ಸ್ಕಾಟ್‌ಲ್ಯಾಂಡ್ ಆಫ್ ಇಂಡಿಯಾ ಎಂದೇ ಕರೆಯಲ್ಪಡುವ ಮಡಿಕೇರಿಯಲ್ಲಿ ರಾತ್ರಿ ವೇಳೆ ಬೆಳಕಿನ ಅಡಚಣೆ ಬಹಳ ಕಡಿಮೆ. ಇದು ನಕ್ಷತ್ರಗಳು ಹಾಗೂ ಗ್ರಹಗಳ ವೀಕ್ಷಣೆಗೆ ಇರುವಂತಹ ಭಾರತ ದೇಶದ ಅತ್ಯುತ್ತಮ ಸ್ಥಳಗಳಲ್ಲಿ ಒಂದಾಗಿದ್ದು, ಇಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ವತಿಯಿಂದ ಸುಮಾರು 12.26 ಕೋಟಿ ರೂಪಾಯಿಗಳ ವೆಚ್ಚದಲ್ಲಿ ಅತ್ಯಾಧುನಿಕ ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರ ಹಾಗೂ ತಾರಾಲಯವನ್ನು ಸ್ಥಾಪಿಸಲಾಗುವುದು. ಇದರ ಶಂಕುಸ್ಥಾಪನೆಯನ್ನು ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ನಾಳೆ(ಜ.25) ನೆರವೇರಿಸಲಿದ್ದಾರೆ ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್ ಎಸ್ ಭೋಸರಾಜು ಅವರು ತಿಳಿಸಿದ್ದಾರೆ.
ಇಂದು ಈ ಬಗ್ಗೆ ಪತ್ರಿಕಾ ಹೇಳಿಕೆಯನ್ನು ನೀಡಿರುವ ಅವರು, ರಾಜ್ಯದಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನವನ್ನು ಪ್ರಚುರಪಡಿಸುವ ಉದ್ದೇಶದಿಂದ ಹಾಗೂ ವಿಜ್ಞಾನದ ಶಿಕ್ಷಣ, ವೈಚಾರಿಕ ಚಿಂತನೆ ಮೂಡಿಸುವುದಕ್ಕೆ ಹಾಗೂ ಖಗೋಳ ವಿಜ್ಞಾನ ವಿಷಯಗಳನ್ನು ವಿದ್ಯಾರ್ಥಿಗಳು ಮತ್ತು ಜನಸಾಮಾನ್ಯರಿಗೆ ಅರಿವು ಮೂಡಿಸುವ ದೃಷ್ಟಿಯಿಂದ ರಾಜ್ಯದ ಜಿಲ್ಲಾ ಕೇಂದ್ರಗಳಲ್ಲಿ ವಿಜ್ಞಾನ ಕೇಂದ್ರ ಮತ್ತು ತಾರಾಲಯಗಳನ್ನ ನಮ್ಮ ಇಲಾಖೆಯ ವತಿಯಿಂದ ಸ್ಥಾಪಿಸಲಾಗುತ್ತಿದೆ.
ಸ್ವಚ್ಚ ಆಕಾಶ (Clear Sky), ಹೆಚ್ಚಿನ ವಾಯಮಾಲಿನ್ಯ ಹಾಗೂ ಬೆಳಕಿನ ಅಡಚಣೆ ಇಲ್ಲದೇ ಇರುವಂತಹ ರಾತ್ರಿ ನಕ್ಷತ್ರ ವೀಕ್ಷಣೆಗೆ ಉತ್ತಮ ವಾತಾವರಣ ಕಲ್ಪಿಸುವಂತಹ ಪರಿಸರವನ್ನ ಕೊಡಗು ಜಿಲ್ಲೆ ಹೊಂದಿದೆ. ಹಿಮಾಚಲ ಪ್ರದೇಶದ ಸ್ಪಿಟಿ ಕಣಿವೆ, ಲಡಾಖ್‌ನ ಪಂಗೋಂಗ್ ತ್ಸೋ ಸರೋವರ, ಗುಜರಾತ್‌ನ ರನ್ ಅಫ್ ಕಚ್, ಅಂಡಮಾನ್ ಮತ್ತು ನಿಕೋಬಾರ್ ನ ನೀಲ್ ದ್ವೀಪ ಹಾಗೂ ಮಹಾರಾಷ್ಟ್ರ ಜಿಲ್ಲೆ ಮಾಥೇರಾನ್ ನಂತೆಯೇ ಕೊಡಗು ಜಿಲ್ಲೆಯ ಅತ್ಯಂತ ಪ್ರಶಸ್ತವಾದ ಜಾಗ ಎನ್ನುವ ಹೆಗ್ಗಳಿಕೆಯನ್ನು ಹೊಂದಿದೆ.
ಕೊಡಗು ಜಿಲ್ಲೆಯಲ್ಲಿ ಬಾಹ್ಯಾಕಾಶ ಪ್ರವಾಸಕ್ಕೆ ಇಂಬು ನೀಡುವ ಹಾಗೂ ಜಿಲ್ಲೆಯ ವಿದ್ಯಾರ್ಥಿಗಳಿಗೆ ಅನುಕೂಲ ಮಾಡಿಕೊಡುವ ಉದ್ದೇಶದಿಂದ ಈ ಯೋಜನೆಯನ್ನು ಕೈಗೆತ್ತಿಕೊಳ್ಳಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.
ಲಂಚ ಪ್ರಕರಣ: ಮ್ಯೂನಿಷನ್ಸ್ ಇಂಡಿಯಾ ಕಾರ್ಯನಿರ್ವಾಹಕ ನಿರ್ದೇಶಕ ಸಿಬಿಐ ಬಲೆಗೆಲಂಚ ಸ್ವೀಕಾರ ಆರೋಪಕ್ಕೆ ಸಂಬಂಧಿಸಿದಂತೆ ಮ್ಯೂನಿಷನ್ಸ್ ಇಂಡಿಯಾ ಲಿಮಿಟೆಡ್ (MIL)…
ಸ್ಟಿಂಗ್ ಆಪರೇಷನ್ ಮಾಡಿಸುವುದಕ್ಕೆ ಮುಖ್ಯಮಂತ್ರಿಗಳಿಗೆ ತಲೆ ಕೆಟ್ಟಿದೆಯೇ? ಪದೇಪದೇ ಈ ವಿಚಾರದಲ್ಲಿ ಮುಖ್ಯಮಂತ್ರಿಗಳನ್ನು ಎಳೆದು ತರುವ ಎಚ್.ಡಿ. ಕುಮಾರಸ್ವಾಮಿ ಅವರಿಗೆ…
ದೊಡ್ಡಬಳ್ಳಾಪುರ: ಯಲಹಂಕ ಸಮೀಪದ ರಾಜಾನುಕುಂಟೆ ರೈಲ್ವೆ ನಿಲ್ದಾಣದ ಬಳಿ ರೈಲ್ವೆ ಹಳಿಗಳ ಮೇಲೆ ನಿಲ್ಲಿಸಿದ್ದ ಎರಡು ರೈಲು ಬೋಗಿಗಳಿಗೆ ಬೆಂಕಿ…
ದೊಡ್ಡಬಳ್ಳಾಪುರ ತಾಲ್ಲೂಕಿನ ಮಧುರೆ ಕೆರೆಯಲ್ಲಿ ಅಕ್ರಮವಾಗಿ ಮಣ್ಣು ತೆಗೆಯುವ ದಂಧೆ ನಡೆಯುತ್ತಿದೆ ಎಂಬ ಆರೋಪ ಕೇಳಿಬಂದಿದ್ದು, ಸುಮಾರು 35 ಟ್ರ್ಯಾಕ್ಟರ್ಗಳು…
ನಮ್ಮ ತೆರಿಗೆ ನಮ್ಮ ಹಕ್ಕು, ಈ ವಿಷಯದಲ್ಲಿ ರಾಜಕೀಯ ಮೀರಿ ವೈಜ್ಞಾನಿಕ ಸಮತೋಲನ ಸಾಧಿಸಬೇಕಾದುದು ಇಂದಿನ ತುರ್ತು ಅಗತ್ಯವಾಗಿದೆ..... ಕೇಂದ್ರದ…
ದೇವನಹಳ್ಳಿ: ನಿಧಾನವಾಗಿ ಸಾಗುತ್ತಿದ್ದ ಲಾರಿಗೆ ಹಿಂಬದಿಯಿಂದ ವೇಗವಾಗಿ ಬಂದ ರೇಂಜ್ ರೋವರ್ ಕಾರು ಡಿಕ್ಕಿ ಹೊಡೆದ ಪರಿಣಾಮ ಮೊಳಕಾಲ್ಮೂರು ಕ್ಷೇತ್ರದ…