬ ಆಚರಣೆ ಸಂದರ್ಭದಲ್ಲಿ ಪಾಲನೆ ಮಾಡಬೇಕೆಂದು ಕೋರಲಾಗಿದೆ…..