ನಾಳೆ(ಆ.18, ಸೋಮವಾರ) ಗೌರಿ ಗಣೇಶ ಹಬ್ಬ, ಈದ್ ಮಿಲಾದ್ ಶಾಂತಿ ಸಭೆ

ಗೌರಿ ಗಣೇಶ ಮತ್ತು ಈದ್ ಮಿಲಾದ್ ಹಬ್ಬದ ಪ್ರಯುಕ್ತ ಆ.18ರ ಸೋಮವಾರ ಮಧ್ಯಾಹ್ನ 3:30ಕ್ಕೆ‌ ಸರಿಯಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ, ಜಿಲ್ಲಾ ಪೊಲೀಸ್ ಇಲಾಖಾ ವತಿಯಿಂದ ದೊಡ್ಡಬಳ್ಳಾಪುರ ನಗರದ ಕೆಸಿಪಿ ಸರ್ಕಲ್ ಬಳಿ ಇರುವ ಮಣಿಶಂಕರ್ ಕಲ್ಯಾಣ ಮಂಟಪದಲ್ಲಿ ಶಾಂತಿ ಸಭೆಯನ್ನು ಆಯೋಜಿಸಲಾಗಿದೆ……

ಶಾಂತಿ ಸಭೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎ.ಬಿ.ಬಸವರಾಜು, ಜಿಲ್ಲಾ‌ ಪೊಲೀಸ್ ವರಿಷ್ಠಾಧಿಕಾರಿ‌ ಸಿ.ಕೆ ಬಾಬಾ, ಡಿವೈಎಸ್ ಪಿ ರವಿ.ಪಿ, ಉಪವಿಭಾಗಾಧಿಕಾರಿ, ತಹಶೀಲ್ದಾರ್, ದೊಡ್ಡಬಳ್ಳಾಪುರ ಉಪವಿಭಾಗದ ಎಲ್ಲಾ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ ಪೆಕ್ಟರ್ ಗಳು, ನಗರಸಭೆ ಪೌರಾಯುಕ್ತ ಸೇರಿದಂತೆ ವಿವಿಧ ಇಲಾಖಾಧಿಕಾರಿಗಳು ಹಾಗೂ ಸಿಬ್ಬಂದಿ ಇರಲಿದ್ದಾರೆ.

ಶಾಂತಿ ಸಭೆಯಲ್ಲಿ ಹಬ್ಬ ಆಚರಣೆ ವೇಳೆ ಕಾನೂನು ಸುವ್ಯವಸ್ಥೆ ಪಾಲನೆ ಮಾಡುವುದು ಹೇಗೆ, ಶಾಂತಿ-ಸೌಹಾರ್ದಯುತವಾಗಿ, ಪರಿಸರಕ್ಕೆ ಹಾಗೂ ಸಮಾಜಕ್ಕೆ ಹಾನಿಯಾಗದಂತೆ ಹಬ್ಬವನ್ನು ಹೇಗೆ ಆಚರಣೆ ಮಾಡಬೇಕು, ಯಾವುದೇ ಅಹಿತಕರ ಘಟನೆಗಳಿಗೆ ಕಾರಣವಾಗದಂತೆ ಹಬ್ಬ ಆಚರಿಸುವ ಕುರಿತು ಮಾಹಿತಿ ನೀಡಲಾಗುವುದು.

ನಾಳೆ ನಡೆಯಲಿರುವ ಸಭೆಯಲ್ಲಿ ಸಮಸ್ತ ನಾಗರಿಕರು ಪಾಲ್ಗೊಂಡು ಜಿಲ್ಲಾಡಳಿತ ಹಾಗೂ ಜಿಲ್ಲಾ ಪೊಲೀಸ್ ಇಲಾಖೆ ನೀಡುವ ಕಾನೂನು‌ ನಿಯಮಗಳ ಕುರಿತು ಮಾಹಿತಿ ಪಡೆದು ಹಬ್ಬ ಆಚರಣೆ ಸಂದರ್ಭದಲ್ಲಿ ಪಾಲನೆ‌ ಮಾಡಬೇಕೆಂದು ಕೋರಲಾಗಿದೆ…..

Ramesh Babu

Journalist

Recent Posts

ಮಾರ್ಖಂಡೇಯ ಜಲಾಶಯದ ನೀರು ಪೋಲು ತಡೆಗೆ ಚಲುವರಾಯಸ್ವಾಮಿ ಖಡಕ್ ಸೂಚನೆ

ಬೆಳಗಾವಿ ಜಿಲ್ಲೆಯ ನೀರಾವರಿ ಯೋಜನೆಗಳ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಜಲಸಂಪನ್ಮೂಲ ಸಚಿವ ಎನ್‌. ಚಲುವರಾಯಸ್ವಾಮಿ ಅವರು ಅಧಿಕಾರಿಗಳಿಗೆ…

1 hour ago

ಪೊಲೀಸರೆಂದು ನಂಬಿಸಿ ವೃದ್ಧ ದಂಪತಿಗೆ ಚಿನ್ನಾಭರಣ ವಂಚನೆ: ಇಬ್ಬರು ಆರೋಪಿಗಳು ವಶಕ್ಕೆ: ದೂರುದಾರರಿಗೆ ಚಿನ್ನಾಭರಣ ಹಸ್ತಾಂತರ

ದೊಡ್ಡಬಳ್ಳಾಪುರ: ಪೊಲೀಸರೆಂದು ಪರಿಚಯಿಸಿಕೊಂಡು ವೃದ್ಧ ದಂಪತಿಯನ್ನು ನಂಬಿಸಿ ಚಿನ್ನಾಭರಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಮೂಲದ ಇಬ್ಬರು ಆರೋಪಿಗಳನ್ನು…

6 hours ago

ಮಳೆ ಕೊರತೆ; ಮತ್ಸ್ಯ ಕೃಷಿಗೂ ಹೊಡೆತ!

ಜಿಲ್ಲೆಯಲ್ಲಿ ಮಳೆ ಕೊರತೆ ಕೃಷಿ ಕ್ಷೇತ್ರದ ಜತೆಗೆ ಒಳನಾಡು ಮೀನುಗಾರಿಕೆಗೂ ತೀವ್ರ ಹೊಡೆತ ನೀಡಿದೆ. ಜಿಲ್ಲೆಯ ಬಹುತೇಕ ಕೆರೆಗಳು ನೀರಿಲ್ಲದೆ…

8 hours ago

ಬರಿದಾಗುತ್ತಿರುವ ಕರ್ನಾಟಕದ ಖಜಾನೆ…….

ಬರಿದಾಗುತ್ತಿರುವ ಕರ್ನಾಟಕದ ಖಜಾನೆ....... ಅಂದಿನ ಸಂಪಾದನೆ ಅಂದದಿಗೆ ಮಾತ್ರ ಎಂಬಂತಾಗಿದೆ...... ಬಹುತೇಕ ಕೆಳ ಮಧ್ಯಮ ವರ್ಗದ ಅಥವಾ ಬಡವರ ಮನೆಯ…

11 hours ago

ವಾಲ್ಮೀಕಿ ಜಯಂತಿ ರಜೆ ದಿನಾಂಕ ಬದಲು

ಬೆಂಗಳೂರು: ಮಹರ್ಷಿ ವಾಲ್ಮೀಕಿ ಜಯಂತಿಯ ಸಾರ್ವತ್ರಿಕ ರಜೆ ದಿನಾಂಕವನ್ನು ಬದಲಾಯಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಹಿಂದೆ…

24 hours ago

ನೇಯ್ಗೆ ಉದ್ಯಮದ ಕಚ್ಚಾ ವಸ್ತುಗಳ ಬೆಲೆ ಏರಿಕೆಗೆ ಖಂಡನೆ: ನೇಕಾರ ಹೋರಾಟ ಸಮಿತಿಯಿಂದ ಪ್ರತಿಭಟನೆ

ದಿನದಿಂದ ದಿನಕ್ಕೆ ನೇಕಾರಿಕೆ ಮಾಡುವುದು ಕಷ್ಟವಾಗುತ್ತಿದೆ. ಸೀರೆ ಉತ್ಪಾದನೆಯಲ್ಲಿ ಬಳಸುವ ಕಚ್ಚ ಸಾಮಗ್ರಿಗಳ ಬೆಲೆ ಗಗನಕ್ಕೆರುತ್ತಿದೆ ಕೂಡಲೇ ಸರ್ಕಾರ ಮಧ್ಯೆ…

1 day ago